Wednesday, March 31, 2021

ಸರ್ಕಾರಿ ಅಧಿಕಾರಿಗಳು, ನೌಕರರು ತಮ್ಮದಲ್ಲದ ತಪ್ಪುಗಳಿಗೆ ಸಿಕ್ಕಿಹಾಕಿಕೊಳ್ಳದಿರಿ : ದೂದ್‌ಪೀರ್

ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್‌ರವರು ಪದೋನ್ನತ್ತಿಹೊಂದಿ ಉಡುಪಿಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಬುಧವಾರ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
   ಭದ್ರಾವತಿ, ಮಾ. ೩೧: ಸರ್ಕಾರಿ ಅಧಿಕಾರಿಗಳು, ನೌಕರರು ಬಹಳ ಎಚ್ಚರಿಕೆಯಿಂದ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು. ತಮ್ಮದಲ್ಲದ ತಪ್ಪುಗಳಿಗೆ ಸಿಕ್ಕಿಹಾಕಿಕೊಳ್ಳುವ ಪರಿಸ್ಥಿತಿಗೆ ಎಡೆ ಮಾಡಿಕೊಡಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್ ಹೇಳಿದರು.
   ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಬಹಳಷ್ಟು ಸಮಯದಲ್ಲಿ ಅಧಿಕಾರಿಗಳು ಮತ್ತು ನೌಕರರು ಬಲಿಪಶುಗಳಾಗುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ. ಇಂತಹ ಸಂದರ್ಭದಲ್ಲಿ ಬಹಳಷ್ಟು ಎಚ್ಚರಿಕೆ ವಹಿಸಬೇಕೆಂದರು.
    ಕನ್ನಡದಲ್ಲಿ ಸ್ನಾತಕೋತ್ತರ ಪರೀಕ್ಷೆ ಬರೆದು ಉತ್ತೀರ್ಣಗೊಂಡ ನಂತರ ಹಲವಾರು ಬಾರಿ ಕೆಪಿಎಸ್‌ಸಿ ಪರೀಕ್ಷೆ ಎದುರಿಸಿ ಕೊನೆಯ ಹಂತದಲ್ಲಿ ಆಯ್ಕೆಯಾದಾಗ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹುದ್ದೆ ಲಭಿಸಿತು. ಆ ನಂತರ ಈ ಇಲಾಖೆಯ ಕಾರ್ಯ ಚಟುವಟಿಕೆಗಳು ತಿಳಿಯಿತು. ಅಲ್ಲಿಯವರೆಗೂ ಇಲಾಖೆ ಕುರಿತು ಯಾವುದೇ ರೀತಿ ಮಾಹಿತಿ ಇರಲ್ಲಿಲ್ಲ ಎಂದು ಕರ್ತವ್ಯಕ್ಕೆ ಸೇರ್ಪಡೆಗೊಳ್ಳುವ ಮೊದಲಿನ ಘಟನೆಗಳನ್ನು ನೆನಪು ಮಾಡಿಕೊಂಡರು.  
    ಸಮಾಜ ಕಲ್ಯಾಣ ಇಲಾಖೆ ಇತರೆ ಇಲಾಖೆಗಳಿಗಿಂತ ವಿಭಿನ್ನವಾಗಿದೆ. ಈ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಬಹಳಷ್ಟು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದಲ್ಲಿ ಅನಾಹುತಗಳು ತಪ್ಪಿದ್ದಲ್ಲ. ಇಲ್ಲಿ ಕರ್ತವ್ಯ ನಿರ್ವಹಿಸುವ ಮೊದಲು ಭದ್ರಾವತಿ ಕುರಿತು ತಪ್ಪು ಅಭಿಪ್ರಾಯಗಳು ಕೇಳಿ ಬರುತ್ತಿದ್ದವು. ಆದರೆ ವಾಸ್ತವ್ಯವಾಗಿ ಇಲ್ಲಿನ ಜನರು ಬಹಳಷ್ಟು ಮಾನವೀಯತೆ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಕಳೆದ ೫ ವರ್ಷಗಳಿಂದ ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಯಿತು ಎಂದರು.
   ವ್ಯವಸ್ಥಾಪಕ ಎನ್. ಕೃಷ್ಣಪ್ಪ ಮಾತನಾಡಿ, ದೂದ್‌ಪೀರ್‌ರವರು ಓರ್ವ ಪ್ರಾಮಾಣಿಕತೆ, ಮಾನವೀಯತೆಯುಳ್ಳ ಅಧಿಕಾರಿಯಾಗಿದ್ದಾರೆ. ಈ ಕಾರಣಕ್ಕಾಗಿ ಅವರನ್ನು ಎಲ್ಲರೂ ಪ್ರೀತಿಯಿಂದ, ಗೌರವದಿಂದ ಕಾಣುವಂತಾಗಿದೆ. ಅವರು ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ನಂತರ ನಿರೀಕ್ಷಿಸಲಾರದಷ್ಟು ಮಟ್ಟಿಕ್ಕೆ ಇಲಾಖೆಯ ಚಿತ್ರಣವೇ ಬದಲಾಗಿದೆ. ಸ್ವಂತ ಕಟ್ಟಡದೊಂದಿಗೆ ಕಛೇರಿ, ಅಂಬೇಡ್ಕರ್ ಭವನ ನಿರ್ಮಾಣ ಸೇರಿದಂತೆ ಹಲವು ಪ್ರಮುಖ ಕಾರ್ಯಗಳು ನಡೆದಿವೆ. ಈ ಹಿನ್ನಲೆಯಲ್ಲಿ ಅವರು ಶಾಶ್ವತವಾಗಿ ಉಳಿದುಕೊಂಡಿದ್ದಾರೆ. ಅವರು ಪದೋನ್ನತ್ತಿ ಹೊಂದಿರುವುದು ಸಂತೋಷದ ವಿಷಯವಾಗಿದೆ. ಇನ್ನೂ ಉನ್ನತ ಸ್ಥಾನಕ್ಕೇರುವ ಮೂಲಕ ಉತ್ತಮ ಭವಿಷ್ಯ ಹೊಂದಲಿ ಎಂದು ಹಾರೈಸಿದರು.  
   ಪ್ರಮುಖರಾದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಡಿಎಸ್‌ಎಸ್ ತಾಲೂಕು ಸಂಚಾಲಕ ರಂಗನಾಥ್, ಶಿಕ್ಷಕರಾದ ಜುಂಜ್ಯಾನಾಯ್ಕ, ಸಿ. ಜಯಪ್ಪ ಹಾಗು ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕೋಮಾರನಹಳ್ಳಿ, ವೀರಾಪುರ ಗ್ರಾಮ ಪಂಚಾಯಿತಿ ಫಲಿತಾಂಶ ಪ್ರಕಟ

ಭದ್ರಾವತಿ, ಮಾ. ೩೧: ತಾಲೂಕಿನ ಕೋಮಾರನಹಳ್ಳಿ ಮತ್ತು ವೀರಾಪುರ ಎರಡು ಗ್ರಾಮ ಪಂಚಾಯಿತಿಗಳ ಚುನಾವಣೆಯ ಮತ ಎಣಿಕೆ ಬುಧವಾರ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಹೊರ ಬಿದ್ದಿದೆ.
ಕೋಮಾರನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೩ ಸ್ವಾನಗಳಿದ್ದು, ಮಂಜುನಾಥನಾಯ್ಕ, ಕೆ. ರವಿಕುಮಾರ್, ದೇವಮ್ಮ, ಸಿ.ಎಲ್ ನೇತ್ರಾವತಿ, ಎ. ಷಣ್ಮುಗ, ಸರಸ್ವತಿ ವಿಜಯಕುಮಾರ್, ರುದ್ರಮ್ಮ ಕೃಷ್ಣಮೂರ್ತಿ, ಸುನೀತ ಸತೀಶ್, ಆರ್. ಮಾಧುರಾವ್, ನಂದಿನಿಬಾಯಿ, ಮಂಜುಳ ಮತ್ತು ಆರ್. ಮಂಜುನಾಥ್ ಆಯ್ಕೆಯಾಗಿದ್ದಾರೆ.
ವೀರಾಪುರ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೧ ಸ್ಥಾನಗಳಿದ್ದು, ರಾಧ ಮಂಗಳಮ್ಮ, ಮಂಜಮ್ಮ ಜಡಿಯಪ್ಪ, ಜಬೀವುಲ್ಲಾ, ರೇಣುಕಮ್ಮ ರಾಜು, ಲೋಲಾಕ್ಷಿ, ಪಿ. ರಂಗಸ್ವಾಮಿ, ಎಂ. ವೆಂಕಟೇಶ್, ಎಂ.ಎಲ್ ಯಶೋಧರಯ್ಯ, ಜ್ಯೋತಿ, ಅಸಿಯಾಬಾನು ಮತ್ತು ಸೈಯದ್ ಜಬೀವುಲ್ಲಾ ಆಯ್ಕೆಯಾಗಿದ್ದಾರೆಂದು ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ತಿಳಿಸಿದ್ದಾರೆ.  

ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪಲಿ : ಪದ್ಮಾವತಿ ಸಂಜೀವ್‌ಕುಮಾರ್

ಇಲ್ಲಿಗೆ ಸಮೀಪದ ಶ್ರೀಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆಯ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ, ಪೈಂಟ್‌ರ್ ಸಂಘದ ಉದ್ಘಾಟನೆ, ಕೋವಿಡ್-೧೯ ಕುರಿತು ಆರೋಗ್ಯ ಜಾಗೃತಿ ಮತ್ತು ಮಹಿಳಾ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ತರೀಕೆರೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್ ಉದ್ಘಾಟಿಸಿದರು.
    ಭದ್ರವತಿ, ಮಾ. ೩೧: ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಸಂಘಟನೆ ಹೆಚ್ಚು ಕ್ರಿಯಾಶೀಲವಾಗಬೇಕೆಂದು ತರೀಕೆರೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್ ಹೇಳಿದರು.
   ಅವರು ಬುಧವಾರ ಇಲ್ಲಿಗೆ ಸಮೀಪದ ಶ್ರೀಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಭದ್ರಾವತಿ ತಾಲೂಕು ಶಾಖೆಯ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ, ಪೈಂಟ್‌ರ್ ಸಂಘದ ಉದ್ಘಾಟನೆ, ಕೋವಿಡ್-೧೯ ಕುರಿತು ಆರೋಗ್ಯ ಜಾಗೃತಿ ಮತ್ತು ಮಹಿಳಾ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
   ಕಟ್ಟಡ ಕಾರ್ಮಿಕರು ಇಂದಿಗೂ ಬಡತನ ರೇಖೆಯಿಂದ ಹೊರಬಂದಿಲ್ಲ. ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದಾರೆ. ಸರ್ಕಾರ ಕಟ್ಟಡ ಕಾರ್ಮಿಕರಿಗೆ ಹಲವು ಯೋಜನೆಗಳನ್ನು ರೂಪಿಸಿದೆ. ಆದರೂ ಸಹ ಯೋಜನೆಗಳು ಸಮರ್ಪಕವಾಗಿ ತಲುಪುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
    ವಿಶೇಷವಾಗಿ ಮಹಿಳಾ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗಿದೆ. ಮಹಿಳೆಯರು ಸಹ ಸಂಘಟನೆಯಲ್ಲಿ ತೊಡಗಿಸಿಕೊಂಡು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
    ಶ್ರೀ ಕ್ಷೇತ್ರದ ಮುರುಗೇಶ್ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸಂಘಟನೆ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್‌ಬಾಬು ಪ್ರಾಸ್ತಾವಿಕವಾಗಿ ಮಾತನಾಡಿ, ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ವಿವರಿಸಿದರು.
    ಜಿಲ್ಲಾಧ್ಯಕ್ಷ ಸುಬ್ರಮಣಿ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸಂಜಯ್‌ಕುಮಾರ್, ತಾಲೂಕು ಗೌರವಾಧ್ಯಕ್ಷ ಅಂತೋಣಿ ಕ್ರೂಸ್, ತಾಲೂಕು ಅಧ್ಯಕ್ಷ ನಾಗರಾಜ್, ಪೈಂಟರ್ ಸಂಘದ ಅಧ್ಯಕ್ಷ ಶಿವಣ್ಣ, ಮಹಿಳಾ ಘಟಕದ ಪದಾಧಿಕಾರಿಗಳಾದ ವಿಜಿಯಮ್ಮ, ಇಂಚರ, ಪ್ರಮುಖರಾದ ನಾರಾಯಣಸ್ವಾಮಿ, ಚಂದ್ರಶೇಖರ್, ಶಿವಣ್ಣ, ಶ್ರೀನಿವಾಸ್, ಷಣ್ಮುಖಂ, ಸಂಪತ್, ಅಭಿಲಾಶ್, ಮನೋಹರ್, ಸುಬ್ಬು, ಮಂಜುನಾಥ್, ರಘು, ಮಾರಸ್ವಾಮಿ, ಆರ್‍ಮುಗಂ, ಮಣಿಕಂಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, March 30, 2021

ಸಾಧನಾ ಮಹಿಳಾ ವೇದಿಕೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟ ಸಾಧನಾ ಮಹಿಳಾ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಿರಿಯ ಮಹಿಳೆ ಶಾಂತಮ್ಮ ಉದ್ಘಾಟಿಸಿದರು.
   ಭದ್ರಾವತಿ, ಮಾ. ೩೦: ತಾಲೂಕಿನ ಶಂಕರಘಟ್ಟ ಸಾಧನಾ ಮಹಿಳಾ ವೇದಿಕೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಕ್ರೀಡಾಕೂಟ ನಡೆಸಲಾಯಿತು.
ವೇದಿಕೆ ಅಧ್ಯಕ್ಷೆ ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಮಹಿಳೆ ಶಾಂತಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಜಯಕರ್ನಾಟಕ ಜಿಲ್ಲಾ ಉಪಾಧ್ಯಕ್ಷ ತ್ಯಾಗರಾಜ್, ಶಂಕರಘಟ್ಟ ಘಟಕದ ಅಧ್ಯಕ್ಷ ಡಿ.ಟಿ ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಗ್ರಾಮ ಪಂಚಾಯಿತಿಗಳಿಗೆ ನೂತನವಾಗಿ ಆಯ್ಕೆಯಾದ ಮಹಿಳಾ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಮೀನಾ ಪ್ರಾರ್ಥಿಸಿದರು. ಹಾಲಮ್ಮ ಸ್ವಾಗತಿಸಿ ಎಸ್. ಗುಣ ವಾರ್ಷಿಕ ವರದಿ ಮಂಡಿಸಿದರು. ಅಶ್ವಿನಿ ನಿರೂಪಿಸಿ, ಆಶಾ ವಂದಿಸಿದರು.

ಮಾ.೩೧ರಂದು ವಿಶ್ವ ರಂಗಭೂಮಿ ದಿನಾಚರಣೆ

ಭದ್ರಾವತಿ, ಮಾ. ೩೦: ಹವ್ಯಾಸಿ ರಂಗ ತಂಡಗಳ ಒಕ್ಕೂಟ ಪ್ರತಿನಿಧಿಸುವ ರಂಗ ಕಲಾವಿದರು ಸಂಘಟನೆ ವತಿಯಿಂದ ಮಾ.೩೧ರಂದು ಸಂಜೆ ೫.೩೦ಕ್ಕೆ ಸಿದ್ದಾರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
     ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಸಹಾಯಕ ನಿರ್ದೇಶಕ ಎಚ್. ಉಮೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪನ್ಯಾಸಕ ಡಾ. ಸಾಸ್ವೆಹಳ್ಳಿ ಸತೀಶ್, ವಿಕಸಂ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಲಲಿತ ಕಲಾ ಸಂಘದ ಅಧ್ಯಕ್ಷ ಎಚ್.ಬಿ ಉಮೇಶ್‌ರಾವ್, ಮಿತ್ರಕಲಾ ಮಂಡಳಿ ಅಧ್ಯಕ್ಷ ಎ. ಮೈಲಾರಪ್ಪ, ನವೋದಯ ಕಲಾಸಂಘದ ಅಧ್ಯಕ್ಷೆ ಡಾ. ಜಿ.ಎಂ ನಟರಾಜ್, ಶಾಂತಲಾ ಕಲಾವೇದಿಕೆ ಅಧ್ಯಕ್ಷೆ ಯಶೋಧ ವೀರಭದ್ರಪ್ಪ, ಅಪರಂಜಿ ಅಭಿನಯ ಶಾಲೆ ಸಂಸ್ಥಾಪಕ ಅಪರಂಜಿ ಶಿವರಾಜ್, ಹಿರಿಯ ರಂಗ ಕಲಾವಿದ ಕೆ.ಬಿ ಕಪನಿಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಮಾ.೩೧ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಭದ್ರಾವತಿ, ಮಾ. ೩೦: ತಾಲೂಕು ಮಹಿಳಾ ಒಕ್ಕಲಿಗರ ವೇದಿಕೆ ವತಿಯಿಂದ ಮಾ.೩೧ರ ಬುಧವಾರ ಅಪ್ಪರ್‌ಹುತ್ತಾ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
     ಶ್ರೀ ಕ್ಷೇತ್ರ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಉದ್ಘಾಟಿಸಲಿದ್ದಾರೆ.
    ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವಾಧ್ಯಕ್ಷೆ ಶಾರದ ಅಪ್ಪಾಜಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಕೆಎಸ್‌ಆರ್‌ಟಿಸಿ ಹಿರಿಯ ಘಟಕ ವ್ಯವಸ್ಥಾಪಕಿ ಅಂಬಿಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಮಾಜ ಸೇವಕಿ, ಶಿಕ್ಷಕಿ ಅನಿತ ಮೇರಿ ಹಾಗು ಸುಧಾರವರಿಗೆ ಸನ್ಮಾನ ನಡೆಯಲಿದೆ.

