ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಬಿವೈಕೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಂತರಾಷ್ಟ್ರೀಯ ಯೋಗಪಟು ಡಾ. ನಿಂಗೇಶ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಮಾ. ೩: ಹಳೇನಗರದ ಕನಕಮಂಟಪ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಬಿವೈಕೆ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಂತರಾಷ್ಟ್ರೀಯ ಯೋಗಪಟು ಡಾ. ನಿಂಗೇಶ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಡಾ. ನಿಂಗೇಶ್‌ರವರು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ಯೋಗ ಕ್ಷೇತ್ರದಲ್ಲಿನ ಉತ್ತಮ ಸಾಧನೆಯನ್ನು ಗುರುತಿಸಿ ಕ್ಲಬ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಇದೆ ರೀತಿ ಅಂತರಾಷ್ಟ್ರೀಯ ಖೋ ಖೋ ಕ್ರೀಡಾಪಟು ಮುನಿರ್ ಬಾಷರನ್ನು ಸಹ ಸನ್ಮಾನಿಸಿ ಅಭಿನಂದಿಸಲಾಯಿತು.
ಅಂತರಾಷ್ಟ್ರೀಯ ಕ್ರೀಡಾಪಟು, ಕಬ್ಲ್ ಅಧ್ಯಕ್ಷ ಕೃಷ್ಣೇಗೌಡ, ಪ್ರಧಾನ ಕಾರ್ಯದರ್ಶಿ ಎಚ್.ಆರ್ ರಂಗನಾಥ್, ಕಾರ್ಯದರ್ಶಿ ಮಾರ್ಕಂಡಯ್ಯ, ಖಜಾಂಚಿ ಎಸ್. ವಿಶ್ವನಾಥ್, ಉಪಾಧ್ಯಕ್ಷರಾದ ಚನ್ನಪ್ಪ, ಉದ್ಯಮಿ ಬಿ.ಕೆ ಜಗನ್ನಾಥ್, ಮುಖಂಡರಾದ ಕೆ. ಸುದೀಪ್‌ಕುಮಾರ್, ನಗರಸಭಾ ಸದಸ್ಯ ಮಣಿ ಎಎನ್‌ಎಸ್, ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment