ಭದ್ರಾವತಿ, ಮಾ. ೨: ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಮಾ.೫ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಆದೇಶ ಹೊರಡಿಸಿದ್ದಾರೆ.
ಫೆ.೨೭ ಮತ್ತು ೨೮ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ ಮುಕ್ತಾಯದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರ ನಡುವೆ ಉಂಟಾದ ಗಲಭೆ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಗುಪ್ತ ವರದಿ ಆಧರಿಸಿ ಮಾ.೨ರ ಮಧ್ಯಾಹ್ನ ೧೧ ಗಂಟೆಯಿಂದ ಮಾ.೫ರ ಮಧ್ಯರಾತ್ರಿ ೧೨ ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
No comments:
Post a Comment