ಕ್ರಿಕೆಟ್ ಪಂದ್ಯಾವಳಿ, ಕುಡಿಯುವ ನೀರು, ಶೌಚಾಲಯ, ಕಂಪ್ಯೂಟರ್ ತರಬೇತಿ ಉದ್ಘಾಟನೆ
ಭದ್ರಾವತಿ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವತಿಯಿಂದ ಗುರುವಾರ ೨೩ನೇ ವರ್ಷಾಚರಣೆ ಅಂಗವಾಗಿ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೌಚಾಲಯಗಳನ್ನು ನಗರಸಭೆ ಪೌರಾಯುಕ್ತ ಮನೋಹರ್ ಉದ್ಘಾಟಿಸಿದರು.
ಭದ್ರಾವತಿ, ಮಾ. ೧೩: ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವತಿಯಿಂದ ಗುರುವಾರ ೨೩ನೇ ವರ್ಷಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಅಂಧರ ತ್ರಿಕೋನ ಕ್ರಿಕೆಟ್ ಪಂದ್ಯಾವಳಿ ಜರುಗಿತು. ಇದಕ್ಕೂ ಮೊದಲು ಅಂಧರ ಕೇಂದ್ರದಲ್ಲಿ ಜಾಸ್ ಕಂಪ್ಯೂಟರ್ ತರಬೇತಿ ಉದ್ಘಾಟನೆಯನ್ನು ಜೆಎಂಎಫ್‌ಸಿ ನ್ಯಾಯಾಲಯದ ಸಿವಿಲ್ ವಿಭಾಗದ ಹೆಚ್ಚುವರಿ ಹಿರಿಯ ನ್ಯಾಯಾಧೀಶರಾದ ಉಜ್ವಲ ವೀರಣ್ಣ ಸಿದ್ದಣ್ಣನವರ್ ನೆರವೇರಿಸಿದರು. ನಗರಸಭೆ ಪೌರಾಯುಕ್ತ ಮನೋಹರ್ ಶೌಚಾಲಯಗಳನ್ನು ಹಾಗು ಎನ್‌ಟಿಸಿ ರೈಲ್ ಮಿಲ್ ಮಾಲೀಕ ಡಾ. ಎಚ್. ನಾಗೇಶ್ ಅಂಧರ ಕೇಂದ್ರಕ್ಕೆ ಕುಡಿಯುವ ನೀರು ಸರಬರಾಜು ಉದ್ಘಾಟಿಸಿದರು.
ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎಂ. ಗುರುಮೂರ್ತಿ, ಪ್ರಮುಖರಾದ ಆರ್. ತಮ್ಮಯ್ಯ, ಮುತ್ತು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಜಾಸ್ ಕಂಪ್ಯೂಟರ್ ತರಬೇತಿ ಉದ್ಘಾಟನೆಯನ್ನು ಜೆಎಂಎಫ್‌ಸಿ ನ್ಯಾಯಾಲಯದ ಸಿವಿಲ್ ವಿಭಾಗದ ಹೆಚ್ಚುವರಿ ಹಿರಿಯ ನ್ಯಾಯಾಧೀಶರಾದ ಉಜ್ವಲ ವೀರಣ್ಣ ಸಿದ್ದಣ್ಣನವರ್ ನೆರವೇರಿಸಿದರು.
No comments:
Post a Comment