ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಉದ್ಘಾಟಿಸಿದರು.
ಭದ್ರಾವತಿ, ಮಾ. ೩: ಶಿಕ್ಷಣ ಎಂದರೆ ಕೇವಲ ಉದ್ಯೋಗ್ಯಕ್ಕಾಗಿ ಎಂಬ ಸಂಕುಚಿತ ಭಾವನೆ ದೂರವಾಗಿ ಅಭಿವೃದ್ಧಿ ಮತ್ತು ಪ್ರಗತಿಯ ಸಾಧನ ಎಂಬ ಅರಿವು ಮೂಡಬೇಕು ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ತಿಳಿಸಿದರು.
ಅವರು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಎಂದರೆ ಜ್ಞಾನಸಂಪಾದನೆ ಎಂಬ ಅರಿವು ಸಹ ಮೂಡಬೇಕು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ದೊಡ್ಡಮಟ್ಟದ ಪರಿವರ್ತನೆ ಸಾಧ್ಯ. ಜಗತ್ತಿನ ಎಲ್ಲಾ ಜ್ವಲಂತ ಸಮಸ್ಯೆಗಳಿಗೆ ಶಿಕ್ಷಣದಿಂದ ಪರಿಹಾರ ಸಾಧ್ಯ. ಈ ಹಿನ್ನಲೆಯಲ್ಲಿ ಯುವ ಸಮೂಹ ಶಿಕ್ಷಣವನ್ನು ನಿರ್ಲಕ್ಷಿಸಬಾರದು. ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕೆಂದರು.
ಕಾರ್ಯಕ್ರಮದಲ್ಲಿ ಪ್ರೊ. ಮಲ್ಲಪ್ಪ, ಡಾ. ಅಮೃತೇಶ್ವರ್, ಪ್ರೊ. ಚಂದ್ರಪ್ಪ, ಪ್ರೊ. ಉಮೇಶ್‌ಕುಮಾರ್, ಪ್ರೊ. ಹೆಗ್ಗಡೆ, ಪ್ರೊ. ವಿಶ್ವನಾಥ್, ಡಾ. ಕಲ್ಪನಾ, ಉಷಾಬೆಳ್ಳಕ್ಕಿ, ರವಿಕುಮಾರ್, ಮನೋಹರ್ ಮತ್ತು ಬೋಧಕೆತರ ವರ್ಗದವರು ಉಪಸ್ಥಿತರಿದ್ದರು.
ಗಿರೀಶ್ ಪ್ರಾರ್ಥಿಸಿದರು. ಯಶಸ್ವಿನಿ ನಿರೂಪಿಸಿದರು. ಸುಷ್ಮ ವಂದಿಸಿದರು. ಈ ಕಾರ್ಯಕ್ರಮವನ್ನು ದ್ವಿತೀಯ ಹಾಗು ತೃತಿಯ ಪದವಿ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿತ್ತು.
Meaningful
ReplyDelete