ಮಹಿಳೆಯರು ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ : ಡಾ. ರಕ್ಷಾ ಯು. ರಾವ್

ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ . ಸಮಾಜದ ಹಿರಿಯ ಸದಸ್ಯರಾದ ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
  ಭದ್ರಾವತಿ, ಮಾ. ೩೦: ಮಹಿಳೆಯರು ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕೆಂದು ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ತಜ್ಞೆ ಡಾ. ರಕ್ಷಾ ಯು. ರಾವ್ ತಿಳಿಸಿದರು.
    ಅವರು ಮಂಗಳವಾರ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
   ಮಹಿಳೆಯರಲ್ಲಿ ಗರ್ಭಕೋಶದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದರಿಂದಾಗಿ ಆರೋಗ್ಯದ ಮೇಲೆ ಹಲವು ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿವೆ. ಈ ಹಿನ್ನಲೆಯಲ್ಲಿ ಗರ್ಭಕೋಶದ ಆರೋಗ್ಯದ ಬಗ್ಗೆ ಹೆಚ್ಚಿನ ತಿಳುವಳಿಕೆ ಹೊಂದುವ ಜೊತೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಅಗತ್ಯ ಎಂದರು.
   ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತ ಮನೋಹರ್ ಉದ್ಘಾಟಿಸಿದರು. ಸಮಾಜದ ಹಿರಿಯ ಸದಸ್ಯರಾದ ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
   ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶೋಭ ಗಂಗರಾಜ್, ಖಜಾಂಚಿ ಜಯಂತಿ ಶೇಟ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕಮಲಕುಮಾರಿ, ಡಾ. ವೀಣಾ ಎಸ್ ಭಟ್, ಅನ್ನಪೂರ್ಣಸತೀಶ್, ಇಂದಿರಾ ರಮೇಶ್, ರೂಪರಾವ್, ಯಶೋಧ ವೀರಭದ್ರಪ್ಪ, ಚಂದ್ರಕಲಾ ವರದರಾಜ್, ಶಕುಂತಲ ರವಿಕುಮಾರ್, ಭಾಗ್ಯ ನಿಜಗುಣ, ಶಾರದ ಶ್ರೀನಿವಾಸ್, ಕಮಲರಾಯ್ಕರ್ ಸೇರಿದಂತೆ ಬಹುತೇಕ ಸದಸ್ಯರು ಪಾಲ್ಗೊಂಡಿದ್ದರು.

ಚಿತ್ರ: ಡಿ೩೦-ಬಿಡಿವಿಟಿ೨



ಚಂದ್ರಶೇಖರ್ ತೋರಣ್ಣಘಟ್ಟರವರ ಹೋರಾಟದ ಗುಣಗಳು ಇತರರಿಗೆ ಸ್ಪೂರ್ತಿದಾಯಕ : ಕೈದಾಳ್ ಕೃಷ್ಣಮೂರ್ತಿ


ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಚಂದ್ರ ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕೈದಾಳ್ ಕೃಷ್ಣಮೂರ್ತಿರವರ ಚಂದ್ರಶಿಕಾರಿ ಪುಸ್ತಕ ಬಿಡುಗಡೆಗೊಳಿಸಲಾಯಿತು.
   ಭದ್ರಾವತಿ, ಮಾ. ೩೦: ಚಂದ್ರಶೇಖರ್ ತೋರಣಘಟ್ಟರವರು ಸಮಾಜಮುಖಿ ಚಿಂತನೆಗಳೊಂದಿಗೆ ಹಲವಾರು ಚಳುವಳಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಇತರರಿಗೆ ಸ್ಫೂರ್ತಿದಾಯಕರಾಗಿದ್ದರು ಎಂದು ಚಂದ್ರಶಿಕಾರಿ ಪುಸ್ತಕದ ಸಂಪಾದಕ ಕೈದಾಳ್ ಕೃಷ್ಣಮೂರ್ತಿ ತಿಳಿಸಿದರು.
   ಅವರು ಮಂಗಳವಾರ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಚಂದ್ರ ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
   ಹೋರಾಟಗಾರರಲ್ಲಿ ಸದಾಕಾಲ ಸಮಾಜಮುಖಿ ಚಿಂತನೆಗಳಿರಬೇಕು. ಎಲ್ಲರನ್ನು ಸಂಘಟಿಸುವ ಮನೋಭಾವವಿರಬೇಕು. ಯಾವುದೇ ರೀತಿಯ ಹೋರಾಟಕ್ಕೂ ಸಿದ್ದರಿರಬೇಕು. ಆಗ ಮಾತ್ರ ಹೋರಾಟಗಳು ಅವರಿಗೆ ಯಶಸ್ವಿ ತಂದುಕೊಡುತ್ತವೆ. ಈ ನಿಟ್ಟಿನಲ್ಲಿ ತೋರಣಘಟ್ಟರವರು ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು.
   ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ, ಪ್ರಮುಖರಾದ ಚಿತ್ರದುರ್ಗದ ಉಪನ್ಯಾಸಕಿ ಸಿ.ವೈ ಯಶೋಧ, ಮೈಸೂರು ಕಂದೇಗಾಲ ಶಿವಣ್ಣ, ಸಾಮಾಜಿಕ ಹೋರಾಟಗಾರ ದೇವೇಂದ್ರಪ್ಪ, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ, ಪ್ರಜಾಪ್ರತಿನಿಧಿ ಸುರೇಶ್ ಸೇರಿದಂತೆ ಇನ್ನಿತರರು ಚಳುವಳಿಗಳಲ್ಲಿ ತೋರಣಘಟ್ಟರವರೊಂದಿಗಿನ ತಮ್ಮ ಅನುಭವಗಳನ್ನು ಹಂಚಿಕೊಂಡರು.
   ಜಿ. ರಾಜು, ಕಾಳುವರಕ್, ಶ್ರೀನಿವಾಸ್, ಡಿ. ರಾಜು, ಡಾ. ಮಂಜುನಾಥ್, ಚನ್ನಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕಾಳಿಂಗನಹಳ್ಳಿ ಎಂ. ಶಂಕ್ರಣ್ಣ ಅಧ್ಯಕ್ಷತೆ ವಹಿಸಿದ್ದರು.


ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಚಂದ್ರ ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಚಿತ್ರದುರ್ಗದ ಉಪನ್ಯಾಸಕಿ ಸಿ.ವೈ ಯಶೋಧ, ಮೈಸೂರು ಕಂದೇಗಾಲ ಶಿವಣ್ಣ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.

Monday, March 29, 2021

ಮಾ.೩೦ರಂದು ಕೆಂಪು ನಮನ, ಪುಸ್ತಕ ಬಿಡುಗಡೆ

ಭದ್ರಾವತಿ, ಮಾ. ೩೦: ಹೋರಾಟಗಾರ ಚಂದ್ರಶೇಖರ್ ತೋರಣಘಟ್ಟರಿಗೆ ಕೆಂಪು ನಮನ ಹಾಗು ಚಂದ್ರಶಿಕಾರಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಾ.೩೦ರಂದು ಬೆಳಿಗ್ಗೆ ೧೦.೩೦ಕ್ಕೆ ನ್ಯೂಟೌನ್ ಲಯನ್ಸ್‌ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.
    ಪ್ರಮುಖರಾದ ಚಿತ್ರದುರ್ಗದ ಉಪನ್ಯಾಸಕಿ ಸಿ.ವೈ ಯಶೋಧ, ಮೈಸೂರು ಕಂದೇಗಾಲ ಶಿವಣ್ಣ, ಸಾಮಾಜಿಕ ಹೋರಾಟಗಾರ ದೇವೇಂದ್ರಪ್ಪ, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ, ಜಿಲ್ಲಾ ಸಂಘಟನಾ ಸಂಚಾಲಕ ರಾಜ್‌ಕುಮಾರ್, ಕೈದಾಳ್ ಕೃಷ್ಣಮೂರ್ತಿ, ಸುರೇಶ್, ಜಿ. ರಾಜು, ಕಾಳುವರಕ್, ಕೈದಾಳ್ ಕೃಷ್ಣಮೂರ್ತಿ, ಡಿ. ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
   ಕಾಳಿಂಗನಹಳ್ಳಿ ಎಂ. ಶಂಕ್ರಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಮಾ.೩೦ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಭದ್ರಾವತಿ, ಮಾ. ೨೯: ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾ.೩೦ರಂದು ಮಧ್ಯಾಹ್ನ ೩.೩೦ಕ್ಕೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ನಗರಸಭೆ ಪೌರಾಯುಕ್ತ ಮನೋಹರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ತಜ್ಞೆ ರಕ್ಷಾ ಯು. ರಾವ್ ಉಪನ್ಯಾಸ ನೀಡಲಿದ್ದು, ವಸುಧಾ ಮುಕುಂದ್, ರಾಧ ಕೆ. ಭಟ್, ಪುಷ್ಪ ಕೃಷ್ಣಮೂರ್ತಿ, ಶೋಭಾ ಗಂಗರಾಜ್ ಮತ್ತು ಜಯಂತಿ ಶೇಟ್ ಉಪಸ್ಥಿತರಿರುವರು.

ಎರಡು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ : ಶೇ.೮೪.೨೯ರಷ್ಟು ಮತದಾನ

ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಯೊಂದರ ಸೋಮವಾರ ಮತದಾನದ ವೇಳೆ ಜನಸಂದಣಿ ಉಂಟಾಗದಂತೆ ಪೊಲೀಸರು ಎಚ್ಚರ ವಹಿಸುತ್ತಿರುವುದು.  

   ಭದ್ರಾವತಿ, ಮಾ. ೨೯: ತಾಲೂಕಿನ ಕೊಮಾರನಹಳ್ಳಿ ಮತ್ತು ವೀರಾಪುರ ಗ್ರಾಮ ಪಂಚಾಯಿತಿಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ.೮೪.೨೯ರಷ್ಟು ಮತದಾನ ನಡೆದಿದೆ.
    ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು ೬ ಮತಗಟ್ಟೆಗಳಲ್ಲಿ ಹಾಗು ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿ ೪ ಮತಗಟ್ಟೆಗಳಲ್ಲಿ ನಡೆದ ಮತದಾನದಲ್ಲಿ ಒಟ್ಟು ೭೧೧೬ ಮತದಾರರ ಪೈಕಿ ೫೯೯೮ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
   ಕೊಮಾರನಹಳ್ಳಿ ಮತಗಟ್ಟೆ ೯೨ರಲ್ಲಿ ಒಟ್ಟು ೯೬೧ ಮತದಾರರ ಪೈಕಿ ಒಟ್ಟು ೭೫೪ ಮತದಾರರು ಹಕ್ಕು ಚಲಾಯಿಸಿದ್ದು, ಅತಿ ಕಡಿಮೆ ಮತದಾನವಾದ ಮತಗಟ್ಟೆ ಇದಾಗಿದೆ. ಮತಗಟ್ಟೆ ೯೫ರಲ್ಲಿ ಒಟ್ಟು ೨೫೧ ಮತದಾರರ ಪೈಕಿ ೨೩೧ ಮತದಾರರು ಹಕ್ಕು ಚಲಾಯಿಸಿದ್ದು, ಅತಿ ಹೆಚ್ಚು ಮತದಾನವಾದ ಮತಗಟ್ಟೆ ಇದಾಗಿದೆ.
    ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ಒಟ್ಟು ೧೩ ಸ್ಥಾನಗಳಿಗೆ ೪೩ ಮಂದಿ ಹಾಗು ವೀರಾಪುರ ಗ್ರಾಮ ಪಂಚಾಯಿತಿ ಒಟ್ಟು ೧೧ ಸ್ಥಾನಗಳಿಗೆ ೩೦ ಮಂದಿ ಸ್ಪರ್ಧಿಸಿದ್ದಾರೆ. ಈ ಎರಡು ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯಗೊಳ್ಳದ ಕಾರಣ ಈ ಹಿಂದೆ ಚುನಾವಣೆ ನಡೆದಿರಲಿಲ್ಲ.
   ಮತಗಟ್ಟೆ ಬಳಿ ಜನಸಂದಣಿಗೆ ಅವಕಾಶ ನೀಡದಂತೆ ಎಚ್ಚರ ವಹಿಸಲಾಗಿತ್ತು. ಕೋವಿಡ್-೧೯ರ ಹಿನ್ನಲೆಯಲ್ಲಿ ಎಲ್ಲಾ ಮತದಾರರಿಗೆ ಥರ್ಮಲ್ ಸ್ಕೀನಿಂಗ್ ನಡೆಸಲಾಯಿತು. ಜೊತೆಗೆ ಕಡ್ಡಾಯವಾಗಿ ಸ್ಯಾನಿಟೈಜರ್ ಹಾಗು ಮಾಸ್ಕ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮತದಾರರಿಗೆ ಸೂಚಿಸಲಾಯಿತು.  

ಅದ್ದೂರಿಯಾಗಿ ಜರುಗಿದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ

ಭದ್ರಾವತಿ ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಸೋಮವಾರ ಅದ್ದೂರಿಯಾಗಿ ಜರುಗಿತು.

   ಭದ್ರಾವತಿ, ಮಾ. ೨೯: ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ಸೋಮವಾರ ಅದ್ದೂರಿಯಾಗಿ ಜರುಗಿತು.
   ಪ್ರತಿವರ್ಷದಂತೆ ಈ ಬಾರಿ ಸಹ ವೈಭವಯುತವಾಗಿ ಸ್ವಾಮಿಯ ರಥೋತ್ಸವ ಆರಂಭಗೊಂಡಿದ್ದು, ಭಕ್ತಾಧಿಗಳು ಸ್ವಾಮಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಿಸಿದರು. ಭಜನಾ ತಂಡಗಳಿಂದ ಭಜನೆ ನಡೆಯಿತು.
   ಮಧ್ಯಾಹ್ನ ಸುಮಾರು ೧೨ ಗಂಟೆಗೆ ದೇವಸ್ಥಾನ ಆವರಣದಿಂದ ಆರಂಭಗೊಂಡ ರಥೋತ್ಸವ ಅಗಸೆ ಬಾಗಿಲಿನವರೆಗೂ ಸಾಗಿತು. ಭಕ್ತಾಧಿಗಳಿಗೆ ಪಾನಕ, ಮಜ್ಜಿಗೆ ವಿತರಿಸಲಾಯಿತು.
ದೇವಸ್ಥಾನದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಪೂಜೆ, ಅಲಂಕಾರ ಕೈಗೊಳ್ಳಲಾಗಿತ್ತು. ಕೋವಿಡ್-೧೯ ಭೀತಿ ನಡುವೆಯೂ ನಗರ ಹಾಗು ಗ್ರಾಮಾಂತರ ಭಾಗಗಳಿಂದ ಭಕ್ತಾಧಿಗಳು ಆಗಮಿಸಿದ್ದರು.

ಸುಮಾರು ೨ ವರ್ಷಗಳ ನಂತರ ನಗರಸಭೆಗೆ ಚುನಾವಣೆ

ಏ.೮ರಿಂದ ನಾಮಪತ್ರ ಸಲ್ಲಿಕೆ, ಏ.೨೭ರಂದು ಮತದಾನ

   ಭದ್ರಾವತಿ, ಮಾ. ೨೯: ಕೊನೆಗೂ ಸುಮಾರು ೨ ವರ್ಷಗಳ ನಂತರ ಇಲ್ಲಿನ ನಗರಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಒಟ್ಟು ೩೫ ವಾರ್ಡ್‌ಗಳಿಗೆ ಏ.೨೭ರಂದು ಚುನಾವಣೆ ನಡೆಯಲಿದೆ.
ಏ.೮ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏ.೧೫ ಕೊನೆಯ ದಿನವಾಗಿದೆ. ಏ.೧೬ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.೧೯ ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ.
    ಏ.೨೭ರಂದು ಮತದಾನ ನಡೆಯಲಿದ್ದು, ಏ.೩೦ರಂದು ಮತ ಎಣಿಕೆ ನಡೆಯಲಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗ ಸೋಮವಾರ ಆದೇಶ ಹೊರಡಿಸಿದ್ದು, ರಾಜ್ಯದ ೭ ನಗರಸಭೆ, ೩ ಪುರಸಭೆ ಹಾಗು ೨ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆಗೆ ಘೋಷಿಸಿದೆ.  
     ಮೀಸಲಾತಿಗೊಂದಲದಿಂದ ಚುನಾವಣೆ ವಿಳಂಬ:
  ನಗರಸಭೆ ೩೫ ವಾರ್ಡ್‌ಗಳ ಮೀಸಲಾತಿ ಸಂಬಂಧ ಹಲವು ಬಾರಿ ತಕರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ವಿಚಾರಣೆ ನಡೆದು ಅಂತಿಮ ತೀರ್ಪು ಪ್ರಕಟವಾಗಿ ಸರ್ಕಾರ ಪುನಃ ಹೊಸದಾಗಿ ಮಿಸಲಾತಿ ನಿಗದಿಪಡಿಸಿದ ಹಿನ್ನಲೆಯಲ್ಲಿ ಚುನಾವಣೆ ಸುಮಾರು ೨ ವರ್ಷ ವಿಳಂಬವಾಗಿದೆ. ಹಲವು ಮಂದಿ ನಗರಸಭೆ ಚುನಾವಣೆ ಸ್ಪರ್ಧಿಸಲು ಎದುರು ನೋಡುತ್ತಿದ್ದು, ಇದೀಗ ಪ್ರಮುಖ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಚಿನ್ನದ ಮೇಲೆ ಸಾಲ ನೀಡುವ ಸಂಸ್ಥೆಗಳಿಂದ ಗ್ರಾಹಕರಿಗೆ ವಂಚನೆ : ಸೂಕ್ತ ಕಾನೂನು ಕ್ರಮ ಕೈಗೊಳ್ಳಿ

