ಮಹಾ ಶಿವರಾತ್ರಿ ಪ್ರಯುಕ್ತ ಭದ್ರಾವತಿ ಸೂಕ್ಷ್ಮ ಕೆತ್ತನೆ ಕಲಾಕೃತಿಗಳ ಕಲಾವಿದ, ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಪುರಸ್ಕೃತ ಸಚಿನ್ ಎಂ. ವರ್ಣೇಕರ್ ಈ ಬಾರಿ ಮಹಾಶಿವರಾತ್ರಿಗೆ ವಿಶೇಷವಾಗಿ ಉತ್ತರಾಖಂಡದ ಪ್ರವಿತ್ರ ಪುಣ್ಯ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಕೇದಾರನಾಥೇಶ್ವರ ದೇವಸ್ಥಾನ ಮಾದರಿ ಕಲಾಕೃತಿಯನ್ನು ರೂಪಿಸಿದ್ದಾರೆ.
ಭದ್ರಾವತಿ, ಮಾ. ೧೧: ಈ ಬಾರಿ ಮಹಾ ಶಿವರಾತ್ರಿ ಪ್ರಯುಕ್ತ ನಗರದ ಸೂಕ್ಷ್ಮ ಕೆತ್ತನೆ ಕಲಾಕೃತಿಗಳ ಕಲಾವಿದ, ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಪುರಸ್ಕೃತ ಸಚಿನ್ ಎಂ. ವರ್ಣೇಕರ್ ಈ ಬಾರಿ ಮಹಾಶಿವರಾತ್ರಿಗೆ ವಿಶೇಷವಾಗಿ ಉತ್ತರಾಖಂಡದ ಪ್ರವಿತ್ರ ಪುಣ್ಯ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಕೇದಾರನಾಥೇಶ್ವರ ದೇವಸ್ಥಾನ ಮಾದರಿ ಕಲಾಕೃತಿಯನ್ನು ರೂಪಿಸಿದ್ದಾರೆ.
ಎಂ ಸೀಲ್ ಬಳಸಿ ಸುಮಾರು ೧.೫ ಇಂಚು ಎತ್ತರದ, ೦.೮ ಇಂಚು ಅಗಲದ ಮತ್ತು ೧.೫ ಇಂಚು ಉದ್ದದ ಶ್ರೀ ಕೇದಾರನಾಥೇಶ್ವರ ದೇವಸ್ಥಾನ ಮಾದರಿ ನಿರ್ಮಿಸಿದ್ದು, ಆಕರ್ಷಕವಾಗಿ ಕಂಡು ಬರುತ್ತಿದೆ. ದೇಶದ ೧೨ ಜ್ಯೋತಿರ್ಲಿಂಗ ದೇವಸ್ಥಾನಗಳ ಪೈಕಿ ಶ್ರೀ ಕೇದಾರನಾಥೇಶ್ವರ ದೇವಸ್ಥಾನ ಸಹ ಒಂದಾಗಿದ್ದು, ತನ್ನದೇ ಆದ ಪರಂಪರೆಯನ್ನು ಹೊಂದಿದೆ.
ವರ್ಣೇಕರ್ ಪ್ರತಿಯೊಂದು ಹಬ್ಬಹರಿದಿನಗಳಲ್ಲಿ ವಿಶೇಷವಾಗಿ ಕಲಾಕೃತಿಗಳನ್ನು ರೂಪಿಸುತ್ತಿದ್ದು, ಈಗಾಗಲೇ ಅಯೋಧ್ಯೆ ರಾಮಮಂದಿರ, ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ, ಶ್ರೀ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಸೇರಿದಂತೆ ಇವರ ಹಲವು ಮಾದರಿ ಕಲಾಕೃತಿಗಳು ಗಮನ ಸೆಳೆದಿವೆ. ಅಲ್ಲದೆ ಪ್ರಶಸ್ತಿಗಳಿಗೆ ಭಾಜನವಾಗಿವೆ.
No comments:
Post a Comment