ಭದ್ರಾವತಿ ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಹಾಗೂ ವೈಯುಕ್ತಿಕ ಚಾಂಪಿಯನ್ ಶಿಪ್ ತಮ್ಮದಾಗಿಸಿಕೊಂಡಿದ್ದಾರೆ.
ಭದ್ರಾವತಿ, ಮಾ. ೨೩: ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಹಾಗೂ ವೈಯುಕ್ತಿಕ ಚಾಂಪಿಯನ್ ಶಿಪ್ ತಮ್ಮದಾಗಿಸಿಕೊಂಡಿದ್ದಾರೆ.
ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪಂದ್ಯಾವಳಿಯಲ್ಲಿ ತಾಲೂಕಿನ ವಿವಿಧ ಕಾಲೇಜುಗಳ ಕ್ರೀಡಾ ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಿದವು. ಬಹುತೇಕ ತಂಡಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದವು.
ಕಾಲೇಜಿನ ವಿದ್ಯಾರ್ಥಿನಿಯರ ಸಾಧನೆಯನ್ನು ಪ್ರಾಂಶುಪಾಲರು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಉಪನ್ಯಾಸಕ ವೃಂದ ಹಾಗು ಸಿಬ್ವಂದಿ ವರ್ಗದವರು ಅಭಿನಂದಿಸಿದ್ದಾರೆ.
No comments:
Post a Comment