ಬಿ.ಇಡಿ ಸೀಟುಗಳ ಮಾರಾಟದಲ್ಲಿ ತೊಡಗಿರುವ ಕಾಲೇಜುಗಳ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭದ್ರಾವತಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಸೀಲ್ದಾರ್ ಜೆ. ಸಂತೋಷ್‌ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮಾ. ೧೩: ಬಿ.ಇಡಿ ಸೀಟುಗಳ ಮಾರಾಟದಲ್ಲಿ ತೊಡಗಿರುವ ಕಾಲೇಜುಗಳ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಸೀಲ್ದಾರ್ ಜೆ. ಸಂತೋಷ್‌ಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ರಾಜ್ಯದಲ್ಲಿ ಬಿ.ಇಡಿ ಸೀಟುಗಳ ಮಾರಾಟ ದಂಧೆ ನಡೆಯುತ್ತಿರುವುದು ಬೇಸರ ತಂದಿದೆ. ಬಿ.ಇಡಿ ಕೋರ್ಸ್‌ಗಳಿಗೆ ಹೆಚ್ಚಿನ ಮಾನ್ಯತೆ ಇರುವ ಕಾರಣ ಕೆಲವು ಬಿ.ಇಡಿ ಶಿಕ್ಷಣ ಸಂಸ್ಥೆಗಳು ಬಿ.ಇಡಿ ಪ್ರಮಾಣ ಪತ್ರಗಳನ್ನು ಮಾರಾಟ ಮಾಡುವ ಮೂಲಕ ಅಕ್ರಮವಾಗಿ ಹಣ ಸಂಪಾದಿಸುತ್ತಿವೆ. ತರಗತಿಗಳಿಗೆ ಹಾಜರಾಗದೆ ಬಿ.ಇಡಿ ಕೋರ್ಸ್ ಮಾಡಲು ಬಯಸುವವರಿಗೆ ಅಕ್ರಮವಾಗಿ ಪ್ರಮಾಣ ಪತ್ರಗಳನ್ನು ನೀಡಲಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಬಿ.ಇಡಿ ಪದವಿ ಪಡೆದುಕೊಳ್ಳಲು ಅಕ್ರಮ ಮಾರ್ಗ ಕಂಡುಕೊಂಡವರಿಗೆ ಕಾಲಕಾಲಕ್ಕೆ ಸಲ್ಲಿಸಬೇಕಾದ ಅಸೈನ್‌ಮೆಂಟ್‌ಗಳನ್ನು ಕೂಡ ಕಾಲೇಜಿನವರೇ ಒದಗಿಸುತ್ತಿದ್ದಾರೆ. ಇದನ್ನು ನೋಡಿಕೊಂಡು ಅಸೈನ್‌ಮೆಂಟ್‌ಗಳನ್ನು ಬರೆದುಕೊಡಲಾಗುತ್ತಿದೆ. ಇದಕ್ಕೆ ಇಂತಿಷ್ಟು ಹಣ ಎಂದು ಫಿಕ್ಸ್ ಮಾಡಲಾಗಿದೆ. ಒಂದು ದಿನವೂ ತರಗತಿಗೆ ಹಾಜರಾಗಿ ಪಾಠ ಕೇಳದೆ ಕೇವಲ ಪರೀಕ್ಷೆಯನ್ನು ಮಾತ್ರ ಬರೆದು ಬಿಇಡಿ ಪದವಿ ಪ್ರಮಾಣ ಪತ್ರ ಪಡೆದುಕೊಳ್ಳುವವರು ಶಿಕ್ಷಣದ ಗುಣಮಟ್ಟ ಕಾಪಾಡಲು ಸಾಧ್ಯವೇ? ಎಂದು ಮನವಿಯಲ್ಲಿ ಪ್ರಶ್ನಿಸಲಾಗಿದೆ.
ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಅಕ್ರಮಗಳ ವಿರುದ್ಧ ತನಿಖೆ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೊರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.
No comments:
Post a Comment