ಭದ್ರಾವತಿ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಭಾನುವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೬ನೇಯ ಶರಣ ಸಾಹಿತ್ಯ ಸಮ್ಮೇಳನವನ್ನು ಕುವೆಂಪು ವಿಶ್ವ ವಿದ್ಯಾನಿಯಲದ ಕುಲಪತಿ ಪ್ರೊ. ಡಾ. ಬಿ.ಪಿ ವೀರಭದ್ರಪ್ಪ ಉದ್ಘಾಟಿಸಿದರು.
ಭದ್ರಾವತಿ, ಮಾ. ೨೮: ಕೋವಿಡ್-೧೯ರ ಪರಿಣಮ ಕಳೆದ ೧ ವರ್ಷದಿಂದ ಮನುಷ್ಯನ ಬದುಕು ಸಂಯಮ ಕಳೆದು ಕೊಂಡಿದ್ದು, ನಮ್ಮನ್ನು ನಾವು ಸ್ವಯಂ ನಿಯಂತ್ರಣಕ್ಕೆ ಒಳಗಾಗಿ ಸ್ವೇಚ್ಛೆಯಿಂದ ಬದುಕುವಂತಾಗಿದೆ. ಈಗಲೂ ನಾವು ನಮ್ಮನ್ನು ಅರ್ಥ ಮಾಡಿಕೊಳ್ಳದಿದ್ದರೆ ಭವಿಷ್ಯದಲ್ಲಿ ದೊಡ್ಡ ಆತಂಕ ಎದುರಿಸಬೇಕಾಗುತ್ತದೆ ಎಂದು ಶಿವಮೊಗ್ಗ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಭಾನುವಾರ ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ೬ನೇಯ ಶರಣ ಸಾಹಿತ್ಯ ಸಮ್ಮೇಳನದ ದಿವ್ಯ ಸಾನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.
ಮನುಷ್ಯನ ಮಿತಿಮೀರಿದ ದುರಾಸೆಗಳಿಗೆ ಸ್ವಯಂ ಕಡಿವಾಣ ಹಾಕುವಲ್ಲಿ ಕೋವಿಡ್-೧೯ ಯಶಸ್ವಿಯಾಗಿದೆ. ಇಂದು ಮನುಷ್ಯ ಕೇವಲ ಹಣ, ಅಧಿಕಾರವೇ ಬದುಕು ಎಂಬುದನ್ನು ತಿಳಿದುಕೊಂಡಿದ್ದಾನೆ. ಇದರಿಂದ ತನ್ನತನವನ್ನು ಕಳೆದುಕೊಂಡಿದ್ದಾನೆ. ಕೋವಿಡ್-೧೯ರ ಪರಿಣಾಮ ಕಳೆದ ೧ ವರ್ಷದಿಂದ ಏಕಾಂಗಿಯಾಗಿ ಕಾಲ ಕಳೆಯುವಂತಾಗಿದೆ. ಒಬ್ಬಂಟಿಯಾಗಿ ಮನೆಯಲ್ಲಿ ಉಳಿದುಕೊಳ್ಳಲಾಗದ ಬಹಳಷ್ಟು ಮಂದಿ ಮಾನಸಿಕವಾಗಿ ಅಸ್ವಸ್ಥತೆಗೆ ಒಳಗಾಗಿದ್ದಾರೆ. ಕೆಲವರು ಗೃಹ ಬಂಧನ, ಇನ್ನೂ ಕೆಲವರು ಸೆರೆವಾಸ ಎಂಬ ರೀತಿಯಲ್ಲಿ ಅರ್ಥೈಸಿಕೊಂಡಿದ್ದಾರೆ. ಆದರೆ ವಾಸ್ತವವಾಗಿ ಮನೆಯಲ್ಲಿನ ಪ್ರೀತಿ, ಸಹಬಾಳ್ವೆ, ಕುಟಂಬದ ಮಹತ್ವ ಅರಿಯಲು ಕೋವಿಡ್-೧೯ ಸಹಕಾರಿಯಾಗಿದೆ. ಇದನ್ನು ನಾವುಗಳು ಅರ್ಥಮಾಡಿಕೊಳ್ಳಬೇಕಾಗಿದೆ. ಪುನಃ ನಮ್ಮ ಬದುಕು ಶರಣರ ಬದುಕಿನ ಕಡೆ ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ ಅವರ ವಿಚಾರಧಾರೆಗಳನ್ನು ಅರ್ಥಮಾಡಿಕೊಂಡು ಮುನ್ನಡೆಯಬೇಕೆಂದರು.
