ಶಿವಮೊಗ್ಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಭದ್ರಾವತಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಭದ್ರಾವತಿ, ಮಾ. ೫: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗು ಡಯಟ್ ವತಿಯಿಂದ ಶಿವಮೊಗ್ಗ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಶಾಲೆಯ ವಿದ್ಯಾರ್ಥಿಗಳಾದ ತೇಜಸ್ವಿ ಮತ್ತು ಭೂಮಿಕಾ ಬಹುಮಾನ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಎಂಪಿಎಂ ಶಿಕ್ಷಣ ಸಂಸ್ಥೆ, ಶಾಲೆಯ ಪ್ರಾಂಶುಪಾಲರು, ಶಿಕ್ಷಕ ಹಾಗು ಸಿಬ್ಬಂದಿ ವೃಂದದವರು ಅಭಿನಂದಿಸಿದ್ದಾರೆ.
No comments:
Post a Comment