ಭದ್ರಾವತಿ, ಮಾ. ೨೩: ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಮಾ.೨೪ರಂದು ಜಾಥಾ ಹಮ್ಮಿಕೊಳ್ಳಲಾಗಿದೆ.
ಈ ಬಾರಿ 'ಕ್ಷಯರೋಗ ನಿರ್ಮೂಲನೆಗೆ ಕಾಲಘಟಿಸುತ್ತಿದೆ' ಘೋಷ ವಾಕ್ಯದೊಂದಿಗೆ ವಿಶ್ವ ಕ್ಷಯರೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಬೆಳಿಗ್ಗೆ ೯.೩೦ಕ್ಕೆ ತಾಲೂಕು ಕಛೇರಿ ಮುಂಭಾಗದಿಂದ ಜಾಥಾ ಆರಂಭಗೊಂಡು ಬಸವೇಶ್ವರ ವೃತ್ತ, ಸಿ.ಎನ್ ರಸ್ತೆ ಮೂಲಕ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ತಲುಪಲಿದೆ.
ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
No comments:
Post a Comment