ಭದ್ರಾವತಿ, ಮಾ. ೧೨: ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ.೧೬ರಂದು ಬೆಳಿಗ್ಗೆ ೧೦.೩೦ಕ್ಕೆ ಅಪ್ಪರ್‌ಹುತ್ತಾ ಶ್ರೀ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಶಾರದ ಅಪ್ಪಾಜಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
No comments:
Post a Comment