ಜೆಸಿಐ ವತಿಯಿಂದ ಪದ್ಮಾಂಭ ಸ್ವಯಂ ಸೇವಾ ಸಂಸ್ಥೆ ಸಹಯೋಗದೊಂದಿಗೆ ಭದ್ರಾವತಿ ಅನು ಗಾರ್ಮೆಂಟ್ಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ ಪಾಲ್ಗೊಂಡು ಮಾತನಾಡಿದರು.
ಭದ್ರಾವತಿ, ಮಾ. ೯: ಇತ್ತಿಚಿನ ದಿನಗಳಲ್ಲಿ ಮಹಿಳೆಯರ ರಕ್ಷಣೆಗೆ ಪೊಲೀಸ್ ಇಲಾಖೆ ಬಹಳಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿದ್ದು, ಅಲ್ಲದೆ ಜನಸ್ನೇಹಿಯಾಗಿದೆ ಎಂದು ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ ತಿಳಿಸಿದರು.
ಅವರು ಜೆಸಿಐ ವತಿಯಿಂದ ಪದ್ಮಾಂಭ ಸ್ವಯಂ ಸೇವಾ ಸಂಸ್ಥೆ ಸಹಯೋಗದೊಂದಿಗೆ ನಗರದ ಅನು ಗಾರ್ಮೆಂಟ್ಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ರೀತಿ ಕಿರುಕುಳ, ಸಮಸ್ಯೆಗಳಿದ್ದಲ್ಲಿ ಮಹಿಳೆಯರು ಧೈರ್ಯವಾಗಿ ಠಾಣೆಗಳಿಗೆ ಬಂದು ದೂರು ನೀಡಬಹುದು. ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ. ಇಲಾಖೆ ಎಲ್ಲಾ ರೀತಿಯ ಸುರಕ್ಷತೆ ಕಲ್ಪಿಸಿಕೊಡಲಿದೆ ಎಂದು ಭರವಸೆ ನೀಡಿದರು.
ವಾಹನ ಸವಾರರು ಕಡ್ಡಾಯವಾಗಿ ತಮ್ಮ ವಾಹನಕ್ಕೆ ಸಂಭಂಧಿಸಿದ ಎಲ್ಲಾ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡಿರಬೇಕು. ಸಂಚಾರಿ ಪೊಲೀಸರ ತಪಾಸಣೆ ವೇಳೆ ತೋರಿಸಬೇಕು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಅಪಘಾತಗಳು ಸಂಭವಿಸದಂತೆ ಎಚ್ಚರಿಸಬೇಕೆಂದರು.
ಯಾವುದೆ ಮಹಿಳೆಯರು ತಮಗೆ ಏನಾದರೂ ಕಿರುಕುಳ ಅಥವ ತೊಂದರೆ ಆದಲ್ಲಿ ಯಾವುದೆ ಹಿಂಜರಿಕೆ ಹೆದರಿಕೆ ಇಲ್ಲದೆ ನೇರವಾಗಿ ಪೊಲೀಸ್ ಠಾಣೆಗೆ ಬಂದು ತಮಗಾದ ಅನ್ಯಾಯದ ಬಗ್ಗೆ ದೂರನ್ನು ದಾಖಲಿಸಬಹುದು ಎಂದರು.
ಜೆಸಿಐ ಅಧ್ಯಕ್ಷೆ ವಿಪುಲ ಬಿ ರಾವ್ ಅಧ್ಯಕ್ಷತೆ ವಹಿಸಿದ್ದರು. ಪದ್ಮಾಂಭ ಸ್ವಯಂ ಸೇವಾ ಸಂಸ್ಥೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್, ಯಶೋಧ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment