ಬಿ.ಎಸ್ ಬಸವೇಶ್
ಭದ್ರಾವತಿ, ಮಾ. ೬: ನಗರದಲ್ಲಿ ಕಬಡ್ಡಿ ಪಂದ್ಯಾವಳಿ ಮುಕ್ತಾಯದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದಿರುವ ಮಾರಾಮಾರಿಗೆ ಸಂಬಂಧಿಸಿದಂತೆ ಶಾಸಕ ಬಿ.ಕೆ ಸಂಗಮೇಶ್ವರ್ ೨ನೇ ಪುತ್ರ ಬಿ.ಎಸ್ ಬಸವೇಶ್‌ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಳೇನಗರದ ಕನಕಮಂಟಪ ಮೈದಾನದಲ್ಲಿ ಫೆ. ೨೭ ಮತ್ತು ೨೮ರಂದು ಆಯೋಜಿಸಲಾಗಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ ಮುಕ್ತಾಯದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ಉಂಟಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಬಸವೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಹಾಗು ಜಾತಿನಿಂದನೆ ದೂರು ಹಳೇನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ಬಸವೇಶ್‌ನನ್ನು ಬಂಧಿಸಲಾಗಿದೆ. ಬಸವೇಶ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ.
ಶಾಸಕ ಸಂಗಮೇಶ್ವರ್ ಖಂಡನೆ:
ಪುತ್ರನ ಬಂಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ನನನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ. ಪೊಲೀಸರು ನನ್ನ ಕುಟುಂಬದವರು ಮತ್ತು ಬೆಂಬಲಿಗರ ಮೇಲೆ ಮಾತ್ರ ದೂರು ದಾಖಲಿಸಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ. ಆದರೆ ನಾವು ನೀಡಿದ ದೂರಿನ್ವಯ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
No comments:
Post a Comment