ಮುಖ್ಯಮಂತ್ರಿಗಳಿಗೆ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಮನವಿ


ಚಿನ್ನದ ಮೇಲೆ ಸಾಲ ನೀಡುವ ಸಂಸ್ಥೆಗಳಿಂದ ರಾಜ್ಯದ ಬಡ ಗ್ರಾಹಕರಿಗೆ ವಂಚನೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು  ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಸೋಮವಾರ ಭದ್ರಾವತಿಯಲ್ಲಿ ಏಕಾಂಗಿ ಹೋರಾಟದೊಂದಿಗೆ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಿ ಒತ್ತಾಯಿಸಿದರು.
   ಭದ್ರಾವತಿ, ಮಾ. ೨೯: ಚಿನ್ನದ ಮೇಲೆ ಸಾಲ ನೀಡುವ ಸಂಸ್ಥೆಗಳಿಂದ ರಾಜ್ಯದ ಬಡ ಗ್ರಾಹಕರಿಗೆ ವಂಚನೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು  ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಸೋಮವಾರ ಏಕಾಂಗಿ ಹೋರಾಟದೊಂದಿಗೆ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಿ ಒತ್ತಾಯಿಸಿದರು.
    ಚಿನ್ನದ ಮೇಲೆ ಸಾಲ ನೀಡುವ ಸಂಸ್ಥೆಗಳು ಪ್ರತಿ ತಾಲೂಕಿಗೆ ೪ರಂತೆ ರಾಜ್ಯಾದ್ಯಂತ ಸುಮಾರು ೧ ಸಾವಿರಕ್ಕೂ ಅಧಿಕ ಸಂಸ್ಥೆಗಳಿದ್ದು, ಪ್ರಮುಖವಾಗಿ ಮಣಪುರಂ ಗೋಲ್ಡ್, ಮುತ್ತೂಟ್, ಐ.ಐ.ಎಫ್.ಎಲ್ ಸೇರಿದಂತೆ ಇನ್ನಿತರ ಖಾಸಗಿ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ಸಂಸ್ಥೆಗಳಲ್ಲಿ ಚಿನ್ನದ ಮೇಲೆ ಸಾಲ ಪಡೆದ ಗ್ರಾಹಕರಿಂದ ಹೆಚ್ಚುವರಿಯಾಗಿ ೧೦ ರಿಂದ ೧೫ ರು. ಗ್ರಾಹಕರ ಗಮನಕ್ಕೆ ಬಾರದಂತೆ ಹಣ ಪಡೆಯಲಾಗುತ್ತಿದೆ. ಕೋವಿಡ್-೧೯ರ ಹಿನ್ನಲೆಯಲ್ಲಿ ಮಾರ್ಚ್ ೨೦೨೦ರ ರಿಂದ ಸೆಪ್ಟಂಬರ್ ವರೆಗೂ ಕೇಂದ್ರ ಸರ್ಕಾರ ಎಲ್ಲಾ ತರಹದ ಸಾಲದ ಕಂತುಗಳಿಗೆ ಚಕ್ರ ಬಡ್ಡಿ ಹಾಕದಂತೆ ಸೂಚಿಸಿದೆ. ಆದರೂ ಸಹ ಈ ಸಂಸ್ಥೆಗಳು ಬಡ ಗ್ರಾಹಕರಿಗೆ ಚಕ್ರ ಬಡ್ಡಿ ಪಾವತಿಸುವಂತೆ ಒತ್ತಾಯಿಸುತ್ತಿವೆ. ಅಲ್ಲದೆ ಚಕ್ರ ಬಡ್ಡಿ ಪಾವತಿಸಲು ನಿರಾಕರಿಸುವ ಗ್ರಾಹಕರಿಗೆ ಯಾವುದೇ ನೋಟಿಸ್ ನೀಡದೆ ಚಿನ್ನವನ್ನು ಹರಾಜು ಹಾಕಲಾಗುತ್ತಿದೆ ಎಂದು ಆರೋಪಿಸಿದರು.
   ಈ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಲು ತನಿಖಾ ಸಂಸ್ಥೆಗಳ ಮುಖ್ಯಸ್ಥರಿಗೆ ಆದೇಶಿಸುವ ಜೊತೆಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಬಡ ಗ್ರಾಹಕರ ಹಿತ ಕಾಪಾಡಬೇಕೆಂದು ಮನವಿ ಮಾಡಿದರು.

ತಾಲೂಕು ಕಚೇರಿ ಮುಂಭಾಗ ಪುನಃ ನಿಲ್ದಾಣ ನಿರ್ಮಿಸಿ : ಕರವೇ ಮನವಿ

ಈ ಹಿಂದೆ ಭದ್ರಾವತಿ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿದ್ದ ಬಸ್ ನಿಲ್ದಾಣವನ್ನು ಪುನಃ ನಿರ್ಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಕುಮಾರ್ ಶೆಟ್ಟಿ ಬಣ)ವತಿಯಿಂದ ಸೋಮವಾರ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.

   ಭದ್ರಾವತಿ, ಮಾ. ೨೯:  ಈ ಹಿಂದೆ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗದಲ್ಲಿದ್ದ ಬಸ್ ನಿಲ್ದಾಣವನ್ನು ಪುನಃ ನಿರ್ಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಕುಮಾರ್ ಶೆಟ್ಟಿ ಬಣ)ವತಿಯಿಂದ ಸೋಮವಾರ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
   ತಹಸೀಲ್ದಾರ್ ಗ್ರೇಡ್-೨ ರಂಗಮ್ಮರಿಗೆ ಮನವಿ ಸಲ್ಲಿಸಿದ ವೇದಿಕೆ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್, ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ತಾಲೂಕು ಕಚೇರಿ ರಸ್ತೆಯಲ್ಲಿ ಪ್ರತಿದಿನ ನಗರ ಹಾಗು ಗ್ರಾಮಾಂತರ ಭಾಗಗಳಿಂದ ಜನರು ಬಂದು ಹೋಗುತ್ತಾರೆ. ಈ ಹಿಂದೆ ನಿರ್ಮಿಸಲಾಗಿದ್ದ ಬಸ್ ನಿಲ್ದಾಣವನ್ನು ರಸ್ತೆ ಅಗಲೀಕರಣಕ್ಕಾಗಿ ನೆಲಸಮಗೊಳಿಸಲಾಗಿದೆ. ಅಲ್ಲದೆ ಈ ರಸ್ತೆಯಲ್ಲಿ ಸದಾ ಕಾಲ ಗಾಳಿ, ನೆರಳು ನೀಡುತ್ತಿದ್ದ ಹಳೇಯದಾದ ಬೃಹತ್ ಗಾತ್ರದ ಮರಗಳನ್ನು ಸಹ ಕಡಿತಲೆ ಮಾಡಲಾಗಿದೆ. ಇದೀಗ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದರೂ ಸಹ ಪುನಃ ಬಸ್ ನಿಲ್ದಾಣ ನಿರ್ಮಿಸಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ತಕ್ಷಣ ಬಸ್ ನಿಲ್ದಾಣ ನಿರ್ಮಿಸಬೇಕು. ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ತಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
     ಸಾಮಾಜಿಕ ಹೋರಾಟಗಾರ ಶಿವಕುಮಾರ್, ಹಿರಿಯ ಮುಖಂಡ ಸುಬ್ಬೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Sunday, March 28, 2021

ಕಲ್ಮಶ ತುಂಬಿದ ಪರಿಸರದಲ್ಲಿ ಪರಿಶುದ್ಧರಾಗಲು ವಚನಗಳು ಸಹಕಾರಿ : ಡಾ. ವೀಣಾ ಎಸ್. ಭಟ್

ಭದ್ರಾವತಿಯಲ್ಲಿ ಭಾನುವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೬ನೇ  ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದ ಡಾ. ವೀಣಾ ಎಸ್ ಭಟ್‌ರವರಿಗೆ ಶಿವಮೊಗ್ಗ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿಯವರು ಸಮ್ಮೇಳನದ ಧ್ವಜ ಹಸ್ತಾಂತರಿಸಿದರು.  
  ಭದ್ರಾವತಿ, ಮಾ. ೨೮: ಪ್ರಸ್ತುತ ಜಗತ್ತಿನ ಎಲ್ಲಾ ಕ್ಷೇತ್ರಗಳಲ್ಲೂ ಕಲ್ಮಶ ತುಂಬಿಕೊಂಡಿದ್ದು, ಇವುಗಳಿಂದ ಪರಿಶುದ್ಧರಾಗಲು ವಚನಗಳು ಸಹಕಾರಿಯಾಗಿವೆ ಎಂದು ನಗರದ ಸ್ತ್ರೀರೋಗ ತಜ್ಞೆ, ವೈದ್ಯ ಸಾಹಿತಿ ಡಾ. ವೀಣಾ ಎಸ್. ಭಟ್ ಹೇಳಿದರು.
   ಭಾನುವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೬ನೇ  ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ  ಮಾತನಾಡಿದರು.
   ವಚನಗಳು ದೈನಂದಿನ ಬದುಕಿನ ಭಾಗವಾಗಬೇಕು, ಬಸವಾದಿ ಶರಣರ ಚಾರಿತ್ರಿಕ ಪಾತ್ರಗಳನ್ನು ಕೇವಲ ನೆನಪು ಮಾಡಿಕೊಂಡರೆ ಸಾಲದು ಅವರು ಹಾಕಿಕೊಟ್ಟ ಹಾದಿಯಲ್ಲಿ ಕೆಲವು ಹೆಜ್ಜೆಗಳನ್ನಾದರೂ ಇಡಬೇಕು. ಕಾಯಕ, ದಾಸೋಹದ ಪರಿಕಲ್ಪನೆ ಪ್ರತಿಯೊಬ್ಬರಲ್ಲಿಯೂ ಮೂಡಬೇಕು ಆಗ ಮಾತ್ರ ಬದುಕಿನ ಸಾರ್ಥಕತೆ ಸಾಧ್ಯ ಎಂದರು.
   ಜಗಜ್ಯೋತಿ ಬಸವಣ್ಣನವರ ಆಶಯದಂತೆ ನಮ್ಮ ನಡೆ-ನುಡಿ ಒಂದೇ ದಿಕ್ಕಿನಲ್ಲಿ ಸಾಗಬೇಕು. ಸಮಾನತೆ ಪರಿಕಲ್ಪನೆಯೊಂದಿಗೆ ಪರಿಶುದ್ಧ ಮನಸ್ಸು ಹೊಂದುವ ಮೂಲಕ ಬದುಕು ರೂಪಿಸಿಕೊಳ್ಳಬೇಕು. ಪರಿಶುದ್ಧ ಆಲೋಚನೆಗಳಿಂದ ನಮ್ಮ ದೇಹದ ಆರೋಗ್ಯ ವೃದ್ಧಿಸುವ ಜೊತೆಗೆ ಕೊರೋನಾದಂತಹ ಮಹಾಮಾರಿಯನ್ನೂ ಸಹ ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಹೊಂದಬಹುದು. ಈ ನಿಟ್ಟಿನಲ್ಲಿ ಅಂತರಂಗ ಬಹಿರಂಗದ ಶುದ್ದಿ ವೈದ್ಯಲೋಕಕ್ಕೂ ಕೂಡ ಸವಾಲಾಗಿ ಪರಿಣಮಿಸುತ್ತದೆ ಎಂದರು.
  ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ಶರಣರ ಬದುಕು ಜಾತಿ, ಧರ್ಮ ಸೇರಿದಂತೆ ಯಾವುದೇ ಬೇಧಭಾವವಿಲ್ಲದ ಸರ್ವಸಮಾನತೆಯ ಬದುಕಾಗಿದೆ. ಇದು ಕೇವಲ ೧೨ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ ಇಂದಿಗೂ ಪ್ರಸ್ತುತವಾಗಿದೆ. ಶರಣರ ಆಶಯದಂತೆ ನಮ್ಮ ಬದುಕು ರೂಪುಗೊಳ್ಳಬೇಕು ಎಂದರು.
   ಪ್ರಸ್ತುತ ಕ್ಷೇತ್ರದಲ್ಲಿ ಕೆಲವರು ಜಾತಿ, ಧರ್ಮದ ಹೆಸರಿನಲ್ಲಿ ವಿಷಬೀಜ ಬಿತ್ತಿ ರಾಜಕಾರಣ ಮಾಡಲು ಯತ್ನಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಅಶಾಂತಿ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ರಾಜಕಾರಣದಲ್ಲಿ ಟೀಕೆ ಟಿಪ್ಪಣಿಗಳು ಸಾಮಾನ್ಯ ಅದನ್ನು ಎದುರಿಸುವ ಶಕ್ತಿ ದೇವರು ನನಗೆ ಕರುಣಿಸಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಮತದಾರರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆಂದು ಇತ್ತೀಚೆಗೆ ಕ್ಷೇತ್ರದಲ್ಲಿ ಉಂಟಾಗಿರುವ ಅಹಿತಕರ ಬೆಳವಣಿಗೆಗಳ ಕುರಿತು ಸಂಗಮೇಶ್ವರ್ ಮಾರ್ಮಿಕವಾಗಿ ನುಡಿದರು.

ಬಲಿಜ ಸಮುದಾಯದ ಅಭಿವೃದ್ಧಿಗೆ ಬದ್ಧ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ಭಾನುವಾರ ತಾಲೂಕು ಬಲಿಜ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ತಾತಯ್ಯನವರ ೧೮೬ನೇ ಆರಾಧನೆ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಶಾಸಕರ ನಿಧಿಯಿಂದ ೨೫ ಲಕ್ಷ ರು. ಅನುದಾನದ ಮಂಜೂರಾತಿ ಪತ್ರವನ್ನು ಸಮಾಜದ ಅಧ್ಯಕ್ಷರಿಗೆ ಸ್ವಾಮೀಜಿಯವರ ಸಮ್ಮುಖದಲ್ಲಿ ಹಸ್ತಾಂತರಿಸಿದರು.
    ಭದ್ರಾವತಿ, ಮಾ. ೨೮: ಬಲಿಜ ಸಮಾಜದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.
   ಅವರು ಭಾನುವಾರ ತಾಲೂಕು ಬಲಿಜ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ತಾತಯ್ಯನವರ ೧೮೬ನೇ ಆರಾಧನೆ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
   ಬಲಿಜ ಸಮಾಜಕ್ಕೆ ಮೀಸಲಾತಿ ನೀಡುವ ಸಂಬಂಧ ಸಮಾಜದವರು ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸುವ ಜೊತೆಗೆ ಸಮಾಜದ ಮುಖಂಡರೊಂದಿಗೆ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಭರವಸೆ ನೀಡಿದರು.
    ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸುವ ಜೊತೆಗೆ ಇನ್ನೂ ಹೆಚ್ಚಿನ ನೆರವು ನೀಡಲು ಸಿದ್ದನಿದ್ದೇನೆ. ಎಲ್ಲಾ ಸಮಾಜದವರು ನಮ್ಮೊಂದಿಗಿದ್ದಾರೆ. ವಿನಃಕಾರಣ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಒಳ್ಳೆಯ ಕಾರ್ಯಗಳನ್ನು ಮಾಡುವವರಿಗೆ ಸದಾಕಾಲ ಬೆಂಬಲ ನೀಡುವ ಮೂಲಕ ಸಮಾಜವನ್ನು ಕಟ್ಟುವ ಕೆಲಸ ಎಲ್ಲರೂ ಮಾಡಬೇಕೆಂದು ಕರೆ ನೀಡಿದರು.
    ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದ ಕುಳ್ಳೂರು ಸುಕ್ಷೇತ್ರದ ಶ್ರೀ ಶಿವಯೋಗಿಶ್ವರ ಸಂಸ್ಥಾನ ಮಠದ ಶ್ರೀ ಸದ್ಗುರು ಬಸವಾನಂದ ಭಾರತಿ ಮಹಾಸ್ವಾಮೀಜಿ ಮಾತನಾಡಿ, ಬಲಿಜ ಸಮಾಜ ಜನಸಂಖ್ಯೆಯಲ್ಲಿ ಚಿಕ್ಕ ಸಮುದಾಯವಾದರೂ ಸಂಘಟನೆಯಲ್ಲಿ ಬಲಿಷ್ಠವಾಗಿದೆ. ಸಮಾಜದ ಎಲ್ಲಾ ಸಮುದಾಯಗಳೊಂದಿಗೆ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಪ್ರತಿಯೊಬ್ಬರು ಸಮಾಜಕ್ಕೆ ತಮ್ಮದೇ ಆದ ಸೇವೆಯನ್ನು ನೀಡಬೇಕು. ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ತಾತಯ್ಯನವರು ಸಮಾಜಕ್ಕೆ ನೀಡಿರುವ ಕೊಡುಗೆ ಅನನ್ಯವಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಇಂದಿಗೂ ಸ್ಮರಿಸುತ್ತೇವೆ. ಸಮಾಜಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡವರು ಕೊನೆಯವರೆಗೂ ನೆನಪಿನಲ್ಲಿ ಉಳಿದುಕೊಳ್ಳುತ್ತಾರೆ. ಇದನ್ನು ಎಲ್ಲರೂ ಅರ್ಥಮಾಡಿಕೊಂಡು ಮುನ್ನಡೆಬೇಕೆಂದರು.
   ಬಲಿಜ ಸಮಾಜಕ್ಕೆ ಮೀಸಲಾತಿ ನೀಡುವ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಚಳುವಳಿ ನಡೆಸಲಾಯಿತು. ಸಂಘದ ಅಧ್ಯಕ್ಷ ಎಸ್.ಎನ್ ಸುಬ್ರಮಣ್ಯ ಅಧ್ಯಕ್ಷತೆ ವಹಿಸಿದ್ದರು.
    ಹಿರಿಯೂರು ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ, ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಎಚ್.ಆರ್ ರಂಗನಾಥ್ ನಿರೂಪಿಸಿದರು.
   ಗೌರವಾಧ್ಯಕ್ಷ ವೈ.ಎಸ್ ರಾಮಮೂರ್ತಿ, ಉಪಾಧ್ಯಕ್ಷರಾದ ಪದ್ಮಮ್ಮ ಹನುಮಂತಪ್ಪ, ಜೆ.ಎಸ್ ಸಂಜೀವಮೂರ್ತಿ, ಖಜಾಂಚಿ ಕೆ.ಜಿ. ಕುಮಾರಸ್ವಾಮಿ, ಸಹಕಾರ್ಯದರ್ಶಿ ದಶರಥಕುಮಾರ್, ಸಂಘಟನಾ ಕಾರ್ಯದರ್ಶಿ ಜಂಗಮಪ್ಪ ಸೇರಿದಂತೆ ಸಂಘದ ನಿರ್ದೇಶಕರು ಸೇರಿದಂತೆ ತಾಲೂಕಿನ ನಗರ ಹಾಗು ಗ್ರಾಮಾಂತರ ಭಾಗಗಳಿಂದ ಆಗಮಿಸಿದ್ದ ಬಲಿಜ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ನಮ್ಮನ್ನು ನಾವು ಅರ್ಥ ಮಾಡಿಕೊಳ್ಳದಿದ್ದರೆ ಭವಿಷ್ಯದಲ್ಲಿ ಆತಂಕ : ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ

