ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮ ಶಾಖೆ ಉದ್ಘಾಟನೆ ಸೋಮವಾರ ನಡೆಯಿತು.
ಭದ್ರಾವತಿ, ಏ. ೫: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ತಾಲೂಕಿನ ಹಿರಿಯೂರು ಗ್ರಾಮ ಶಾಖೆ ಉದ್ಘಾಟನೆ ಸೋಮವಾರ ನಡೆಯಿತು.
ಗ್ರಾಮದ ಬಯಲು ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ರಾಜ್ಯ ಖಜಾಂಚಿ ಸತ್ಯ ಶಾಖೆಯನ್ನು ಉದ್ಘಾಟಿಸಿದರು. ಗ್ರಾಮದ ಅಚಲ ಸದ್ಗುರು ಆಶ್ರಮದ ಶ್ರೀ ಲಕ್ಷ್ಮಣಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪವಿತ್ರ ಮಂಜುನಾಥ್, ಹಾಲು ಸಹಕಾರ ಸಂಘದ ಉಪಾಧ್ಯಕ್ಷ ರಾಜಣ್ಣ, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ರಾಜ್ಯ ಸಂಘಟನಾ ಸಂಚಾಲಕಿ ಶಾಂತಿ, ತಾಲೂಕು ಸಂಚಾಲಕ ಕೆ. ರಂಗನಾಥ್, ಅಂಗವಿಕಲ ಘಟಕದ ಜಿಲ್ಲಾಧ್ಯಕ್ಷ ಕಾಣಿಕ್‌ರಾಜ್, ಜಿಂಕ್‌ಲೈನ್ ಮಣಿ, ವಿನೋದ್, ರಾಮಲಿಂಗಮ್, ಶಿವಾಜಿರಾವ್, ಸಂದೀಪ್ ಆರ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment