ಭದ್ರಾವತಿ, ಮಾ. ೧೭: ನಗರಸಭೆ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಂಪರ್ಕಕ್ಕೆ ಹೆಚ್ಚಿನ ಠೇವಣಿ ವಿಧಿಸಿರುವುದನ್ನು ಹಾಗು ನೀರಿನ ಬಿಲ್ ಮೀಟರ್ ಲೆಕ್ಕದಲ್ಲಿ ಪಾವತಿಸಲು ಆದೇಶಿಸಿರುವುದನ್ನು ವಿರೋಧಿಸಿ ಕರ್ನಾಟಕ ಜನಸೈನ್ಯ ವತಿಯಿಂದ ಮಾ.೧೯ರಂದು ಬೆಳಿಗ್ಗೆ ೧೦ ಗಂಟೆಗೆ ನಗರಸಭೆ ಮುಂಭಾಗ ಅಸಹಕಾರ ಚಳುವಳಿ ಹಮ್ಮಿಕೊಳ್ಳಲಾಗಿದೆ.
ಪ್ರಸ್ತುತ ನಗರದಲ್ಲಿ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳ ಕಾರ್ಮಿಕರು ಉದ್ಯೋಗವಿಲ್ಲದೆ ಬೀದಿ ಪಾಲಾಗಿದ್ದು, ಅಲ್ಲದೆ ಕೋವಿಡ್-೧೯ರ ಪರಿಣಾಮ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನ ನಲ್ಲಿ ಸಂಪರ್ಕಕ್ಕೆ ೨೬೦೦ ರು. ಠೇವಣಿ ವಿಧಿಸಿ, ನೀರಿನ ಬಿಲ್ ಮೀಟರ್ ಲೆಕ್ಕದಲ್ಲಿ ಪಾವತಿಸಲು ಆದೇಶಿರುವುದು ಸರಿಯಲ್ಲ. ಕುಡಿಯುವ ನೀರಿಗೆ ಹಣ ಕೇಳುವುದು ಸರಿಯಲ್ಲ. ಉಚಿತವಾಗಿ ಕುಡಿಯುವ ನೀರು ಒದಗಿಸಬೇಕು. ಈ ಹಿನ್ನಲೆಯಲ್ಲಿಈಗಾಗಲೇ ಹಣ ಪಾವತಿಸಿರುವವರಿಗೆ ಹಣ ಹಿಂದಿರುಗಿಸುವುದು. ಆದೇಶವನ್ನು ತಕ್ಷಣ ರದ್ದುಪಡಿಸಬೇಕೆಂದು ಆಗ್ರಹಿಸಿ ಅಸಹಕಾರ ಚಳುವಳಿ ಹಮ್ಮಿಕೊಳ್ಳಲಾಗಿದೆ. ಕೊಚಚೆ ಪ್ರದೇಶದ ನಿವಾಶಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