ಯೋಗಪಟು ಡಿ. ನಾಗರಾಜ್
ಭದ್ರಾವತಿ, ಮಾ. ೨: ಆನ್‌ಲೈನ್ ಲೈವ್‌ನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ನಗರದ ವಿವೇಕಾನಂದ ಯೋಗ ಟ್ರಸ್ಟ್‌ನ ಡಿ. ನಾಗರಾಜ್ ಚಿನ್ನ ಹಾಗು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ಯುರೋಪ್ ಯೋಗ ಸ್ಪೋಟ್ಸ್ ಅಸೋಷಿಯೇಷನ್ ಮತ್ತು ತಮಿಳುನಾಡಿನ ತಿರುವರೂರ್ ಶ್ರೀ ಸಾಯಿಬಾಬಾ ಇನ್‌ಸ್ಟಿಟ್ಯೂಟ್ ಆಫ್ ಯೋಗ, ಒಹಿರಾವನ್ ಯೋಗ ಆಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ಪಂದ್ಯಾವಳಿಯ ೫೧ ವರ್ಷ ಮೇಲ್ಪಟ್ಟ ಪುರುಷರ ವಿಭಾಗದಲ್ಲಿ ಸ್ಪರ್ಧಿಸಿ ೧ ಚಿನ್ನ, ೧ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಪಂದ್ಯಾವಳಿಯಲ್ಲಿ ವಿವಿಧ ರಾಷ್ಟ್ರಗಳಿಂದ ಸುಮಾರು ೩೩೧ ಯೋಗ ಪಟುಗಳು ಭಾಗವಹಿಸಿದ್ದರು.
ಇದೆ ರೀತಿ ಬೆಂಗಳೂರಿನ ಕುಂಡಲಿನಿ ಯೋಗ ಕೇಂದ್ರದವರು ನಡೆಸಿದ ರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲೂ ಭಾಗವಹಿಸಿ ಡಿ. ನಾಗರಾಜ್ ೧ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕರ್ನಾಟಕ ಯೋಗ ಸಂಸ್ಥೆ ಅಧ್ಯಕ್ಷ ಡಾ. ರಾಮಮೂರ್ತಿ ಹಾಗು ಕಾರ್ಯದರ್ಶಿ ಡಿ. ಪುಟ್ಟೇಗೌಡ ಇವರನ್ನು ಅಭಿನಂದಿಸಿದ್ದಾರೆ.
No comments:
Post a Comment