ಭಾರತೀಯ ಜನತಾ ಪಕ್ಷದ ಭದ್ರಾವತಿ ನಗರಸಭೆ ಚುನಾವಣೆ ಕಾರ್ಯಾಲಯದ ಉದ್ಘಾಟನೆಯನ್ನು ಸೋಮವಾರ ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ನೆರವೇರಿಸಿದರು.
ಭದ್ರಾವತಿ, ಏ. ೧೨: ಭಾರತೀಯ ಜನತಾ ಪಕ್ಷದ ನಗರಸಭೆ ಚುನಾವಣೆ ಕಾರ್ಯಾಲಯದ ಉದ್ಘಾಟನೆಯನ್ನು ಸೋಮವಾರ ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್ ನೆರವೇರಿಸಿದರು.
ಬಸವೇಶ್ವರ ವೃತ್ತದಲ್ಲಿರುವ ಪಕ್ಷದ ಕಛೇರಿಯಲ್ಲಿ ಅಧಿಕೃತವಾಗಿ ಕಾರ್ಯಾಲಯಕ್ಕೆ ಚಾಲನೆ ನೀಡುವ ಮೂಲಕ ಈ ಬಾರಿ ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸವನ್ನು ಜಿಲ್ಲಾಧ್ಯಕ್ಷರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ದರಾಮಣ್ಣ, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಡಿ.ಎಸ್ ಅರುಣ್, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಸೂಡಾ ಸದಸ್ಯ ರಾಮಲಿಂಗಯ್ಯ, ಪ್ರಮುಖರಾದ ಗಿರೀಶ್‌ಪಟೇಲ್, ಎಸ್. ದತ್ತಾತ್ರಿ, ಸಿ. ಮಂಜುಳ, ಮಂಗೋಟೆ ರುದ್ರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಶಿವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment