ಭದ್ರಾವತಿ, ಮಾ. ೨೦: ನಗರದ ವಿವೇಕಾನಂದ ಯೋಗ ಟ್ರಸ್ಟ್ ಅಧ್ಯಕ್ಷ, ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್ ೩ ನಿಮಿಷಗಳ ತ್ರಿಕೋನಾಸನ ಯೋಗ ಸ್ಪರ್ಧೆಯಲ್ಲಿ ಯೂನಿವರ್ಸಲ್ ರೆಕಾರ್ಡ್‌ಗೆ ಪಾತ್ರರಾಗಿದ್ದಾರೆ.
ಭದ್ರಾವತಿ, ಮಾ. ೨೦: ನಗರದ ವಿವೇಕಾನಂದ ಯೋಗ ಟ್ರಸ್ಟ್ ಅಧ್ಯಕ್ಷ, ಅಂತರಾಷ್ಟ್ರೀಯ ಯೋಗಪಟು ಡಿ. ನಾಗರಾಜ್ ೩ ನಿಮಿಷಗಳ ತ್ರಿಕೋನಾಸನ ಯೋಗ ಸ್ಪರ್ಧೆಯಲ್ಲಿ ಯೂನಿವರ್ಸಲ್ ರೆಕಾರ್ಡ್‌ಗೆ ಪಾತ್ರರಾಗಿದ್ದಾರೆ.
ಶಿವಮೊಗ್ಗ ಕೋಟೆ ರಸ್ತೆಯಲ್ಲಿರುವ ವಾಸವಿ ಪಬ್ಲಿಕ್ ಶಾಲೆಯಲ್ಲಿ ವರ್ಷಿಣಿ ಯೋಗ ಶಿಕ್ಷಣ ಸಂಸ್ಥೆ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಹಾಗು ಜೈ ಭೀಮ್ ಕನ್ನಡ ಸೈನ್ಯ ರಕ್ಷಣಾವೇದಿಕೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಈ ಸಾಧನೆಗೆ ಪಾತ್ರರಾಗಿದ್ದು, ಈಗಾಗಲೇ ನಾಗರಾಜ್‌ರವರು ಹಲವಾರು ರಾಷ್ಟ್ರೀಯ, ಅಂತರಾಷ್ಟ್ರೀಯ ಹಾಗು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ವರ್ಷಿಣಿ ಯೋಗಕೇಂದ್ರದ ಅಧ್ಯಕ್ಷ ಪಿ. ಪೆಂಚಾಲಯ್ಯ, ಕಾರ್ಯದರ್ಶಿ ವೆಂಕಟೇಶ್, ಯೋಗ ತೀರ್ಪುಗಾರರಾದ ಮುದ್ದುಕೃಷ್ಣ, ಗೋಪಾಲ್‌ರಾಜ್, ಪುರಶುರಾಮ್ ಹಾಗು ಡಾ. ನಿಂಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಸುಮಾರು ೧೩೫ಕ್ಕೂ ಹೆಚ್ಚು ಯೋಗಪಟುಗಳು ಭಾಗವಹಿಸಿದ್ದರು.
No comments:
Post a Comment