ಶಿವಮೊಗ್ಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜನಾಕ್ರೋಶ ಪ್ರತಿಭಟನೆ ಕಾರ್ಯಕ್ರಮಕ್ಕೆ ಭದ್ರಾವತಿಯಿಂದ ಸಾವಿರಾರು ಮಂದಿ ಕಾಂಗ್ರೆಸ್ ಪಕ್ಷದ ಕಾರ್ಯಕತರು, ಅಭಿಮಾನಿಗಳು ಸುಮಾರು ೧೦೦ಕ್ಕೂ ಹೆಚ್ಚು ಬಸ್ಸು, ಮಾಕ್ಸಿ ಕ್ಯಾಬ್ ಸೇರಿದಂತೆ ಇನ್ನಿತರ ವಾಹನಗಳಲ್ಲಿ ತೆರಳಿದರು.
ಭದ್ರಾವತಿ, ಮಾ. ೧೩: ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕುಟುಂಬ ವರ್ಗದವರು ಮತ್ತು ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣಗಳನ್ನು ಖಂಡಿಸಿ ಶಿವಮೊಗ್ಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜನಾಕ್ರೋಶ ಪ್ರತಿಭಟನೆ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಕಾಂಗ್ರೆಸ್ ಪಕ್ಷದ ಕಾರ್ಯಕತರು, ಅಭಿಮಾನಿಗಳು ಸುಮಾರು ೧೦೦ಕ್ಕೂ ಹೆಚ್ಚು ಬಸ್ಸು, ಮಾಕ್ಸಿ ಕ್ಯಾಬ್ ಸೇರಿದಂತೆ ಇನ್ನಿತರ ವಾಹನಗಳಲ್ಲಿ ತೆರಳಿದರು.
ಕಾಂಗ್ರೆಸ್ ಪಕ್ಷದ ನಗರ ಭಾಗದ ಬಹುತೇಕ ಕಾರ್ಯಕರ್ತರು, ಅಭಿಮಾನಿಗಳು, ಮುಖಂಡರು ತಮ್ಮ ತಮ್ಮ ಸ್ವಂತ ವಾಹನಗಳಲ್ಲಿ ತೆರಳಿದರು. ಅದರಲ್ಲೂ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿರುವುದು ಕಂಡು ಬಂದಿತು. ತಾಲೂಕಿನ ದೂರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಬಿಳಿಕಿ ಕ್ರಾಸ್ ಬಳಿ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರಿಂದಾಗಿ ಬಿಳಿಕಿ ಕ್ರಾಸ್ ಬಳಿ ಬಿ.ಎಚ್ ರಸ್ತೆಯಲ್ಲಿ ಸುಮಾರು ೨ ತಾಸು ವಾಹನ ದಟ್ಟಣೆ ಕಂಡು ಬಂದಿತು. ಸಂಚಾರ ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸ ಪಡುವಂತಾಯಿತು.
ಕಾಂಗ್ರೆಸ್ ಬಾವುಟ ಹಿಡಿತು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶಿವಮೊಗ್ಗ ನಗರ ತಲುಪಿದರು. ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು, ಮುಖಂಡರು ಪಾಲ್ಗೊಂಡಿರುವುದು ಗಮನ ಸೆಳೆಯಿತು. ಕಳೆದ ೪-೫ ದಿನಗಳಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕುಟುಂಬ ವರ್ಗದವರು, ಪಕ್ಷದ ರಾಜ್ಯ ಹಾಗು ಜಿಲ್ಲಾ ಮತ್ತು ಸ್ಥಳೀಯ ಮುಖಂಡರು ಹೆಚ್ಚಿನ ಶ್ರಮ ವಹಿಸಿದ್ದರು.
ಶಿವಮೊಗ್ಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಜನಾಕ್ರೋಶ ಪ್ರತಿಭಟನೆ ಕಾರ್ಯಕ್ರಮಕ್ಕೆ ಭದ್ರಾವತಿಯಿಂದ ಸಾವಿರಾರು ಮಂದಿ ಕಾಂಗ್ರೆಸ್ ಪಕ್ಷದ ಕಾರ್ಯಕತರು, ಅಭಿಮಾನಿಗಳಿಗೆ ಬಿಳಿಕಿ ಕ್ರಾಸ್ ಬಳಿ ಊಟದ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿತ್ತು.
No comments:
Post a Comment