ಭದ್ರಾವತಿ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಭಾನುವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೬ನೇಯ ಶರಣ ಸಾಹಿತ್ಯ ಸಮ್ಮೇಳನವನ್ನು ಕುವೆಂಪು ವಿಶ್ವ ವಿದ್ಯಾನಿಯಲದ ಕುಲಪತಿ ಪ್ರೊ. ಡಾ. ಬಿ.ಪಿ ವೀರಭದ್ರಪ್ಪ ಉದ್ಘಾಟಿಸಿದರು.
   ಭದ್ರಾವತಿ, ಮಾ. ೨೮: ಕೋವಿಡ್-೧೯ರ ಪರಿಣಮ ಕಳೆದ ೧ ವರ್ಷದಿಂದ ಮನುಷ್ಯನ ಬದುಕು ಸಂಯಮ ಕಳೆದು ಕೊಂಡಿದ್ದು, ನಮ್ಮನ್ನು ನಾವು ಸ್ವಯಂ ನಿಯಂತ್ರಣಕ್ಕೆ ಒಳಗಾಗಿ ಸ್ವೇಚ್ಛೆಯಿಂದ ಬದುಕುವಂತಾಗಿದೆ. ಈಗಲೂ ನಾವು ನಮ್ಮನ್ನು ಅರ್ಥ ಮಾಡಿಕೊಳ್ಳದಿದ್ದರೆ ಭವಿಷ್ಯದಲ್ಲಿ ದೊಡ್ಡ ಆತಂಕ ಎದುರಿಸಬೇಕಾಗುತ್ತದೆ ಎಂದು ಶಿವಮೊಗ್ಗ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
    ಭಾನುವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೬ನೇಯ ಶರಣ ಸಾಹಿತ್ಯ ಸಮ್ಮೇಳನದ ದಿವ್ಯ ಸಾನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.
   ಮನುಷ್ಯನ ಮಿತಿಮೀರಿದ ದುರಾಸೆಗಳಿಗೆ ಸ್ವಯಂ ಕಡಿವಾಣ ಹಾಕುವಲ್ಲಿ ಕೋವಿಡ್-೧೯ ಯಶಸ್ವಿಯಾಗಿದೆ. ಇಂದು ಮನುಷ್ಯ ಕೇವಲ ಹಣ, ಅಧಿಕಾರವೇ ಬದುಕು ಎಂಬುದನ್ನು ತಿಳಿದುಕೊಂಡಿದ್ದಾನೆ. ಇದರಿಂದ ತನ್ನತನವನ್ನು ಕಳೆದುಕೊಂಡಿದ್ದಾನೆ.  ಕೋವಿಡ್-೧೯ರ ಪರಿಣಾಮ ಕಳೆದ ೧ ವರ್ಷದಿಂದ ಏಕಾಂಗಿಯಾಗಿ ಕಾಲ ಕಳೆಯುವಂತಾಗಿದೆ. ಒಬ್ಬಂಟಿಯಾಗಿ ಮನೆಯಲ್ಲಿ ಉಳಿದುಕೊಳ್ಳಲಾಗದ ಬಹಳಷ್ಟು ಮಂದಿ ಮಾನಸಿಕವಾಗಿ ಅಸ್ವಸ್ಥತೆಗೆ ಒಳಗಾಗಿದ್ದಾರೆ. ಕೆಲವರು ಗೃಹ ಬಂಧನ, ಇನ್ನೂ ಕೆಲವರು ಸೆರೆವಾಸ ಎಂಬ ರೀತಿಯಲ್ಲಿ ಅರ್ಥೈಸಿಕೊಂಡಿದ್ದಾರೆ. ಆದರೆ ವಾಸ್ತವವಾಗಿ ಮನೆಯಲ್ಲಿನ ಪ್ರೀತಿ, ಸಹಬಾಳ್ವೆ, ಕುಟಂಬದ ಮಹತ್ವ ಅರಿಯಲು ಕೋವಿಡ್-೧೯ ಸಹಕಾರಿಯಾಗಿದೆ. ಇದನ್ನು ನಾವುಗಳು ಅರ್ಥಮಾಡಿಕೊಳ್ಳಬೇಕಾಗಿದೆ. ಪುನಃ ನಮ್ಮ ಬದುಕು ಶರಣರ ಬದುಕಿನ ಕಡೆ ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ ಅವರ ವಿಚಾರಧಾರೆಗಳನ್ನು ಅರ್ಥಮಾಡಿಕೊಂಡು ಮುನ್ನಡೆಯಬೇಕೆಂದರು.
    ಸಮ್ಮೇಳನ ಉದ್ಘಾಟಿಸಿದ ಕುವೆಂಪು ವಿಶ್ವ ವಿದ್ಯಾನಿಯಲದ ಕುಲಪತಿ ಪ್ರೊ. ಡಾ. ಬಿ.ಪಿ ವೀರಭದ್ರಪ್ಪ ಮಾತನಾಡಿ, ೧೨ನೇ ಶತಮಾನದ ಶರಣರ ಬದುಕು ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ. ಎಲ್ಲರನ್ನು ನಮ್ಮವರು ಎಂದು ಕಾಣುವ ಮನೋಭಾವ, ಕಾಯಕದ ಮಹತ್ವ, ದಾಸೋಹದ ಮಹತ್ವ, ಸಮಸಮಾಜ ನಿರ್ಮಾಣದ ಪರಿಕಲ್ಪನೆ. ಇವೆಲ್ಲವನ್ನು ವಚನ ಸಾಹಿತ್ಯದ ಮೂಲಕ ಕೊಡುಗೆಯಾಗಿ ನೀಡಿದ ಶರಣರ ಬದುಕು ಆದರ್ಶಪ್ರಾಯ. ಅವರ ಆದರ್ಶಗಳನ್ನು ಇಂದಿನ ಸಮಾಜದಲ್ಲಿ ನಾವುಗಳು ಎಷ್ಟರಮಟ್ಟಿಗೆ ಅಳವಡಿಸಿಕೊಂಡಿದ್ದೇವೆ. ನಮ್ಮ ಭವಿಷ್ಯದ ಮುಂದಿನ ಗುರಿ ಯಾವ ನಿಟ್ಟಿನಲ್ಲಿ ಸಾಗಬೇಕು. ಎದುರಾಗುವ ಸವಾಲುಗಳು ಸೇರಿದಂತೆ ಎಲ್ಲವನ್ನು ಈ ರೀತಿಯ ಸಾಹಿತ್ಯ ಸಮ್ಮೇಳನಗಳಿಂದ ಕಂಡುಕೊಳ್ಳಲು ಸಾಧ್ಯ ಎಂದರು.
     ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ವಿರುಪಾಕ್ಷಪ್ಪ ಪ್ರಾಸ್ತಾವಿಕ ಹಾಗು ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ ಆಶಯನುಡಿಗಳನ್ನಾಡಿದರು.
     ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನಾಧ್ಯಕ್ಷೆ ಡಾ. ವೀಣಾ ಎಸ್. ಭಟ್, ಜಿಲ್ಲಾ ಖಜಾನೆ ಉಪನಿರ್ದೇಶಕಿ ಎಚ್.ಎಸ್ ಸಾವಿತ್ರಿ ಮತ್ತು ಶ್ರೀ ಬಸವೇಶ್ವರ ಸಭಾಭವನ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಡಾ. ಬಿ.ಜಿ ಧನಂಜಯ್ಯ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿಕೊಟ್ಟರು. ಎನ್.ಎಸ್ ಮಲ್ಲಿಕಾರ್ಜುನಯ್ಯ ಸ್ವಾಗತಿಸಿದರು. ಕತ್ತಲಗೆರೆ ತಿಮ್ಮಪ್ಪ ನಿರೂಪಿಸಿದರು.

Saturday, March 27, 2021

ಮಾ.೨೮ರಂದು ತಾತಯ್ಯನವರ ೧೮೬ನೇ ಆರಾಧನಾ ಮಹೋತ್ಸವ

ಭದ್ರಾವತಿ, ಮಾ. ೨೭: ಶ್ರೀ ಕೈವಾರ ಸದ್ಗುರು ಯೋಗಿನಾರೇಯಣ ತಾತಯ್ಯನವರ ೧೮೬ನೇ ಆರಾಧನಾ ಮಹೋತ್ಸವ ಮಾ.೨೮ರಂದು ಬೆಳಿಗ್ಗೆ ೧೦.೩೦ಕಕ್ಕೆ ಹಳೇನಗರದ ಬಲಿಜ ಸಮುದಾಯ ಭವನದಲ್ಲಿ ನಡೆಯಲಿದೆ.
ಕುಳ್ಳೂರು ಸುಕ್ಷೇತ್ರ ಶ್ರಿ ಶಿವಯೋಗಿಶ್ವರ ಸಂಸ್ಥಾನ ಮಠದ ಶ್ರೀ ಬಸವಾನಂದ ಭಾರತಿ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದು, ಹಿರಿಯೂರು ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ ಉಪಸ್ಥಿತರಿರುವರು.
ಎಂ.ಎಸ್ ರಾಮಯ್ಯ ಶಿಕ್ಷಣ ಸಂಸ್ಥೆ ವೈಸ್ ಛೇರ್‌ಮನ್ ಎಂ.ಎಸ್ ಸೀತರಾಮ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ಮಹಿಳಾ ಬಲಿಜ ಸಮಾಜದ ಅಧ್ಯಕ್ಷೆ ಶಾಂತಮ್ಮ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಬಲಿಜ ಸಂಘದ ಅಧ್ಯಕ್ಷ ಎಸ್.ಎನ್ ಸುಬ್ರಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ಉತ್ತಮ ವ್ಯಾಯಾಮ, ದೈಹಿಕ ಶ್ರಮಗಳಿಂದ ಮೂಳೆ ಸವೆತಕ್ಕೆ ಕಡಿವಾಣ : ಡಾ. ವೀಣಾ ಎಸ್ ಭಟ್

ಹಳೇನಗರ ಮಹಿಳಾ ಸೇವಾ ಸಮಾಜ, ತಾಲೂಕು ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಹುಬ್ಬಳ್ಳಿಯ ಮೇಯರ್ ಆರ್ಗ್ಯಾನಿಕ್ ಪ್ರೈವೇಟ್ ಲಿ., ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಮೂಳೆ ಸಾಂದ್ರತೆ ಚಿಕಿತ್ಸೆ ಹಾಗು ತಪಾಸಣಾ ಶಿಬಿರ ಡಾ. ವೀಣಾ ಎಸ್ ಭಟ್, ಹೇಮಾವತಿ ವಿಶ್ವನಾಥ್, ಅನ್ನಪೂರ್ಣ ಸತೀಶ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ: ಮಹಿಳೆಯರು ಉತ್ತಮ ವ್ಯಾಯಾಮ ಹಾಗು ದೈಹಿಕ ಶ್ರಮಗಳಿಂದ ೪೦ ವರ್ಷಗಳ ನಂತರ ಕಾಣಿಸಿಕೊಳ್ಳುವ ಮೂಳೆ ಸವೆತ ಹಾಗು ಇನ್ನಿತರ ಸಮಸ್ಯೆಗಳಿಂದ ಪಾರಾಗಲು ಸಾಧ್ಯ ಎಂದು ನಗರದ ಸ್ತ್ರೀ ರೋಗ ತಜ್ಞೆ ಡಾ. ವೀಣಾ ಎಸ್ ಭಟ್ ತಿಳಿಸಿದರು.
    ಅವರು ಹಳೇನಗರ ಮಹಿಳಾ ಸೇವಾ ಸಮಾಜ, ತಾಲೂಕು ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಹುಬ್ಬಳ್ಳಿಯ ಮೇಯರ್ ಆರ್ಗ್ಯಾನಿಕ್ ಪ್ರೈವೇಟ್ ಲಿ., ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಮೂಳೆ ಸಾಂದ್ರತೆ ಚಿಕಿತ್ಸೆ ಹಾಗು ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಋತು ಚಕ್ರ ಆರಂಭದಿಂದ ನಿಲ್ಲುವವರೆಗೂ ಮಹಿಳೆಯರು ಹಲವಾರು ಹಂತಗಳನ್ನು ದಾಟಿ ಜೀವನ ನಡೆಸಬೇಕಿದೆ. ಈ ಹಿನ್ನಲೆಯಲ್ಲಿ ಉತ್ತಮ ಆರೋಗ್ಯ ಹೊಂದುವುದು ಅವಶ್ಯಕ.
    ೩೦ ವರ್ಷಗಳವರೆಗೆ ಮಹಿಳೆಯರು ನಿರಂತರವಾಗಿ ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿಕೊಳ್ಳುವ ಜೊತೆಗೆ ಭವಿಷ್ಯದಲ್ಲಿ ಎದುರಾಗುವ ಮೂಳೆ ಸವೆತದಿಂದ ಪಾರಾಗಲು ಅಗತ್ಯವಿರುವ ಕ್ರಮಗಳನ್ನು ರೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
    ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಅಧ್ಯಕ್ಷತೆ ವಹಿಸಿದ್ದರು.
   ಪ್ರಮುಖರಾದ ಶೋಭಾ ಗಂಗರಾಜ್, ಜಯಂತಿ ಶೇಟ್, ಶಕುಂತಲ, ಲೋಹಿತಾ ನಂಜಪ್ಪ, ವಿಶ್ವೇಶ್ವರಯ್ಯ, ಪ್ರಜ್ವಲ್, ಉಮೇಶ್, ಶಾರದ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಂಗ ಕಲೆ ಮೂಲಕ ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಸಾಧ್ಯ : ಅಪರಂಜಿ ಶಿವರಾಜ್

ಭದ್ರಾವತಿ ಜನ್ನಾಪುರದ ಅಪರಂಜಿ ಅಭಿನಯ ಶಾಲೆಯಲ್ಲಿ ಶನಿವಾರ ವಿಶ್ವ ರಂಗಭೂಮಿ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
   ಭದ್ರಾವತಿ, ಮಾ. ೨೭: ರಂಗ ಕಲೆ ಮೂಲಕ ಮಕ್ಕಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ರಂಗಕಲಾವಿದ, ಚಲನಚಿತ್ರ ನಟ ಅಪರಂಜಿ ಶಿವರಾಜ್ ಹೇಳಿದರು.
   ಅವರು ಶನಿವಾರ ಜನ್ನಾಪುರದಲ್ಲಿ ಆರಂಭಿಸಿರುವ ಅಪರಂಜಿ ಅಭಿನಯ ಶಾಲೆಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯನ್ನು ಸರಳವಾಗಿ ಆಚರಿಸುವ ಮೂಲಕ ಮಾತನಾಡಿದರು.
ಬಾಲ್ಯದಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನಗೊಳ್ಳಲು ರಂಗಕಲೆ ಸಹಕಾರಿಯಾಗಿದೆ. ಉತ್ತಮ ವ್ಯಕ್ತಿತ್ವದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಈ ಹಿನ್ನಲೆಯಲ್ಲಿ ಕಳೆದ ೩ ವರ್ಷಗಳ ಹಿಂದೆ ಆರಂಭಿಸಿದ ಶಾಲೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದರು.
   ರಂಗ ಚಟುವಟಿಕೆಗಳಲ್ಲಿ ಮಕ್ಕಳು ಹೆಚ್ಚಾಗಿ ತೊಡಗಿಸಿಕೊಂಡಲ್ಲಿ ಓದಿನ ಬಗ್ಗೆ ಆಸಕ್ತಿ ಕಡಿಮೆಯಾಗಲಿದೆ ಎಂಬ ತಪ್ಪು ಕಲ್ಪನೆಯನ್ನು ಕೆಲವರು ಹೊಂದಿದ್ದಾರೆ. ಆದರೆ ರಂಗ ಕಲೆ ಮೂಲಕ ಮಕ್ಕಳು ಸುಲಲಿತವಾಗಿ ಮಾತನಾಡುವ ಜೊತೆಗೆ ತಮ್ಮ ಪ್ರತಿಭೆಗಳನ್ನು ಹೊರಹಾಕುವ  ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲಿದ್ದಾರೆ ಎಂದರು.
    ಅಭಿನಯ ಶಾಲೆಯ ಪುಷ್ಪಲತಾ ಮಾತನಾಡಿ, ಮಕ್ಕಳನ್ನು ಅಭಿನಯ ಶಾಲೆಗೆ ಸೇರಿಸುವ ಮೂಲಕ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವ ನಿಟ್ಟಿನಲ್ಲಿ ಪೋಷಕರು ಮುಂದಾಗಬೇಕೆಂದರು.
ಶಾಲೆಯಲ್ಲಿ ತರಬೇತಿ ಪಡೆಯುತ್ತಿರುವ ಮಕ್ಕಳು ಹಾಗು ಪೋಷಕರು ಉಪಸ್ಥಿತರಿದ್ದರು.  

ರತಿ, ಮನ್ಮಥ ಪ್ರತಿಷ್ಠಾಪನೆಯೊಂದಿಗೆ ಹೋಳಿ ಹಬ್ಬ ಆಚರಣೆಗೆ ಚಾಲನೆ

ಭದ್ರಾವತಿ ಹಳೇನಗರದ ಕುಂಬಾರರ ಬೀದಿಯಲ್ಲಿ ಹೋಳಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸ ಲಾಗಿರುವ ರತಿ, ಮನ್ಮಥ.
   ಭದ್ರಾವತಿ, ಮಾ. ೨೭: ರತಿ, ಮನ್ಮಥ ಪ್ರತಿಷ್ಠಾಪನೆಯೊಂದಿಗೆ ಹಳೇನಗರದ ವಿವಿಧೆಡೆ ಕಳೆದ ೩ ದಿನಗಳಿಂದ ಹೋಳಿ ಹಬ್ಬ ಆಚರಣೆಗೆ ಚಾಲನೆ ನೀಡಲಾಗಿದೆ.
   ಕೋವಿಡ್-೧೯ರ ನಡುವೆಯೂ ಪ್ರತಿವರ್ಷದಂತೆ ಈ ಬಾರಿ ಸಹ ಹಳೇನಗರದ ಕುಂಬಾರರ ಬೀದಿಯಲ್ಲಿ ಹೋಳಿ ಮಹೋತ್ಸವ ಸೇವಾ ಸಮಿತಿ ವತಿಯಿಂದ ಮತ್ತು ಪೇಟೆ ಬೀದಿಯಲ್ಲಿ ರತಿ, ಮನ್ಮಥ ಇಬ್ಬರನ್ನು ಪ್ರತಿಷ್ಠಾಪಿಸಲಾಗಿದೆ. ಆದರೆ ಬ್ರಾಹ್ಮಣರ ಬೀದಿಯಲ್ಲಿ ಶ್ರೀ ಮನ್ಮಥ ಸೇವಾ ಸಮಿತಿ ವತಿಯಿಂದ ಕೇವಲ ಮನ್ಮಥ ಮಾತ್ರ ಪ್ರತಿಷ್ಠಾಪಿಸಲಾಗಿದೆ.
   ಸಾಂಸ್ಕೃತಿಕ ಹಾಗು ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗುತ್ತಿದ್ದು, ಮಾ.೨೯ರ ಸೋಮವಾರ ಬೆಳಿಗ್ಗೆ ರತಿ ಮನ್ಮಥ ರಾಜಬೀದಿ ಉತ್ಸವ ಮೆರವಣಿಗೆಗಳೊಂದಿಗೆ ಕಾಮದಹನ ನಡೆಯಲಿದೆ.
ಈಗಾಗಲೇ ಸರ್ಕಾರ ಕೋವಿಡ್-೧೯ರ ಹಿನ್ನಲೆಯಲ್ಲಿ ಹೋಳಿ ಹಬ್ಬ ಆಚರಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ್ದು, ಹೆಚ್ಚಿನ ಜನಸಂದಣಿ ಉಂಟಾಗದಂತೆ ಎಚ್ಚರವಹಿಸುವಂತೆ ಸೂಚಿಸಿದೆ.


ಭದ್ರಾವತಿ ಹಳೇನಗರದ ಬ್ರಾಹ್ಮಣರ ಬೀದಿಯಲ್ಲಿ ಹೋಳಿ ಹಬ್ಬದ ಪ್ರಮುಕ್ತ ಪ್ರತಿಷ್ಠಾಪಿಸಲಾಗಿರುವ ಮನ್ಮಥ.

Friday, March 26, 2021

ಮಾ.೨೭ರಂದು ಮೂಳೆ ಖನಿಜ ಸಾಂದ್ರತೆ ಚಿಕಿತ್ಸೆ, ತಪಾಸಣೆ ಶಿಬಿರ

ಭದ್ರಾವತಿ, ಮಾ. ೨೬: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಹುಬ್ಬಳ್ಳಿಯ ಮೇಯರ್ ಆರ್ಗ್ಯಾನಿಕ್ ಪ್ರೈವೇಟ್ ಲಿ., ಮಹಿಳಾ ಸೇವಾ ಸಮಾಜ ಹಾಗು ತಾಲೂಕು ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಮಾ.೨೭ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಹಳೇನಗರದ ಮಹಿಳಾ ಸೇವಾ ಸಮಾಜದಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ ಚಿಕಿತ್ಸೆ ಹಾಗು ತಪಾಸಣಾ ಶಿಬಿರ ಆಯೋಜಿಸಲಾಗಿದೆ.
   ಸ್ತ್ರೀ ರೋಗ ತಜ್ಞೆ ಡಾ. ವೀಣಾ ಎಸ್ ಭಟ್ ಶಿಬಿರ ಉದ್ಘಾಟಿಸಲಿದ್ದು, ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಮತ್ತು ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಶೋಭ ಗಂಗರಾಜ್, ಕೆ. ರಾಧ, ಜಯಂತಿ ಶೇಟ್ ಮತ್ತು ರಾಧ ಶ್ರೀಗಂಧ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ.

ಪ್ರಭು ಶ್ರೀರಾಮ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

ಸಿ.ಎಂ ಇಬ್ರಾಹಿಂ ಕ್ಷಮೆಯಾಚನೆಗೆ ಆಗ್ರಹ


ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮ ಕುರಿತು ಮಾಜಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ವಿರುದ್ಧ ಶುಕ್ರವಾರ ಸಂಜೆ ಬಜರಂಗದಳ ಕಾರ್ಯಕರ್ತರು ಭದ್ರಾವತಿ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
   ಭದ್ರಾವತಿ, ಮಾ. ೨೬: ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮ ಕುರಿತು ಮಾಜಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ವಿರುದ್ಧ ಶುಕ್ರವಾರ ಸಂಜೆ ಬಜರಂಗದಳ ಕಾರ್ಯಕರ್ತರು ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
    ಸಿ.ಎಂ ಇಬ್ರಾಹಿಂ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಕಾರ್ಯಕರ್ತರು, ಪ್ರಭು ಶ್ರೀರಾಮ ಕುರಿತ ಅವಹೇಳನಕಾರಿ ಹೇಳಿಕೆಯಿಂದಾಗಿ ಹಿಂದೂಗಳ ಭಾವನೆಗೆ ಧಕ್ಕೆಯುಂಟಾಗಿದೆ. ತಕ್ಷಣ ಹಿಂದೂಗಳ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಯಾವುದೇ ಕಾರಣಕ್ಕೂ ಕ್ಷೇತ್ರಕ್ಕೆ ಆಗಮಿಸಲು ಬಿಡುವುದಿಲ್ಲ. ಒಂದು ವೇಳೆ ಆಗಮಿಸಿದ್ದಲ್ಲಿ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.
   ಪ್ರತಿಭಟನೆಯಲ್ಲಿ ಬಜರಂಗದಳ ಜಿಲ್ಲಾ ಸಹ ಸಂಚಾಲಕ ವಡಿವೇಲು, ಸುನಿಲ್‌ಕುಮಾರ್, ದೇವರಾಜ್, ಚಂದ್ರು, ಕಿರಣ್, ಕೃಷ್ಣ, ಸವಾಯಿ ಸಿಂಗ್, ಶ್ರೀಕಾಂತ್, ಸಂಜು, ರಮೇಶ್, ಮಣಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

೧೪ ತಾಲೂಕು ಪಂಚಾಯಿತಿ, ೫ ಜಿಲ್ಲಾ ಪಂಚಾಯಿತಿ ಕ್ಷೇತ್ರ ನಿಗದಿಗೆ ಅಧಿಸೂಚನೆ

   ಭದ್ರಾವತಿ, ಮಾ. ೨೬: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಚುನಾವಣೆಗಳಿಗೆ ಈಗಾಗಲೇ ಚುನಾವಣಾ ಆಯೋಗ ಸಿದ್ದತೆ ಕೈಗೊಳ್ಳುತ್ತಿದ್ದು, ಕ್ಷೇತ್ರಗಳ ರಚನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ. ಈ ಪ್ರಕಾರ ತಾಲೂಕು ಪಂಚಾಯಿತಿ ೫ ಕ್ಷೇತ್ರಗಳು ಕಡಿತಗೊಂಡಿವೆ.
    ತಾಲೂಕು ಪಂಚಾಯಿತಿ ಒಟ್ಟು ೧೯ ಕ್ಷೇತ್ರಗಳನ್ನು ಒಳಗೊಂಡಿದ್ದು, ಸರ್ಕಾರ ಹೊಳೆಹೊನ್ನೂರು ಪಟ್ಟಣಯನ್ನಾಗಿ ಮೇಲ್ದರ್ಜೆಗೇರಿಸಿರುವ ಹಿನ್ನಲೆಯಲ್ಲಿ ೫ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ಕೈಬಿಟ್ಟು ೧೪ ಕ್ಷೇತ್ರಗಳನ್ನು ನಿಗದಿಪಡಿಸಲಾಗಿದೆ. ಉಳಿದಂತೆ ತಾಲೂಕಿನಲ್ಲಿ ಆನವೇರಿ, ಹೊಳೆಹೊನ್ನೂರು, ಕೂಡ್ಲಿಗೆರೆ, ಹಿರಿಯೂರು ಮತ್ತು ಸಿಂಗನಮನೆ ಸೇರಿದಂತೆ ಒಟ್ಟು ೫ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿದ್ದು, ಈ ಕ್ಷೇತ್ರಗಳಲ್ಲಿ ಯಾವುದೇ ಇಲ್ಲ.

ರಂಗ ಚಟುವಟಿಕೆಗಳಿಗೆ ಕ್ರಿಯಾಶೀಲತೆ, ಯುವ ಸಮುದಾಯ ಆಕರ್ಷಿಸಲು ಪ್ರಯತ್ನ : ಕೊಟ್ರಪ್ಪ ಜಿ. ಹಿರೇಮಾಗಡಿ

ಭದ್ರಾವತಿ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಂಗಮಂಥನ ಸಮಾಲೋಚನಾ ಸಭೆಯಲ್ಲಿ ಹಿರಿಯ ರಂಗ ಕಲಾವಿದ ವೈ.ಕೆ ಹನುಮಂತಯ್ಯ ಮಾತನಾಡಿದರು.  
    ಭದ್ರಾವತಿ, ಮಾ. ೨೬: ಕಲಾವಿದರು, ಶಿವಮೊಗ್ಗ ಸಂಘಟನೆ ಹವ್ಯಾಸಿ ರಂಗ ತಂಡಗಳ ಕಲಾವಿದರ ಸಂಘದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ರಂಗ ಚಟುವಟಿಕೆಗಳಿಗೆ ಕ್ರಿಯಾಶೀಲತೆ ತರುವ ನಿಟ್ಟಿನಲ್ಲಿ ಮುಂದಾಗಿದೆ ಎಂದು ಸಂಘಟನೆ ಅಧ್ಯಕ್ಷ ಕೊಟ್ರಪ್ಪ ಜಿ. ಹಿರೇಮಾಗಡಿ ತಿಳಿಸಿದರು.
   ಅವರು ನಗರದ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಂಗ ಮಂಥನ ಸಮಾಲೋಚನಾ ಸಭೆಯ ನೇತೃತ್ವವಹಿಸಿ ಮಾತನಾಡಿದರು.  
    ಇತ್ತೀಚಿನ ದಿನಗಳಲ್ಲಿ ರಂಗ ಚಟುವಟಿಕೆಗಳು ಕ್ಷೀಣಿಸುತ್ತಿದ್ದು, ಯುವ ಸಮುದಾಯವನ್ನು ರಂಗ ಚಟುವಟಿಕೆಗಳ ಕಡೆ ಆಕರ್ಷಿತರನ್ನಾಸುವ ಮೂಲಕ ರಂಗ ಚಟುವಟಿಕೆಗಳಿಗೆ ಪುನಃ ಜೀವಂತಿಕೆ ತಂದುಕೊಡಬೇಕಾಗಿದೆ. ಯುವ ಸಮುದಾಯ ಹೆಚ್ಚಾಗಿ ಚಲನಚಿತ್ರ, ಟಿ.ವಿ ಚಾನಲ್‌ಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳಿಗೆ ಜೋತುಬಿದ್ದಿದ್ದು, ಭ್ರಮಾ ಲೋಕದಲ್ಲಿ ಮುಳುಗಿದೆ. ಈ ಸಮುದಾಯಕ್ಕೆ ನಟನೆಯ ಮೂಲ ಬೇರು ರಂಗಭೂಮಿ ಎಂಬುದನ್ನು ಮನದಟ್ಟು ಮಾಡಬೇಕಾಗಿದೆ ಎಂದರು.
    ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಮಾತನಾಡಿ, ರಂಗ ಚಟುವಟಿಕೆಗಳ ಮೇಲೆ ರಾಜಕೀಯದ   ಕರಿ ನೆರಳು ಬೀಳದಂತೆ ಎಚ್ಚರವಹಿಸಬೇಕು. ರಂಗ ಕಲಾವಿದರ ಪ್ರತಿಭೆ ಅವರ ಮುಂದಿನ ಭವಿಷ್ಯವನ್ನು ನಿರ್ಧರಿಸಲಿದೆ. ಹೆಚ್ಚು ಹೆಚ್ಚು ಕಲಾವಿದರು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡಷ್ಟು ರಂಗ ಚಟುವಟಿಕೆಗಳಿಗೆ ಮಹತ್ವ ಹೆಚ್ಚಾಗಲಿದೆ. ಎಲೆಮರೆ ಕಾಯಿಯಂತಿರುವ ಕಲಾವಿದರನ್ನು ಹುಡುಕಿ ಬೆಳಕಿಗೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಬೇಕೆಂದರು.  
ವೈ.ಕೆ ಹನುಮಂತಯ್ಯ, ಜಂಬುಸ್ವಾಮಿ, ಕೆ.ಎಸ್.ರವಿಕುಮಾರ್, ರಾಜ್‌ಕುಮಾರ್, ಕಾ.ರಾ.ನಾಗರಾಜ್, ನಾಗಪ್ಪ, ಚಂದ್ರಕಾಂತ್ ಸೇರಿದಂತೆ ವಿವಿಧ ಕಲಾ ತಂಡಗಳ ಹಿರಿಯ ಕಲಾವಿದರು, ತಂತ್ರಜ್ಞರು ಭಾಗವಹಿಸಿದ್ದರು.
  ಸುಚಿತ್ರ, ವಿಜಯಲಕ್ಷ್ಮಿ ಪ್ರಾರ್ಥನೆ ಮಾಡಿದರು. ಅಪರಂಜಿ ಶಿವರಾಜ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿ.ಆರ್ ಲವ ಪ್ರ್ರಾಸ್ತಾವಿಕ ನುಡಿಗಳನ್ನಾಡಿದರು. ತಮಟೆ ಜಗದೀಶ್ ವಂದಿಸಿದರು.

ಸರ್ಕಾರಿ ನೌಕರರು ತಮ್ಮ ಹುದ್ದೆಗೆ ಚ್ಯುತಿಬರದಂತೆ ಆತ್ಮಗೌರವದಿಂದ ಕರ್ತವ್ಯ ನಿರ್ವಹಿಸಿ :

ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರೇ ಇಲ್ಲ : ಲೋಕಾಯುಕ್ತ ಡಿವೈಎಸ್ಪಿ ಅಸಮಾಧಾನ


ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪುರುಷೋತ್ತಮ್ ಸಾರ್ವಜನಿಕರ ಕುಂದುಕೊರತೆ ಸಭೆ ನೇತೃತ್ವವಹಿಸಿ ಮಾತನಾಡಿದರು.
    ಭದ್ರಾವತಿ, ಮಾ. ೨೬: ಸರ್ಕಾರಿ ನೌಕರರು ತಮ್ಮ ಹುದ್ದೆಗೆ ಚ್ಯುತಿಬರದಂತೆ ಆತ್ಮಗೌರವದಿಂದ ಕರ್ತವ್ಯ ನಿರ್ವಹಿಸಬೇಕೆಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪುರುಷೋತ್ತಮ್ ಕರೆ ನೀಡಿದರು.
     ಅವರು ಶುಕ್ರವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯ ನೇತೃತ್ವ ವಹಿಸಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿದರು.
ಸರ್ಕಾರಿ ಹುದ್ದೆಗಳನ್ನು ಅಲಂಕರಿಸುವವರು ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು. ಬಹುಮುಖ್ಯವಾಗಿ ಸರ್ಕಾರಿ ಹುದ್ದೆಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಕಂಡು ಬರುತ್ತಿದ್ದು, ಇವುಗಳಿಗೆ ಸ್ವಯಂ ಪ್ರೇರಣೆಯಿಂದ ಕಡಿವಾಣ ಹಾಕಿಕೊಳ್ಳಬೇಕು. ಸರ್ಕಾರ ಅಧಿಕಾರಿಗಳು, ನೌಕರರ ಮೇಲೆ ಹೊಂದಿರುವ ವಿಶ್ವಾಸ ಹಾಗು ಹುದ್ದೆಯ ಘನತೆ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
    ಸರ್ಕಾರಿ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ ಬೇಸರ ಬರದಂತೆ ನಡೆದುಕೊಳ್ಳಬೇಕು. ಅದರಲ್ಲೂ ಶೋಷಿತರು, ಅಸಹಾಯಕರು, ಬಡವರ್ಗದವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕೆಂದು ಕರೆ ನೀಡಿದರು.  
     ಇದಕ್ಕೂ ಮೊದಲು ಮಾತನಾಡಿದ ಪುರುಷೋತ್ತಮ್, ಇಲಾಖೆ ವತಿಯಿಂದ ಸಾರ್ವಜನಿಕರ ಕುಂದು ಕೊರತೆ ಸಭೆ ನಡೆಸುವುದಾಗಿ ಪ್ರಚಾರ ನೀಡಲಾಗುತ್ತಿದೆ. ಆದರೂ ಸಹ ಸಾರ್ವಜನಿಕರು ಭಾಗವಹಿಸದಿರುವುದು ವಿಷಾದನೀಯ ಸಂಗತಿಯಾಗಿದೆ. ಇದಕ್ಕೆ ಕಾರಣ ಏನೆಂಬುದನ್ನು ಹುಡುಕಿಕೊಳ್ಳಬೇಕಾಗಿದೆ. ಸಾರ್ವಜನಿಕರಿಲ್ಲದೆ ಸಭೆ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ. ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ಎಚ್ಚರವಹಿಸಬೇಕೆಂದರು.
       ಸಭೆ ಮುಕ್ತಾಯಗೊಂಡ ನಂತರ ೨-೩ ದೂರು :
    ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪುರುಷೋತ್ತಮ್‌ರವರು ಸಾರ್ವಜನಿಕರ ಕುಂದುಕೊರತೆ ಸಭೆ ಮುಕ್ತಾಯಗೊಳಿಸಿ ಹೊರಡುವ ವೇಳೆ ಭೂಮಿ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಾರೀಕಟ್ಟೆ ನಿವಾಸಿಯೊಬ್ಬರು ಹಾಗು ಜೆಡಿಯು ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ನ್ಯಾಯಬೆಲೆ ಅಂಗಡಿಗಳಲ್ಲಿ ಕಾನೂನು ಉಲ್ಲಂಘನೆ, ಮೈಕ್ರೋ ಫೈನಾನ್ಸ್‌ಗಳಿಂದ ಕಿರುಕುಳ ಹಾಗು ಬಿಡಾಡಿ ಕುದುರೆಗಳ ಹಾವಳಿಗೆ ಸಂಬಂಧಿಸಿದಂತೆ ದೂರು ನೀಡಿದರು. ಸುಮಾರು ೨-೩ ದೂರುಗಳು ಮಾತ್ರ ಸಲ್ಲಿಕೆಯಾದವು.
    ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರಾಧಾಕೃಷ್ಣ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಉಪಸ್ಥಿತರಿದ್ದರು. ಕಂದಾಯ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.


ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಪುರುಷೋತ್ತಮ್ ಸಾರ್ವಜನಿಕರ ಕುಂದುಕೊರತೆ ಸಭೆ ಮುಕ್ತಾಯಗೊಳಿಸಿ ಹೊರಡುವ ವೇಳೆ ೨-೩ ದೂರುಗಳು ಸಲ್ಲಿಕೆಯಾದವು.

ರಂಗ ಚಟುವಟಿಕೆಗಳಿಗೆ ಕ್ರಿಯಾಶೀಲತೆ, ಯುವ ಸಮುದಾಯ ಆಕರ್ಷಿಸಲು ಪ್ರಯತ್ನ : ಕೊಟ್ರಪ್ಪ ಜಿ. ಹಿರೇಮಾಗಡಿ

ಭದ್ರಾವತಿ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಂಗಮಂಥನ ಸಮಾಲೋಚನಾ ಸಭೆಯಲ್ಲಿ ಹಿರಿಯ ರಂಗ ಕಲಾವಿದ ವೈ.ಕೆ ಹನುಮಂತಯ್ಯ ಮಾತನಾಡಿದರು.  
    ಭದ್ರಾವತಿ, ಮಾ. ೨೬: ಕಲಾವಿದರು, ಶಿವಮೊಗ್ಗ ಸಂಘಟನೆ ಹವ್ಯಾಸಿ ರಂಗ ತಂಡಗಳ ಕಲಾವಿದರ ಸಂಘದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ರಂಗ ಚಟುವಟಿಕೆಗಳಿಗೆ ಕ್ರಿಯಾಶೀಲತೆ ತರುವ ನಿಟ್ಟಿನಲ್ಲಿ ಮುಂದಾಗಿದೆ ಎಂದು ಸಂಘಟನೆ ಅಧ್ಯಕ್ಷ ಕೊಟ್ರಪ್ಪ ಜಿ. ಹಿರೇಮಾಗಡಿ ತಿಳಿಸಿದರು.
    ಅವರು ನಗರದ ಜನ್ನಾಪುರ ಎನ್‌ಟಿಬಿ ರಸ್ತೆಯಲ್ಲಿರುವ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಂಗ ಮಂಥನ ಸಮಾಲೋಚನಾ ಸಭೆಯ ನೇತೃತ್ವವಹಿಸಿ ಮಾತನಾಡಿದರು.  
ಇತ್ತೀಚಿನ ದಿನಗಳಲ್ಲಿ ರಂಗ ಚಟುವಟಿಕೆಗಳು ಕ್ಷೀಣಿಸುತ್ತಿದ್ದು, ಯುವ ಸಮುದಾಯವನ್ನು ರಂಗ ಚಟುವಟಿಕೆಗಳ ಕಡೆ ಆಕರ್ಷಿತರನ್ನಾಸುವ ಮೂಲಕ ರಂಗ ಚಟುವಟಿಕೆಗಳಿಗೆ ಪುನಃ ಜೀವಂತಿಕೆ ತಂದುಕೊಡಬೇಕಾಗಿದೆ. ಯುವ ಸಮುದಾಯ ಹೆಚ್ಚಾಗಿ ಚಲನಚಿತ್ರ, ಟಿ.ವಿ ಚಾನಲ್‌ಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳಿಗೆ ಜೋತುಬಿದ್ದಿದ್ದು, ಭ್ರಮಾ ಲೋಕದಲ್ಲಿ ಮುಳುಗಿದೆ. ಈ ಸಮುದಾಯಕ್ಕೆ ನಟನೆಯ ಮೂಲ ಬೇರು ರಂಗಭೂಮಿ ಎಂಬುದನ್ನು ಮನದಟ್ಟು ಮಾಡಬೇಕಾಗಿದೆ ಎಂದರು.
     ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಮಾತನಾಡಿ, ರಂಗ ಚಟುವಟಿಕೆಗಳ ಮೇಲೆ ರಾಜಕೀಯದ   ಕರಿ ನೆರಳು ಬೀಳದಂತೆ ಎಚ್ಚರವಹಿಸಬೇಕು. ರಂಗ ಕಲಾವಿದರ ಪ್ರತಿಭೆ ಅವರ ಮುಂದಿನ ಭವಿಷ್ಯವನ್ನು ನಿರ್ಧರಿಸಲಿದೆ. ಹೆಚ್ಚು ಹೆಚ್ಚು ಕಲಾವಿದರು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡಷ್ಟು ರಂಗ ಚಟುವಟಿಕೆಗಳಿಗೆ ಮಹತ್ವ ಹೆಚ್ಚಾಗಲಿದೆ. ಎಲೆಮರೆ ಕಾಯಿಯಂತಿರುವ ಕಲಾವಿದರನ್ನು ಹುಡುಕಿ ಬೆಳಕಿಗೆ ತರುವ ನಿಟ್ಟಿನಲ್ಲಿ ಪ್ರಯತ್ನಿಸಬೇಕೆಂದರು.  
ವೈ.ಕೆ ಹನುಮಂತಯ್ಯ, ಜಂಬುಸ್ವಾಮಿ, ಕೆ.ಎಸ್.ರವಿಕುಮಾರ್, ರಾಜ್‌ಕುಮಾರ್, ಕಾ.ರಾ.ನಾಗರಾಜ್, ನಾಗಪ್ಪ, ಚಂದ್ರಕಾಂತ್ ಸೇರಿದಂತೆ ವಿವಿಧ ಕಲಾ ತಂಡಗಳ ಹಿರಿಯ ಕಲಾವಿದರು, ತಂತ್ರಜ್ಞರು ಭಾಗವಹಿಸಿದ್ದರು.
    ಸುಚಿತ್ರ, ವಿಜಯಲಕ್ಷ್ಮಿ ಪ್ರಾರ್ಥನೆ ಮಾಡಿದರು. ಅಪರಂಜಿ ಶಿವರಾಜ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿ.ಆರ್ ಲವ ಪ್ರ್ರಾಸ್ತಾವಿಕ ನುಡಿಗಳನ್ನಾಡಿದರು. ತಮಟೆ ಜಗದೀಶ್ ವಂದಿಸಿದರು.


Thursday, March 25, 2021

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಳ್ಳದಿರಲು ಮನವಿ

ಭದ್ರಾವತಿ, ಮಾ. ೨೫: ತಾಲೂಕಿನ ನವಿಲೆಬಸವಾಪುರ ಗ್ರಾಮದ ಶ್ರೀ ಬಸವಣ್ಣ ದೇವರ ಜಾತ್ರಾ ಮಹೋತ್ಸವ ಮಾ.೨೯ರವರೆಗೆ ನಡೆಯುತ್ತಿದ್ದು, ಕೋವಿಡ್-೧೯ರ ಹಿನ್ನಲೆಯಲ್ಲಿ ಹೆಚ್ಚಿನ ಜನಸಂದಣಿ ಸೇರದಂತೆ ಎಚ್ಚರವಹಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸದಿರುವಂತೆ ಕೋರಲಾಗಿದೆ.
ಜಾತ್ರಾ ದಿನಗಳಂದು ಯಾವುದೇ ತೀರ್ಥಪ್ರಸಾದ ವಿನಿಯೋಗವಿರುವುದಿಲ್ಲ. ಹಿಂದಿನ ವರ್ಷದಂತೆ ಈ ಬಾರಿ ಸಹ ಅನ್ನಸಂತರ್ಪಣೆ ಇರುವುದಿಲ್ಲ. ಬೇರೆ ಬೇರೆ ಗ್ರಾಮ, ತಾಲೂಕು ಹಾಗು ಜಿಲ್ಲೆಗಳಿಂದ ಆಗಮಿಸುವ ಭಕ್ತಾಧಿಗಳು ಈ ಬಾರಿ ಸಹ ಆಗಮಿಸದಿರುವಂತೆ ಮುಜರಾಯಿ ಅಧಿಕಾರಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಕೋರಿದ್ದಾರೆ.

ಮಾ.೨೬ರಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಭದ್ರಾವತಿ, ಮಾ. ೨೫: ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಮಾ.೨೬ರಂದು ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧.೩೦ರ ವರಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ಅಹವಾಲು ಸ್ವೀಕಾರ ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಕೋರಿದ್ದಾರೆ.

ಮಾ.೨೮ರಂದು ೬ನೇ ಶರಣ ಸಾಹಿತ್ಯ ಸಮ್ಮೇಳನ


ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ. ವಿರುಪಾಕ್ಷಪ್ಪ ಮಾತನಾಡಿದರು.
   ಭದ್ರಾವತಿ, ಮಾ. ೨೫: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ಮಾ.೨೮ರಂದು ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ತಾಲೂಕು ೬ನೇ ಶರಣ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪರಿಷತ್ ತಾಲೂಕು ಅಧ್ಯಕ್ಷ ಎಂ. ವಿರುಪಾಕ್ಷಪ್ಪ ತಿಳಿಸಿದರು.
    ಅವರು ಗುರುವಾರ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈಗಾಗಲೇ ನಗರದ ಸ್ತ್ರೀ ರೋಗ ತಜ್ಞೆ, ಬರಹಗಾರರಾದ ಡಾ. ವೀಣಾ ಎಸ್ ಭಟ್‌ರನ್ನು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಅಂದು ಬೆಳಿಗ್ಗೆ ೮.೩೦ಕ್ಕೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ರಾಷ್ಟ್ರಧ್ವಜ, ಕಸಾಪ ಗೌರವ ಸಲಹೆಗಾರ ಕೆ. ಮಂದರಕುಮಾರ್ ನಾಡಧ್ವಜ ಹಾಗು ಪರಿಷತ್ ಅಧ್ಯಕ್ಷ ಎಂ. ವಿರುಪಾಕ್ಷಪ್ಪ ಪರಿಷತ್ ಧ್ವಜಾರೋಣಹ ನೆರವೇರಿಸಲಿದ್ದಾರೆ.
    ಬೆಳಿಗ್ಗೆ ೧೦.೨೦ಕ್ಕೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕುವೆಂಪು ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಬಿ.ಪಿ ವೀರಭದ್ರಪ್ಪ ಸಮ್ಮೇಳನ ಉದ್ಘಾಟಿಸಲಿದ್ದು, ಸಮ್ಮೇಳನಾಧ್ಯಕ್ಷೆ ಡಾ. ವೀಣಾ ಎಸ್ ಭಟ್, ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ನಗರಸಭೆ ಪೌರಾಯುಕ್ತ ಮನೋಹರ್, ಶಿವಮೊಗ್ಗ ಜಿಲ್ಲಾ ಖಜಾನೆ ಉಪನಿರ್ದೇಶಕಿ ಎಚ್.ಎಸ್ ಸಾವಿತ್ರಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
     ಮಧ್ಯಾಹ್ನ ೧೨.೩೦ ರಿಂದ ೧.೧೫ರವರೆಗೆ ಅನುಭವ ಮಂಟಪ-೧ರಲ್ಲಿ ಡಾ. ವೀಣಾ ಎಸ್. ಭಟ್ 'ವ್ಯಕ್ತಿ-ವ್ಯಕ್ತಿತ್ವ-ಸಾಧನೆ' ವಿಷಯ ಮಂಡಿಸಲಿದ್ದು, ಸಹ್ಯಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ ೨ ರಿಂದ ೪ ಗಂಟೆವರೆಗೆ 'ಇಂದಿನ ಸವಾಲುಗಳು-ವಚನ ಸಾಹಿತ್ಯದ ಪರಿಹಾರ' ವಿಷಯ ಕುರಿತು ಚರ್ಚೆ ನಡೆಯಲಿದ್ದು, ಪ್ರಾಧ್ಯಾಪಕರಾದ ಡಾ. ಚನ್ನೇಶ್ ಹೊನ್ನಾಳಿ ಮತ್ತು ಡಾ. ಪ್ರಕಾಶ್ ಮರ್ಗನಳ್ಳಿ ವಿಷಯ ಮಂಡಿಸಲಿದ್ದಾರೆ. ಶಿರಾಳಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಎಚ್. ರಾಜೇಶ್ವರಿ ಅಧ್ಯಕ್ಷತೆ ವಹಿಸಲಿದ್ದಾರೆ.
     ಸಂಜೆ ೫ ರಿಂದ ೬.೩೦ರವರೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಬಿ ಶಂಕರಪ್ಪ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಸಮಾರೋಪ ನುಡಿಗಳನ್ನಾಡಲಿದ್ದಾರೆ ಎಂದರು.
   ಡಾ. ಬಿ.ಜಿ ಧನಂಜಯ ಮಾತನಾಡಿ, ಕಾಯಕ ಯೋಗಿಗಳಾದ ಶರಣರ ವಿಚಾರಧಾರೆಗಳು, ಚಿಂತನೆಗಳು ಸಮಾಜದ ಎಲ್ಲಾ ವರ್ಗಗಳಿಗೂ ತಲುಪಬೇಕೆಂಬ ಉದ್ದೇಶದೊಂದಿಗೆ ವೈಚಾರಿಕ ಮನೋಭಾವದೊಂದಿಗೆ ಸಮ್ಮೇಳನ ಆಯೋಜಿಸಿಕೊಂಡು ಬರಲಾಗುತ್ತಿದೆ. ಅದರಲ್ಲೂ ಯುವ ಸಮೂಹ ಜಾಗೃತಗೊಳ್ಳಬೇಕು. ಸಮಸಮಾಜ ನಿರ್ಮಾಣವಾಗಬೇಕೆಂಬುದು ನಮ್ಮ ಆಶಯವಾಗಿದೆ ಎಂದರು.
    ಪರಿಷತ್ ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್ ಮಾತನಾಡಿ, ಯಾವುದೇ ಧರ್ಮ, ಜಾತಿ ಬೇಧಭಾವವಿಲ್ಲದೆ ಲಿಂಗಾಯಿತ ಪರಂಪರೆಯನ್ನು ಬದಿಗಿಟ್ಟು ಶರಣ ಸಾಹಿತ್ಯ ಪರಿಷತ್ ಕಾರ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಶರಣ ಸಾಹಿತ್ಯ ಪರಿಷತ್ ಸಮಾಜದ ಪ್ರತಿಯೊಬ್ಬರು ನಮ್ಮದು ಎಂಬ ಮನೋಭಾವನೆಯಿಂದ ನೋಡುವಂತೆ ಎಚ್ಚರವಹಿಸಲಾಗಿದೆ. ಶರಣರ ಆಶಯಗಳನ್ನು ಸಮಾಜದ ಮುಖ್ಯವಾಹಿನಿಯಲ್ಲಿ ತರುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಹಕಾರ ಅಗತ್ಯವಿದೆ ಎಂದರು.  
   ಸುದ್ದಿಗೋಷ್ಠಿಯಲ್ಲಿ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ, ಹೇಮಾವತಿ ಚಿಗಟೇರಪ್ಪ, ನಂದಿನಿ, ಮಲ್ಲಿಕಾರ್ಜುನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ತಾಲೂಕು ೬ನೇ ಶರಣ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ, ವೈದ್ಯೆ ಡಾ. ವೀಣಾ ಎಸ್. ಭಟ್

