ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೆಷನ್ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ
ಭದ್ರಾವತಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷ ಸೆಲ್ವರಾಜ್ ಮಾತನಾಡಿದರು.
ಭದ್ರಾವತಿ, ಮಾ. ೮: ಕ್ಷೇತ್ರದ ಶಾಸಕರನ್ನು ೭ ದಿನಗಳವರೆಗೆ ಕಲಾಪದಿಂದ ಅಮಾನತುಗೊಳಿಸಿರುವುದು ಸರಿಯಲ್ಲ. ಇದನ್ನು ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ಖಂಡಿಸುವ ಜೊತೆಗೆ ತಕ್ಷಣ ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸುತ್ತದೆ ಎಂದು ಅಧ್ಯಕ್ಷ ಸೆಲ್ವರಾಜ್ ತಿಳಿಸಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕ್ಷೇತ್ರದ ಮತದಾರರು ತಮ್ಮ ಪ್ರತಿನಿಧಿಯನ್ನು ವಿಧಾನಸಭೆಗೆ ಆಯ್ಕೆಮಾಡಿ ಕಳುಹಿಸುತ್ತಾರೆ. ಶಾಸಕರು ತಮ್ಮ ಸಮಸ್ಯೆಗಳನ್ನು ತೋರ್ಪಡಿಸಿಕೊಳ್ಳುವ ಮೊದಲೇ ಅವರನ್ನು ೭ ದಿನಗಳ ಕಾಲ ಅಮಾನತು ಮಾಡಿರುವ ಕ್ರಮ ಸರಿಯಲ್ಲ. ತಪ್ಪು ನಡೆದಿರಬಹುದು, ಶಿಕ್ಷೆ ವಿಧಿಸಲಿ ಆದರೆ ೭ ದಿನಗಳವರೆಗೆ ಅಮಾನತು ಶಿಕ್ಷೆ ಸರಿಯಲ್ಲ. ಇದರಿಂದಾಗಿ ಕ್ಷೇತ್ರದ ಮತದಾರರಿಗೆ ಅನ್ಯಾಯವಾಗಿದೆ ಎಂದರು.
ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳಲ್ಲಿ ಉದ್ಯೋಗವಿಲ್ಲದೆ ಕಾರ್ಮಿಕ ಕುಟುಂಬಗಳು ಬೀದಿಗೆ ಬಿದ್ದಿವೆ. ನಿರುದ್ಯೋಗ, ಆರ್ಥಿಕ ಸಮಸ್ಯೆಗಳು ತಲೆತೋರಿವೆ. ಈ ನಡುವೆ ಹಲವು ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬಿದ್ದಿವೆ. ಇಂತಹ ಸಂದರ್ಭದಲ್ಲಿ ೭ ದಿನಗಳವರೆಗೆ ಅಮಾನತು ಮಾಡಿರುವುದು ಸರಿಯಲ್ಲ. ಸಭಾಧ್ಯಕ್ಷರು ತಮ್ಮ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ವಿಧಾನಸಭೆಯಲ್ಲಿ ಶಾಸಕರು ನಡೆದುಕೊಂಡಿರುವ ರೀತಿ ಸರಿ ಇಲ್ಲದಿರಬಹುದು. ಒಬ್ಬ ಶಾಸಕರಿಗೆ ಆ ರೀತಿ ಅನ್ಯಾಯವಾದರೆ ಜನಸಾಮಾನ್ಯರ ಗತಿ ಏನೆಂಬುದನ್ನು ಚಿಂತಿಸಬೇಕಾದ ಅಗತ್ಯವಿದೆ. ಪ್ರಸ್ತುತ ಕ್ಷೇತ್ರದಲ್ಲಿ ನಡೆದಿರುವ ಅಹಿತಕರ ಘಟನೆಗಳು ಪುನಃ ಮರುಕಳುಹಿಸಬಾರದು. ಎಲ್ಲರೂ ಒಂದೆಡೆ ಸೇರಿ ಶಾಂತಿಸಭೆ ಮೂಲಕ ಸಮಸ್ಯೆಗ ಪರಿಹಾರ ಕಂಡುಕೊಳ್ಳಬೇಕೆಂದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಭಾಸ್ಕರಬಾಬು, ಜಾರ್ಜ್, ಫ್ರಾನ್ಸಿಸ್, ದಾಸ್, ಡೇನಿಯಲ್ ಫಾಸ್ಟರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment