ಭದ್ರಾವತಿಯಲ್ಲಿ ಕಾಯ್ದೆ ಉಲ್ಲಂಘಿಸಿ ಅಕ್ರಮವಾಗಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿರುವ ಅಂಗಡಿಮುಂಗಟ್ಟುಗಳ ಮೇಲೆ ಶನಿವಾರ ದಾಳಿ ನಡೆಸಿ ಸುಮಾರು ೧೩೫೦ ರು. ದಂಡ ವಸೂಲಾತಿ ಮಾಡಿರುವ ಘಟನೆ ನಡೆದಿದೆ.
ಭದ್ರಾವತಿ, ಮಾ. ೨೦: ಕಾಯ್ದೆ ಉಲ್ಲಂಘಿಸಿ ಅಕ್ರಮವಾಗಿ ತಂಬಾಕು ಉತ್ಪನ್ನಗಳ ಮಾರಾಟದಲ್ಲಿ ತೊಡಗಿರುವ ಅಂಗಡಿಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಸುಮಾರು ೧೩೫೦ ರು. ದಂಡ ವಸೂಲಾತಿ ಮಾಡಿರುವ ಘಟನೆ ಶನಿವಾರ ನಡೆದಿದೆ.
ಶಿವಮೊಗ್ಗ ಜಿಲ್ಲಾ ತಂಬಾಕು ಕೋಶ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮತ್ತು ಪೊಲೀಸ್ ಇಲಾಖೆ ವತಿಯಿಂದ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪ ಅಂಗಡಿಮುಂಗಟ್ಟುಗಳ ಮೇಲೆ ದಾಳಿ ನಡೆಸಲಾಯಿತು.
ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಎಂ.ವಿ ಅಶೋಕ್, ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ರಾಜೇಗೌಡ, ತಾಲೂಕು ಹಿರಿಯ ಸಹಾಯಕ ಆನಂದಮೂರ್ತಿ, ಕಿರಿಯ ಆರೋಗ್ಯ ಸಹಾಯಕ ಹರೀಶ್, ಜಿಲ್ಲಾ ತಂಬಾಕು ಕೋಶದ ಹೇಮಂತ್ ರಾಜ್, ರವಿರಾಜ್ ಹಾಗು ಪೊಲೀಸ್ ಠಾಣಾಧಿಕಾರಿ ಅನ್ನಪೂರ್ಣ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
No comments:
Post a Comment