ಮುಖ್ಯಮಂತ್ರಿಗಳಿಗೆ ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಮನವಿ
ಚಿನ್ನದ ಮೇಲೆ ಸಾಲ ನೀಡುವ ಸಂಸ್ಥೆಗಳಿಂದ ರಾಜ್ಯದ ಬಡ ಗ್ರಾಹಕರಿಗೆ ವಂಚನೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಸೋಮವಾರ ಭದ್ರಾವತಿಯಲ್ಲಿ ಏಕಾಂಗಿ ಹೋರಾಟದೊಂದಿಗೆ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಿ ಒತ್ತಾಯಿಸಿದರು.
ಭದ್ರಾವತಿ, ಮಾ. ೨೯: ಚಿನ್ನದ ಮೇಲೆ ಸಾಲ ನೀಡುವ ಸಂಸ್ಥೆಗಳಿಂದ ರಾಜ್ಯದ ಬಡ ಗ್ರಾಹಕರಿಗೆ ವಂಚನೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಯುಕ್ತ ಜನತಾದಳ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ಸೋಮವಾರ ಏಕಾಂಗಿ ಹೋರಾಟದೊಂದಿಗೆ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಿ ಒತ್ತಾಯಿಸಿದರು.
ಚಿನ್ನದ ಮೇಲೆ ಸಾಲ ನೀಡುವ ಸಂಸ್ಥೆಗಳು ಪ್ರತಿ ತಾಲೂಕಿಗೆ ೪ರಂತೆ ರಾಜ್ಯಾದ್ಯಂತ ಸುಮಾರು ೧ ಸಾವಿರಕ್ಕೂ ಅಧಿಕ ಸಂಸ್ಥೆಗಳಿದ್ದು, ಪ್ರಮುಖವಾಗಿ ಮಣಪುರಂ ಗೋಲ್ಡ್, ಮುತ್ತೂಟ್, ಐ.ಐ.ಎಫ್.ಎಲ್ ಸೇರಿದಂತೆ ಇನ್ನಿತರ ಖಾಸಗಿ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ಸಂಸ್ಥೆಗಳಲ್ಲಿ ಚಿನ್ನದ ಮೇಲೆ ಸಾಲ ಪಡೆದ ಗ್ರಾಹಕರಿಂದ ಹೆಚ್ಚುವರಿಯಾಗಿ ೧೦ ರಿಂದ ೧೫ ರು. ಗ್ರಾಹಕರ ಗಮನಕ್ಕೆ ಬಾರದಂತೆ ಹಣ ಪಡೆಯಲಾಗುತ್ತಿದೆ. ಕೋವಿಡ್-೧೯ರ ಹಿನ್ನಲೆಯಲ್ಲಿ ಮಾರ್ಚ್ ೨೦೨೦ರ ರಿಂದ ಸೆಪ್ಟಂಬರ್ ವರೆಗೂ ಕೇಂದ್ರ ಸರ್ಕಾರ ಎಲ್ಲಾ ತರಹದ ಸಾಲದ ಕಂತುಗಳಿಗೆ ಚಕ್ರ ಬಡ್ಡಿ ಹಾಕದಂತೆ ಸೂಚಿಸಿದೆ. ಆದರೂ ಸಹ ಈ ಸಂಸ್ಥೆಗಳು ಬಡ ಗ್ರಾಹಕರಿಗೆ ಚಕ್ರ ಬಡ್ಡಿ ಪಾವತಿಸುವಂತೆ ಒತ್ತಾಯಿಸುತ್ತಿವೆ. ಅಲ್ಲದೆ ಚಕ್ರ ಬಡ್ಡಿ ಪಾವತಿಸಲು ನಿರಾಕರಿಸುವ ಗ್ರಾಹಕರಿಗೆ ಯಾವುದೇ ನೋಟಿಸ್ ನೀಡದೆ ಚಿನ್ನವನ್ನು ಹರಾಜು ಹಾಕಲಾಗುತ್ತಿದೆ ಎಂದು ಆರೋಪಿಸಿದರು.
ಈ ಸಂಸ್ಥೆಗಳ ವಿರುದ್ಧ ತನಿಖೆ ನಡೆಸಲು ತನಿಖಾ ಸಂಸ್ಥೆಗಳ ಮುಖ್ಯಸ್ಥರಿಗೆ ಆದೇಶಿಸುವ ಜೊತೆಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಬಡ ಗ್ರಾಹಕರ ಹಿತ ಕಾಪಾಡಬೇಕೆಂದು ಮನವಿ ಮಾಡಿದರು.
No comments:
Post a Comment