ಭದ್ರಾವತಿ ನಗರಸಭೆ ಜಿಂಕ್‌ಲೈನ್ ವ್ಯಾಪ್ತಿಯಲ್ಲಿರುವ ಶ್ರೀ ಮಲೆಮಹದೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಸ್ವಾಮಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಯಿತು.
ಭದ್ರಾವತಿ, ಮಾ. ೧೨: ನಗರಸಭೆ ಜಿಂಕ್‌ಲೈನ್ ವ್ಯಾಪ್ತಿಯಲ್ಲಿರುವ ಶ್ರೀ ಮಲೆಮಹದೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವ ಶುಕ್ರವಾರ ಅದ್ದೂರಿಯಾಗಿ ನಡೆಯಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಮಹಾಶಿವರಾತ್ರಿ ಆಚರಣೆಯೊಂದಿಗೆ ಜಾತ್ರಾಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಗುರುವಾರ ಮತ್ತು ಶುಕ್ರವಾರ ೨ ದಿನ ಬೆಳಿಗ್ಗೆಯಿಂದಲೇ ಭಕ್ತಾಧಿಗಳು ಸುಮಾರು ಅರ್ಧ ಕಿ.ಮೀ. ವರೆಗೂ ಸರದಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು.
ಭದ್ರಾವತಿ ನಗರಸಭೆ ಜಿಂಕ್‌ಲೈನ್ ವ್ಯಾಪ್ತಿಯಲ್ಲಿರುವ ಶ್ರೀ ಮಲೆಮಹದೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಸ್ವಾಮಿಯ ಉತ್ಸವ ಮೆರವಣಿಗೆ ನಡೆಯಿತು.
ಜಾತ್ರಾ ಮಹೋತ್ಸವ ಅಂಗವಾಗಿ ಸ್ವಾಮಿಯ ಉತ್ಸವ ಮೆರವಣಿಗೆ, ವಿಶೇಷ ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಭದ್ರಾವತಿ ನಗರಸಭೆ ಜಿಂಕ್‌ಲೈನ್ ವ್ಯಾಪ್ತಿಯಲ್ಲಿರುವ ಶ್ರೀ ಮಲೆಮಹದೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ತಾಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿದ್ದರು. ಕೊವೀಡ್ ನಡುವೆಯೂ ಜಾತ್ರಾಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಭದ್ರಾವತಿ ನಗರಸಭೆ ಜಿಂಕ್‌ಲೈನ್ ವ್ಯಾಪ್ತಿಯಲ್ಲಿರುವ ಶ್ರೀ ಮಲೆಮಹದೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಸ್ವಾಮಿಯ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿರುವ ಭಕ್ತರು.
No comments:
Post a Comment