ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಶನಿವಾರ ಲಸಿಕೆ ಪಡೆದರು.
ಭದ್ರಾವತಿ, ಮಾ. ೨೦: ಕೊರೋನಾ ೨ನೇ ಹಂತದ ಅಲೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಈ ನಡುವೆ ಕೊರೋನಾ ಲಸಿಕೆ ಪಡೆಯುವವರ ಸಂಖ್ಯೆ ಸಹ ಅಧಿಕವಾಗುತ್ತಿದೆ. ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಶನಿವಾರ ಲಸಿಕೆ ಪಡೆದರು.
ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಓ. ಮಲ್ಲಪ್ಪ, ಡಾ. ದಿವ್ಯ ಕೋವಿಡ್-೧೯ ವ್ಯಾಕ್ಸಿನ್ ನೀಡಿದರು. ಸಮಾಜದ ಮುಖಂಡರಾದ ಸಿದ್ದಲಿಂಗಯ್ಯ, ಎಸ್ ವಾಗೀಶ್, ಸತೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಈಗಾಗಲೇ ಆಸ್ಪತ್ರೆಯಲ್ಲಿ ಪೌರಕಾರ್ಮಿಕರು, ಆರೋಗ್ಯ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು ಹಾಗು ಇನ್ನಿತರ ಇಲಾಖೆಗಳ ಆಯ್ದ ಸಿಬ್ಬಂದಿಗಳಿಗೆ ೧ ಮತ್ತು ೨ನೇ ಹಂತದ ಲಸಿಕೆಯನ್ನು ನೀಡಲಾಗಿದೆ. ಉಳಿದಂತೆ ಕಳೆದ ಸುಮಾರು ೧೦ ದಿನಗಳಿಂದ ೪೫ ವರ್ಷ ಮೇಲ್ಪಟ್ಟ ೬೦ ವರ್ಷದೊಳಗಿನ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹಾಗು ೬೦ ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲಾಗುತ್ತಿದೆ.
No comments:
Post a Comment