ಸಮ್ಮೇಳನ ಉದ್ಘಾಟಿಸಿದ ಕುವೆಂಪು ವಿಶ್ವ ವಿದ್ಯಾನಿಯಲದ ಕುಲಪತಿ ಪ್ರೊ. ಡಾ. ಬಿ.ಪಿ ವೀರಭದ್ರಪ್ಪ ಮಾತನಾಡಿ, ೧೨ನೇ ಶತಮಾನದ ಶರಣರ ಬದುಕು ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ. ಎಲ್ಲರನ್ನು ನಮ್ಮವರು ಎಂದು ಕಾಣುವ ಮನೋಭಾವ, ಕಾಯಕದ ಮಹತ್ವ, ದಾಸೋಹದ ಮಹತ್ವ, ಸಮಸಮಾಜ ನಿರ್ಮಾಣದ ಪರಿಕಲ್ಪನೆ. ಇವೆಲ್ಲವನ್ನು ವಚನ ಸಾಹಿತ್ಯದ ಮೂಲಕ ಕೊಡುಗೆಯಾಗಿ ನೀಡಿದ ಶರಣರ ಬದುಕು ಆದರ್ಶಪ್ರಾಯ. ಅವರ ಆದರ್ಶಗಳನ್ನು ಇಂದಿನ ಸಮಾಜದಲ್ಲಿ ನಾವುಗಳು ಎಷ್ಟರಮಟ್ಟಿಗೆ ಅಳವಡಿಸಿಕೊಂಡಿದ್ದೇವೆ. ನಮ್ಮ ಭವಿಷ್ಯದ ಮುಂದಿನ ಗುರಿ ಯಾವ ನಿಟ್ಟಿನಲ್ಲಿ ಸಾಗಬೇಕು. ಎದುರಾಗುವ ಸವಾಲುಗಳು ಸೇರಿದಂತೆ ಎಲ್ಲವನ್ನು ಈ ರೀತಿಯ ಸಾಹಿತ್ಯ ಸಮ್ಮೇಳನಗಳಿಂದ ಕಂಡುಕೊಳ್ಳಲು ಸಾಧ್ಯ ಎಂದರು.
ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ವಿರುಪಾಕ್ಷಪ್ಪ ಪ್ರಾಸ್ತಾವಿಕ ಹಾಗು ಜಿಲ್ಲಾಧ್ಯಕ್ಷ ಎಚ್.ಎನ್ ಮಹಾರುದ್ರ ಆಶಯನುಡಿಗಳನ್ನಾಡಿದರು.
ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನಾಧ್ಯಕ್ಷೆ ಡಾ. ವೀಣಾ ಎಸ್. ಭಟ್, ಜಿಲ್ಲಾ ಖಜಾನೆ ಉಪನಿರ್ದೇಶಕಿ ಎಚ್.ಎಸ್ ಸಾವಿತ್ರಿ ಮತ್ತು ಶ್ರೀ ಬಸವೇಶ್ವರ ಸಭಾಭವನ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ಬಿ.ಜಿ ಧನಂಜಯ್ಯ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿಕೊಟ್ಟರು. ಎನ್.ಎಸ್ ಮಲ್ಲಿಕಾರ್ಜುನಯ್ಯ ಸ್ವಾಗತಿಸಿದರು. ಕತ್ತಲಗೆರೆ ತಿಮ್ಮಪ್ಪ ನಿರೂಪಿಸಿದರು.
No comments:
Post a Comment