    ಡಾ. ವೀಣಾ ಎಸ್  ಭಟ್  ಪರಿಚಯ :
ಕಾರವಾರ ಜಿಲ್ಲೆಯ ಕುಮಟಾ ತಾಲ್ಲೂಕಿನ ಬೆತ್ತಗೇರಿ ಗ್ರಾಮದಲ್ಲಿ  ೧೯೬೮ರಲ್ಲಿ ಜನಿಸಿದ ಡಾ. ವೀಣಾ ಎಸ್ ಭಟ್  ಪ್ರಾಥಮಿಕ ಶಿಕ್ಷಣವನ್ನು ಬೆತ್ತಗೇರಿ ಗ್ರಾಮದಲ್ಲಿ ಪೂರೈಸಿದ್ದು, ಪ್ರೌಢಶಾಲಾ ಶಿಕ್ಷಣವನ್ನು ಶಿವಮೊಗ್ಗ  ಕಸ್ತೂರಿಬಾ ಬಾಲಕಿಯರ ಶಾಲೆಯಲ್ಲಿ ಹಾಗು ಉನ್ನತ ಶಿಕ್ಷಣವನ್ನು ಜೆ ಎಸ್‌ಎಸ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹುಬ್ಬಳ್ಳಿ ಕೆಎಂಸಿಯಲ್ಲಿ ಪೂರೈಸಿ ವೈದ್ಯಕೀಯ ಪದವಿಯನ್ನು ಪಡೆದುಕೊಂಡಿದ್ದಾರೆ.
      ನಗರದ ನ್ಯೂಟೌನ್ ವಿಐಎಸ್‌ಎಲ್ ೭ ವರ್ಷಗಳ ಕಾಲ ಸ್ತ್ರೀರೋಗ ತಜ್ಞೆಯಾಗಿ ಕಾರ್ಯ ನಿರ್ವಹಿಸಿದ್ದು , ೨೦೦೩ರಿಂದ  ಸ್ವಂತ ನಯನ ಆಸ್ಪತ್ರೆಯಲ್ಲಿ  ಸೇವೆ ಸಲ್ಲಿಸುತ್ತಿದ್ದಾರೆ .
    ಯೋಗ ಶಿಕ್ಷಕಿ :
ಇವರು ಕೇವಲ ವೈದ್ಯರು ಮಾತ್ರವಲ್ಲದೆ ಯೋಗ ಶಿಕ್ಷಕಿ ಸಹ ಆಗಿದ್ದಾರೆ. ಪತಂಜಲಿ ಯೋಗ ಸಂಸ್ಥೆಯ ಯೋಗ ಕಾರ್ಯಕ್ರಮ ಗಳಿಂದ ಪ್ರಭಾವಿತರಾಗಿ ಯೋಗ ಕಲಿಕೆಯಲ್ಲಿ ತೊಡಗಿಸಿಕೊಂಡರು. ಯೋಗವನ್ನು ಸಂಪೂರ್ಣವಾಗಿ ಕಲಿತು ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕರಿಗೆ ಉಚಿತ ಯೋಗ ಹಾಗೂ ಪ್ರಾಣಾಯಾಮ ತರಬೇತಿಯನ್ನು ನೀಡುತ್ತಿದ್ದಾರೆ. ಅಲ್ಲದೆ ಹಲವಾರು ಕಾರ್ಯಕ್ರಮಗಳಲ್ಲಿ ಯೋಗ ಕುರಿತು ಉಪನ್ಯಾಸ ನಡೆಸಿಕೊಟ್ಟಿದ್ದಾರೆ.
    ವೈದ್ಯ ಸಾಹಿತಿ :
    ವೈದ್ಯಕೀಯ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಇವರು ತೊಡಗಿಸಿಕೊಂಡಿದ್ದು, ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಅಂಕಣಕಾರರಾಗಿ ಸೇವೆ ಸಲ್ಲಿಸಿದ್ದು,  ಆರೋಗ್ಯಕ್ಕೆ ಸಂಬಂಧಿಸಿದ ಇವರ ಆ ಲೇಖನಗಳು ಪ್ರಕಟಗೊಂಡಿವೆ.
       ಬೊಜ್ಜಿಗಿದೆ ಪರಿಹಾರ, ತಾರುಣ್ಯದ ತಲ್ಲಣಗಳು, ಪ್ರಶ್ನೋತ್ತರ ಮಾಲಿಕೆ ಮತ್ತು ಋತುಚಕ್ರದ ಸುತ್ತಮುತ್ತ ಪುಸ್ತಕಗಳು ಪ್ರಕಟಗೊಂಡಿವೆ.  
    ಸಂದ ಪ್ರಶಸ್ತಿ ಗೌರವಗಳು:
ಇವರಿಗೆ ಏಷ್ಯಾ ಪೆಸಿಫಿಕ್ ಎಕ್ಸಲೆನ್ಸ್ ಅವಾರ್ಡ್, ಆರೋಗ್ಯ ಮಾತಾ, ಯುಗಾದಿ ಪುರಸ್ಕಾರ,  ಸುವರ್ಣ ಕರ್ನಾಟಕ ಪತಂಜಲಿ ರತ್ನ, ಎಸ್ ಎನ್ ಮಲ್ಹೋತ್ರಾ ರಾಷ್ಟ್ರಪ್ರಶಸ್ತಿ,  ವೈದ್ಯ ಸೇವಾ ರತ್ನ, ಮಾನವರತ್ನ ಶ್ರೇಷ್ಠ ವೈದ್ಯ ಸಾಹಿತಿ, ಶ್ರೇಷ್ಠ ಅಲ್ಯುಮಿನಿ, ಸಕಲ ಕಲಾ ವಲ್ಲಭೆ ಮತ್ತು ಈಶ್ವರಮ್ಮ ಪುರಸ್ಕಾರ ಸೇರಿದಂತೆ ಇನ್ನಿತರ ಪ್ರಶಸ್ತಿಗಳು ಲಭಿಸಿವೆ . ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಸೇರಿದಂತೆ ವಿವಿಧ  ಸಂಘ ಸಂಸ್ಥೆಗಳು  ಸನ್ಮಾನಿಸಿ ಗೌರವಿಸಿವೆ.

Wednesday, March 24, 2021

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸರ್ವ ಸದಸ್ಯರ ಸಭೆ

ಭದ್ರಾವತಿ, ಮಾ. ೨೪: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸರ್ವ ಸದಸ್ಯರ ಸಭೆ ಹಳೇನಗರದ ಸಂಘದ ನೂತನ ಕಟ್ಟಡದ ಆವರಣದಲ್ಲಿ ನಡೆಯಿತು.
    ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ ಮಾತನಾಡಿ, ಸಂಘದ ಬಹಳ ವರ್ಷಗಳ ಬೇಡಿಕೆ ಈಡೇರಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಿರುವ ಬಿ.ವೈ. ರಾಘವೇಂದ್ರ, ಶಾಸಕರ ನಿಧಿಯಿಂದ ಅನುದಾನ ಬಿಡುಗೊಳಿಸಿರುವ ಬಿ.ಕೆ ಸಂಗಮೇಶ್ವರ್ ಹಾಗು ದೇಣಿಗೆ ನೀಡಿರುವ ಸಂಘದ ಸದಸ್ಯರು, ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
   ಸಂಘದ ಖಜಾಂಚಿ ಲೆಕ್ಕಪತ್ರ ಮಂಡಿಸಿ ೫೦ ಲಕ್ಷ ರು. ವೆಚ್ಚದ ನೂತನ ಕಟ್ಟಡ ನಿರ್ಮಾಣಕ್ಕೆ ಇದುವರೆಗೂ ೩೨ ಲಕ್ಷ ರು. ಪಾವತಿಸಲಾಗಿದೆ. ಉಳಿದಂತೆ ಪ್ರಸಕ್ತ ಸಾಲಿನಲ್ಲಿ ಖರ್ಚು, ವೆಚ್ಚಗಳನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ ಎಂದರು.
    ಹಿರಿಯ ಸದಸ್ಯರಾದ ಕೆ. ಶಾಮಣ್ಣ, ಟಿ.ಜಿ ಚಂದ್ರಪ್ಪ, ಪಿಡಬ್ಲ್ಯೂಡಿ ರಂಗಸ್ವಾಮಿ, ಕೆ.ಎಸ್ ಶಿವಮೂರ್ತಿ, ಸಿ. ಪರಮೇಶ್ವರಪ್ಪ, ಎಚ್.ಎನ್ ಮಹಾರುದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿದ್ಯುತ್ ಕೊರತೆ : ಬೆಳಿಗ್ಗೆ, ಸಂಜೆ ತಲಾ ೧ ಗಂಟೆ ಲೋಡ್ ಶೆಡ್ಡಿಂಗ್

ಭದ್ರಾವತಿ, ಮಾ. ೨೪: ಅನಿವಾರ್ಯ ಕಾರಣಗಳಿಂದ ತಾಲೂಕಿನ ಮೆಸ್ಕಾಂ ವ್ಯಾಪ್ತಿಯ ವಿದ್ಯುತ್ ಪೂರೈಕೆಯಲ್ಲಿ ಬೆಳಿಗ್ಗೆ ಮತ್ತು ಸಂಜೆ ತಲಾ ೧ ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ ಎಂದು ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
   ಕರ್ನಾಟಕ ಪವರ್ ಕಾರ್ಪೋರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ತಾಂತ್ರಿಕ ದೋಷ ಕಂಡು ಬಂದಿರುವುದರಿಂದ ಕೆಲವು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಹಿನ್ನಲೆಯಲ್ಲಿ ಬೇಡಿಕೆಯಷ್ಟು ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಕೆಪಿಸಿಯಿಂದ ಸುಮಾರು ೨೮೬೪ ಎಂ.ಡಬ್ಲ್ಯೂ, ಯುಪಿಸಿಎಲ್‌ನಿಂದ ಸುಮಾರು ೧೦೧೦ ಎಂ.ಡಬ್ಲ್ಯೂ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಿಂದ ಸುಮಾರು ೪೦೭ ಎಂ.ಡಬ್ಲ್ಯೂನಷ್ಟು ವಿದ್ಯುತ್ ಕೊರತೆ ಉಂಟಾಗಿದೆ. ಈ ಹಿನ್ನಲೆಯಲ್ಲಿ ಮೆಸ್ಕಾಂ ೨೦೦ ಎಂ.ಡಬ್ಲ್ಯೂನಷ್ಟು ವಿದ್ಯುತ್ ಕೊರತೆ ಎದುರಿಸುವಂತಾಗಿದೆ.
    ಸ್ಟೇಟ್ ಲೋಡ್ ಡಿಸ್ಪ್ಯಾಚ್ ಸೆಂಟರ್ ಸೂಚನೆಯಂತೆ ತಾಲೂಕಿನಲ್ಲಿ ವಿದ್ಯುತ್ ಜಾಲದ ಸುರಕ್ಷತೆಯ ದೃಷ್ಟಿಯಿಂದ ಅನಿಯಮಿತವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಬರಬಹುದು. ಈ ಹಿನ್ನಲೆಯಲ್ಲಿ ಬೆಳಿಗ್ಗೆ ೧ ಗಂಟೆ ಹಾಗು ಸಂಜೆ ೧ ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುವುದು ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ.

ಮಾ.೨೫ರಂದು ‘ಭದ್ರಾವತಿ ರಂಗಭೂಮಿ-ಭವಿತವ್ಯದ ದಾರಿಗಳು’

   ಭದ್ರಾವತಿ, ಮಾ. ೨೪: ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘ ಹಾಗು ರಂಗ ಕಲಾವಿದರು ಜೊತೆಗೂಡಿ ಮಾ.೨೫ರಂದು ಸಂಜೆ ೫.೪೫ಕ್ಕೆ 'ಭದ್ರಾವತಿ ರಂಗಭೂಮಿ-ಭವಿತವ್ಯದ ದಾರಿಗಳು' ವಿಚಾರ ಕುರಿತು ರಂಗ ಮಂಥನ ಏರ್ಪಡಿಸಲಾಗಿದೆ.
   ಶಿವಮೊಗ್ಗ ಕಲಾವಿದರು ಅಧ್ಯಕ್ಷ ಕೊಟ್ರಪ್ಪ ಜಿ. ಹಿರೇಮಾಗಡಿ ಅಧ್ಯಕ್ಷತೆ ವಹಿಸಲಿದ್ದು, ತಾಲೂಕು ಕಾರ್ಯನಿರತಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಅಪರಂಜಿ ಅಭಿನಯ ಶಾಲೆಯ ಅಪರಂಜಿ ಶಿವರಾಜ್ ಮತ್ತು ಕಲಾವಿದರು ಪ್ರಧಾನ ಕಾರ್ಯದರ್ಶಿ ಜಿ.ಆರ್ ಲವ ಉಪಸ್ಥಿತರಿರುವರು.

ಅದ್ದೂರಿಯಾಗಿ ಜರುಗಿದ ಶ್ರೀ ಮದ್ದೂರಮ್ಮ ದೇವಿ ಜಾತ್ರಾ ಮಹೋತ್ಸವ

ಭದ್ರಾವತಿ ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಶ್ರೀ ಮದ್ದೂರಮ್ಮ ದೇವಿ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಅದ್ದೂರಿಯಾಗಿ ಜರುಗಿತು. ಅಮ್ಮನವರಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ ನೆರವೇರಿಸಲಾಯಿತು.
  ಭದ್ರಾವತಿ, ಮಾ. ೨೪: ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಶ್ರೀ ಮದ್ದೂರಮ್ಮ ದೇವಿ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಅದ್ದೂರಿಯಾಗಿ ಜರುಗಿತು.
   ಬುಧವಾರ ಮಧ್ಯಾಹ್ನ ಅಮ್ಮನವರಿಗೆ ವಿಶೇಷ ಪೂಜೆ, ಮಹಾಮಂಗಳಾರತಿ, ತಂಬಿಟ್ಟಿನ ಆರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ದೇವಸ್ಥಾನ ಸೇವಾ ಸಮಿತಿ ವತಿಯಿಂದ ಭಕ್ತಾಧಿಗಳಿಗೆ ತಂಪು ಪಾನೀಯ ವಿತರಣೆ, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.

ವಿಶ್ವ ಕ್ಷಯ ರೋಗ ದಿನಾಚರಣೆ : ಜಾಥಾ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಚಾಲನೆ

ಭದ್ರಾವತಿಯಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಬುಧವಾರ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಚಾಲನೆ ನೀಡಿದರು.  
   ಭದ್ರಾವತಿ, ಮಾ. ೨೪: ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಬುಧವಾರ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಚಾಲನೆ ನೀಡಿದರು.  
    ತಾಲೂಕು ಆರೋಗ್ಯಾಧಿಕಾರಿ ಎಂ.ವಿ ಅಶೋಕ್ ಮಾತನಾಡಿ,  'ಕ್ಷಯ ರೋಗ ನಿರ್ಮೂಲನೆಗೆ ಕಾಲಘಟಿಸುತ್ತಿದೆ' ಘೋಷ ವಾಕ್ಯದೊಂದಿಗೆ ಈ ಬಾರಿ ವಿಶ್ವ ಕ್ಷಯ ರೋಗ ದಿನಾಚರಣೆ ಆಚರಿಸಲಾಗುತ್ತಿದೆ. ಭಾರತದಲ್ಲಿ ಪ್ರತಿದಿನ ೬,೦೦೦ ರೋಗಿಗಳಿಗೆ ಕ್ಷಯರೋಗ ಕಂಡುಬರುತ್ತಿದ್ದು, ಸುಮಾರು ೬೦೦ ಜನ (೫ ನಿಮಿಷಕ್ಕೆ ಇಬ್ಬರು) ಸಾವನ್ನಪ್ಪುತ್ತಿದ್ದಾರೆ. ಸತತ ೨ ವಾರಗಳ ಕೆಮ್ಮು ಮತ್ತು ಕಫ, ಸಂಜೆ ಜ್ವರ, ಎದೆ ನೋವು, ರಾತ್ರಿ ವೇಳೆ ಬೆವರುವುದು, ತೂಕ ಕಡಿಮೆ ಆಗುವುದು ಹಾಗೂ ಕೆಲವೊಮ್ಮೆ ರಕ್ತದಲ್ಲಿ ಕಫ ಬೀಳುವುದು. ಕ್ಷಯರೋಗದ ಮುಖ್ಯ ಲಕ್ಷಣಗಳಾಗಿವೆ ಎಂದರು.
   ಕ್ಷಯರೋಗಿಯು ಕೆಮ್ಮಿದಾಗ ಮತ್ತು ಸೀನಿದಾಗ ಹೊರಬರುವ ತುಂತುರು ಹನಿಗಳಿಂದ ಗಾಳಿಯ ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ರೋಗಾಣುಗಳು ಹರಡುತ್ತವೆ.  ಕ್ಷಯರೋಗದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮಾಹಿತಿ ಶಿಕ್ಷಣ ಮತ್ತು ಸಂಪರ್ಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಈ ವರ್ಷ ಕ್ಷಯರೋಗ ನಿರ್ಮೂಲನೆಗೆ ಶಿವಮೊಗ್ಗ ಜಿಲ್ಲೆ ಆಯ್ಕೆಯಾಗಿದ್ದು, ಈ ಹಿನ್ನಲೆಯಲ್ಲಿ ಪ್ರಮುಖ ಸ್ಥಳಗಳಲ್ಲಿ ಬೀದಿ ನಾಟಕಗಳನ್ನು, ಶಾಲಾ-ಕಾಲೇಜುಗಳಲ್ಲಿ ಐ.ಇ.ಸಿ ಕಾರ್ಯಕ್ರಮ, ನಗರದ ಪ್ರಮುಖ ಕಟ್ಟಡಗಳ ಮೇಲೆ ಕೆಂಪು ದೀಪಗಳನ್ನು ಬೆಳಗಿಸುವುದು ಹಾಗು ತಾಲೂಕಿನ ಎಲ್ಲಾ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಆಯಾ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಐ.ಇ.ಸಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.  
    ಆಶಾ ಮೇಲ್ವಿಚಾರಕಿ ವಸಂತ, ಹಿರಿಯ ಆರೋಗ್ಯ ಸಹಾಯಕ ಆನಂದಮೂರ್ತಿ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ನಿರ್ಮಲ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜ್ ನರ್ಸಿಂಗ್ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
   ತಾಲೂಕು ಕಛೇರಿ ಮುಂಭಾಗ ಆರಂಭಗೊಂಡ ಜಾಥಾ ಬಸವೇಶ್ವರ ವೃತ್ತ, ಸಿ.ಎನ್ ರಸ್ತೆ ರಸ್ತೆ ಮೂಲಕ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ತಲುಪಿತು.  

Tuesday, March 23, 2021

ಲತೀಶ್ ಪಾಲ್ದಾನೆ ವರ್ಗಾವಣೆ : ಬೀಳ್ಕೊಡುಗೆ

ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲತೀಶ್ ಪಾಲ್ದಾನೆ ಮಂಗಳೂರು ಆಕಾಶವಾಣಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದು, ಈ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಬೀಳ್ಕೊಡುಗೆ ನೀಡಲಾಯಿತು.
   ಭದ್ರಾವತಿ, ಮಾ. ೨೩: ನಗರದ ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲತೀಶ್ ಪಾಲ್ದಾನೆ ಮಂಗಳೂರು ಆಕಾಶವಾಣಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದಾರೆ.
   ಉತ್ತಮವಾಗಿ ಕರ್ತವ್ಯ ನಿರ್ವಹಿಸುವ ಜೊತೆಗೆ ಎಲ್ಲರೊಂದಿಗೂ ಒಡನಾಟಹೊಂದಿದ್ದ ಲತೀಶ್ ಪಾಲ್ದಾನೆರವರ ಕರ್ತವ್ಯ ಸ್ಮರಿಸುವ ಜೊತೆಗೆ ವಿಶೇಷವಾಗಿ ಆಕಾಶವಾಣಿ ಕೇಂದ್ರದ ಸಾಂದರ್ಭಿಕ ಉದ್ಘೋಷಕರು ಅಭಿನಂದಿಸುವ ಮೂಲಕ ಬೀಳ್ಕೊಡುಗೆ ನೀಡಿದರು.
     ಕರ್ನಾಟಕ ರಾಜ್ಯ ಸಾಂದರ್ಭಿಕ ಉದ್ಘೋಷಕರ ಸಂಘದ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ಶರ್ಮ, ಶಾರದಾ, ಬಸವರಾಜು, ಶಕೀಲ್, ಶೋಭಾ, ನಂದಿನಿ, ಮೀನಾ, ಪ್ರೇಮಲತಾ, ಯೋಗೀಶ್ವರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಂಚಿ ಹೊನ್ನಮ್ಮ ಬಾಲಕಿಯರ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಭದ್ರಾವತಿ ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಹಾಗೂ ವೈಯುಕ್ತಿಕ ಚಾಂಪಿಯನ್ ಶಿಪ್ ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಮಾ. ೨೩: ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಹಾಗೂ ವೈಯುಕ್ತಿಕ ಚಾಂಪಿಯನ್ ಶಿಪ್ ತಮ್ಮದಾಗಿಸಿಕೊಂಡಿದ್ದಾರೆ.
   ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ತಾಲೂಕಿನ ವಿವಿಧ ಕಾಲೇಜುಗಳ ಕ್ರೀಡಾ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಿದವು. ಬಹುತೇಕ ತಂಡಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದವು.
   ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆಯನ್ನು ಪ್ರಾಂಶುಪಾಲರು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಉಪನ್ಯಾಸಕ ವೃಂದ ಹಾಗು ಸಿಬ್ವಂದಿ ವರ್ಗದವರು ಅಭಿನಂದಿಸಿದ್ದಾರೆ.

೧೮೫ನೇ ಶ್ರಿ ರಾಮಕೃಷ್ಣ ಪರಮಹಂಸರ ಜಯಂತಿ

ಭದ್ರಾವತಿ ಹಳೇನಗರದ ಖಂಡೇರಾವ್ ಕೊಪ್ಪಲ್‌ನಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲಾಶ್ರಮದಲ್ಲಿ ೧೮೫ನೇ ಶ್ರೀ ರಾಮಕೃಷ್ಣ ಪರಮಹಂಸರ ಜಯಂತಿ ಆಚರಿಸಲಾಯಿತು.
   ಭದ್ರಾವತಿ, ಮಾ. ೨೩: ಹಳೇನಗರದ ಖಂಡೇರಾವ್ ಕೊಪ್ಪಲ್‌ನಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲಾಶ್ರಮದಲ್ಲಿ ೧೮೫ನೇ ಶ್ರೀ ರಾಮಕೃಷ್ಣ ಪರಮಹಂಸರ ಜಯಂತಿ ಆಚರಿಸಲಾಯಿತು.
   ೧೯೫೧ರಲ್ಲಿ ಸಂಗೀತ ವಿದ್ವಾನ್ ದಿವಂಗತ ಎಚ್.ಎನ್ ರಾಜಣ್ಣನವರಿಂದ ಸ್ಥಾಪಿತವಾದ ಈ ಗುರುಕುಲಾಶ್ರಮದಲ್ಲಿ ಪ್ರತಿ ವರ್ಷ ಶ್ರೀ ರಾಮಕೃಷ್ಣ ಪರಮಹಂಸರ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ. ಜಯಂತಿ ಅಂಗವಾಗಿ ಭಜನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಗುರುಕುಲಾಶ್ರಮದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಾ.೨೪ರಂದು ವಿಶ್ವ ಕ್ಷಯರೋಗ ದಿನಾಚರಣೆ : ಜಾಥಾ

    ಭದ್ರಾವತಿ, ಮಾ. ೨೩: ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಮಾ.೨೪ರಂದು ಜಾಥಾ ಹಮ್ಮಿಕೊಳ್ಳಲಾಗಿದೆ.
     ಈ ಬಾರಿ 'ಕ್ಷಯರೋಗ ನಿರ್ಮೂಲನೆಗೆ ಕಾಲಘಟಿಸುತ್ತಿದೆ' ಘೋಷ ವಾಕ್ಯದೊಂದಿಗೆ ವಿಶ್ವ ಕ್ಷಯರೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಬೆಳಿಗ್ಗೆ ೯.೩೦ಕ್ಕೆ ತಾಲೂಕು ಕಛೇರಿ ಮುಂಭಾಗದಿಂದ ಜಾಥಾ ಆರಂಭಗೊಂಡು ಬಸವೇಶ್ವರ ವೃತ್ತ, ಸಿ.ಎನ್ ರಸ್ತೆ ಮೂಲಕ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ತಲುಪಲಿದೆ.
ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಆರ್‌ಎಸ್‌ಎಸ್ ಧುರೀಣ ವೆಂಕಟೇಶ್ ರಾಜ್ ಅರಸು ನಿಧನ

ವೆಂಕಟೇಶ್ ರಾಜ್ ಅರಸು
   ಭದ್ರಾವತಿ, ಮಾ. ೨೩: ಸಂಘ ಪರಿವಾರದ ಹಿರಿಯ ಧುರೀಣ, ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕ ವೆಂಕಟೇಶ್ ರಾಜ್ ಅರಸು ನಿಧನ ಹೊಂದಿದರು.
ನಗರದ ಹೊಸಮನೆ ಹನುಮಂತನಗರದಲ್ಲಿ ವಾಸವಾಗಿದ್ದ ವೆಂಕಟೇಶ್ ರಾಜ್ ಅರಸುರವರು ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹೊಂದಿದ್ದರು.
    ಇವರು ನಾಗಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ತರಬೇತಿ ಪಡೆದು ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಒಡನಾಡಿಯಾಗಿದ್ದರು. ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಶಿವಮೊಗ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ೩ ಜಿಲ್ಲೆಗಳನ್ನೊಳಗೊಂಡ ಯುವಮೋರ್ಚಾದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ರೈತ ಹೋರಾಟಗಳಲ್ಲಿ ಸಹ ಮುಂಚೂಣಿಯಲ್ಲಿದ್ದರು.
    ಇವರ ನಿಧನಕ್ಕೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ನರಸಿಂಹಚಾರ್, ನಗರಸಭೆ ಮಾಜಿ ಉಪಾಧ್ಯಕ್ಷ ಟಿ. ವೆಂಕಟೇಶ್ ಸೇರಿದಂತೆ ಸಂಘ ಪರಿವಾರದ ಪ್ರಮುಖರು, ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Monday, March 22, 2021

ಪಂಗುಣಿ-ಉತ್ತಿರ’ ತೀರ್ಥ ಕಾವಡಿ ಜಾತ್ರಾ ಮಹೋತ್ಸವಕ್ಕೆ ಚಾಲನೆ

'
ಭದ್ರಾವತಿ ಸಮೀಪದ ಎಂ.ಸಿ ಹಳ್ಳಿಯಲ್ಲಿರುವ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಮಾ.೩೧ರವರೆಗೆ 'ಪಂಗುಣಿ-ಉತ್ತಿರ' ತೀರ್ಥ ಕಾವಡಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು, ಸೋಮವಾರ ತರೀಕೆರೆ ಕ್ಷೇತ್ರದ ಶಾಸಕ ಡಿ.ಎಸ್ ಸುರೇಶ್ ಧ್ವಜಾರೋಹಣದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
  ಭದ್ರಾವತಿ, ಮಾ. ೨೨: ಇಲ್ಲಿಗೆ ಸಮೀಪದ ಎಂ.ಸಿ ಹಳ್ಳಿಯಲ್ಲಿರುವ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಮಾ.೩೧ರವರೆಗೆ 'ಪಂಗುಣಿ-ಉತ್ತಿರ' ತೀರ್ಥ ಕಾವಡಿ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು, ಸೋಮವಾರ ತರೀಕೆರೆ ಕ್ಷೇತ್ರದ ಶಾಸಕ ಡಿ.ಎಸ್ ಸುರೇಶ್ ಧ್ವಜಾರೋಹಣದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಶ್ರೀ ಕ್ಷೇತ್ರದ ಮುರುಗೇಶ್ ಸ್ವಾಮೀಜಿ ನೇತೃತ್ವದಲ್ಲಿ ಬೆಳಿಗ್ಗೆ ವಿಶೇಷ ಪೂಜೆ, ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ಮಾ.೨೮ರಂದು ಪಂಗುಣಿ-ಉತ್ತಿರ ತೀರ್ಥ ಕಾವಡಿ ಉತ್ಸವ ನಡೆಯಲಿದ್ದು, ಅಂದು ಬೆಳಿಗ್ಗೆ ೪ ಗಂಟೆಗೆ ವಿಶ್ವರೂಪ ದರ್ಶನ, ೫ ಗಂಟೆಗೆ ಉತ್ಸವ ಪೂಜೆ, ೬.೩೦ರಿಂದ ಭಕ್ತರು ಹರಕೆ ಹೊತ್ತು ತರುವ ಪುಣ್ಯತೀರ್ಥ ಮತ್ತು ಕಾವಡಿ ಸಮರ್ಪಣೆ, ೮ ಗಂಟೆಗೆ ಸಂಧಿಪೂಜೆ, ಮಧ್ಯಾಹ್ನ ೧೨ ಗಂಟೆಗೆ ಕೂಡ್ಲಿ ಸಂಗಮತೀರ್ಥ ಅಭಿಷೇಕ ಮತ್ತು ಉಚ್ಚಿಕಾಲಪೂಜೆ, ಸಂಜೆ ೫.೩೦ಕ್ಕೆ ದೀಪರಾಧನೆ, ರಾತ್ರಿ ೧೦ಕ್ಕೆ ಅರ್ಧಜಾಮ ಪೂಜೆ ಜರುಗಲಿವೆ.
    ಧ್ವಜಾರೋಹಣ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಪ್ರಮುಖರಾದ ಚಂದ್ರಘೋಷಣ್, ಕಣ್ಣಪ್ಪ, ಸುಂದರ್‌ಬಾಬು, ತಾಲೂಕು ಪಂಚಾಯಿತಿ ಸದಸ್ಯ ಕೆ. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದೇಶದೆಲ್ಲೆಡೆ ಎಎಪಿ ವಿಸ್ತರಣೆಗೆ ಚಿಂತನೆ : ಬೇರುಮಟ್ಟದಲ್ಲಿ ಸಂಘಟಿಸಲು ಹೆಚ್ಚಿನ ಗಮನ

ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅಭ್ಯರ್ಥಿಗಳು ಸ್ಪರ್ಧೆ : ರೂಮಿಬಾಟಿ


ಮುಂಬರುವ ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಹಿನ್ನಲೆಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪೂರ್ವ ಸಿದ್ದತಾ ಸಭೆಯಲ್ಲಿ ಸುವರ್ಣ ಕರ್ನಾಟಕ ನಿರ್ಮಾಣಕ್ಕಾಗಿ ಮಿಸ್ಡ್ ಕಾಲ್ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.  
    ಭದ್ರಾವತಿ, ಮಾ. ೨೨: ಆಮ್ ಆದ್ಮಿ ಪಾರ್ಟಿ ಕೇವಲ ದೆಹಲಿಗೆ ಮಾತ್ರ ಸೀಮಿತವಾಗದೆ ದೇಶದ ಎಲ್ಲೆಡೆ ವಿಸ್ತರಿಸಿಕೊಳ್ಳುವ  ಉದ್ದೇಶದೊಂದಿಗೆ ಮುನ್ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದಲ್ಲೂ ಕೂಡ ಪಕ್ಷ ಸಂಘಟನೆಗೆ ಹೆಚ್ಚಿನ ಗಮನ ಹರಿಸಿದೆ ಎಂದು ಪಕ್ಷದ ಕರ್ನಾಟಕ ಉಸ್ತುವಾರಿ, ದೆಹಲಿಯ ರೂಮಿಬಾಟಿ ತಿಳಿಸಿದರು.
   ಮುಂಬರುವ ನಗರಸಭೆ ಚುನಾವಣೆಯಲ್ಲಿ ಹಿನ್ನಲೆಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪೂರ್ವ ಸಿದ್ದತಾ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
    ದೇಶದ ಎಲ್ಲೆಡೆ ಪಕ್ಷಕ್ಕೆ ಹೆಚ್ಚಿನ ಜನಬೆಂಬಲ ವ್ಯಕ್ತವಾಗುತ್ತಿದೆ. ಇದೀಗ ಬೇರುಮಟ್ಟದಿಂದ ಪಕ್ಷವನ್ನು ಸಂಘಟಿಸುವ ಅಗತ್ಯವಿದೆ. ಈ ಹಿನ್ನಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಸ್ಪರ್ಧಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲೂ ಪಕ್ಷ ತನ್ನ ಅಸ್ತಿತ್ವ ಕಂಡುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
   ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಂ.ಪಿ ದರ್ಶನ್ ಜೈನ್ ಮಾತನಾಡಿ, ಒಂದು ರಾಜಕೀಯ ಪಕ್ಷ ದೇಶದ ಆಡಳಿತ ವ್ಯವಸ್ಥೆಯಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸಬಹುದು, ಜನರ ಸಂಕಷ್ಟಗಳಿಗೆ ಯಾವ ರೀತಿ ಸ್ಪಂದಿಸಬಹುದು. ಪಾರದರ್ಶಕ ಆಡಳಿತ ಯಾವ ರೀತಿ ನೀಡಬಹುದು ಎಂಬುದನ್ನು ಆಮ್ ಆದ್ಮಿ ಪಾರ್ಟಿ ದೆಹಲಿಯಲ್ಲಿ ಕಳೆದ ೧೦ ವರ್ಷಗಳ ಅವಧಿಯಲ್ಲಿ ತೋರಿಸಿಕೊಟ್ಟಿದೆ. ಕೇವಲ ಚುನಾವಣೆಗೆ ಸ್ಪರ್ಧಿಸುವುದು ಮುಖ್ಯವಲ್ಲ. ಗೆಲುವು ಸಾಧಿಸುವುದು, ಪ್ರಬಲ ಪೈಪೋಟಿ ನೀಡುವುದು ನಮ್ಮ ಗುರಿಯಾಗಿದೆ. ರಾಜ್ಯದಲ್ಲಿ ಸುವರ್ಣ ಕರ್ನಾಟಕ ನಿರ್ಮಾಣ ಮಾಡುವುದು ಪಕ್ಷದ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಸ್ವಇಚ್ಛಿಯಿಂದ ಪಕ್ಷವನ್ನು ಬೆಂಬಲಿಸುವವರು ೭೬೬೯೪೦೦೪೧೦ ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಬಹುದು ಎಂದರು.
   ಭದ್ರಾವತಿಯಲ್ಲಿ ಕಳೆದ ೨ ವರ್ಷಗಳಿಂದ ಪಕ್ಷವನ್ನು ಎಲ್ಲಾ ವಾರ್ಡ್‌ಗಳ ವ್ಯಾಪ್ತಿಯಲ್ಲೂ ಬೇರುಮಟ್ಟದಿಂದ ಸಂಘಟಿಸಲಾಗುತ್ತಿದೆ. ವಿವಿಧ ಸಂಘಟನೆಗಳ ಜೊತೆ ಸೇರಿ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ.  ಈ ನಿಟ್ಟಿನಲ್ಲಿ ಪಕ್ಷದ ಸ್ಥಳೀಯ ಮುಖಂಡರ ಶ್ರಮ ಹೆಚ್ಚಿನದ್ದಾಗಿದೆ.  ಮುಂಬರುವ ಭದ್ರಾವತಿ ನಗರಸಭೆ ಚುನಾವಣೆಗೆ ಎಲ್ಲಾ ವಾರ್ಡ್‌ಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಪಕ್ಷದ ಮಾನದಂಡಗಳಂತೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.
    ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ತಾಲೂಕು ಅಧ್ಯಕ್ಷ ಪರಮೇಶ್ವರಚಾರ್, ಮಹಿಳಾ ಘಟಕದ ಅಧ್ಯಕ್ಷೆ ರೇಷ್ಮಾಬಾನು, ಕರವೇ ತಾಲೂಕು ಅಧ್ಯಕ್ಷ ಎಂ. ಪರಮೇಶ್, ಮುಖಂಡ ವಿ. ಗೋಪಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಪಕ್ಷದ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು, ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.