ಭದ್ರಾವತಿ, ಮಾ. ೪: ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ತುಮಕೂರು ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜಯಂತಿ, ನೂತನ ಗ್ರಾ.ಪಂ. ಸದಸ್ಯರಿಗೆ ಅಭಿನಂದನೆ ಹಾಗು ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪ್ರತಿಭಾವಂತವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಏ.೧ರಂದು ಹಮ್ಮಿಕೊಳ್ಳಲಾಗಿದೆ.
ಹಳೇನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿರುವ ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಯುವ ವೇದಿಕೆ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಹ ನಡೆಯಲಿದೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳು ಮಾ.೧೫ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಾಸಭಾ ಅಧ್ಯಕ್ಷ ಸಿದ್ದಲಿಂಗಯ್ಯ ತಿಳಿಸಿದ್ದಾರೆ.
No comments:
Post a Comment