ಸುಮಾರು ೧೫೦ ವರ್ಷಗಳಿಗೂ ಅಧಿಕ, ಹಳೇಯದಾದ ಭದ್ರಾವತಿ ನಗರದ ಹೃದಯ ಭಾಗದಲ್ಲಿರುವ ಭದ್ರಾ ಸೇತುವೆ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣಗೊಳ್ಳುತ್ತಿದ್ದು, ಇದೀಗ ಶೇ.೮೦ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ.
ಭದ್ರಾವತಿ, ಏ. ೧೮: ಸುಮಾರು ೧೫೦ ವರ್ಷಗಳಿಗೂ ಅಧಿಕ, ಹಳೇಯದಾದ ನಗರದ ಹೃದಯ ಭಾಗದಲ್ಲಿರುವ ಭದ್ರಾ ಸೇತುವೆ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣಗೊಳ್ಳುತ್ತಿದ್ದು, ಇದೀಗ ಶೇ.೮೦ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ.
ಸೇತುವೆಯನ್ನು ಸಂಪೂರ್ಣವಾಗಿ ಕಾಂಕ್ರಿಟ್‌ನಿಂದ ನಿರ್ಮಿಸಲಾಗುತ್ತಿದ್ದು, ಎರಡು ಬದಿ ಆಕರ್ಷಕವಾಗಿ ಕಮಾನು ಮಾದರಿಯಲ್ಲಿ ಸೇತುವೆ ನಿರ್ಮಾಣಗೊಳ್ಳುತ್ತಿದೆ. ಭಾನುವಾರ ಬೆಳಿಗ್ಗೆ ಸೇತುವೆ ಎರಡನೇ ಕಮಾನು ಅಳವಡಿಸುವ ಕಾರ್ಯ ನಡೆಯಿತು. ಇದರಿಂದಾಗಿ ಬೆಳಿಗ್ಗೆ ಸುಮಾರು ೨ ತಾಸು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಭದ್ರಾ ಸೇತುವೆ ಶಿಥಿಲಗೊಂಡ ಪರಿಣಾಮ ಹೊಸ ಸೇತುವೆ ನಿರ್ಮಿಸುವಂತೆ ಹಲವಾರು ವರ್ಷಗಳಿಂದ ಸರ್ಕಾರಕ್ಕೆ ಒತ್ತಾಯಿಸಿಕೊಂಡು ಬರಲಾಗುತ್ತಿತ್ತು. ಇದರ ಪರಿಣಾಮ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಡಾ. ಎಚ್.ಸಿ ಮಹಾದೇವಪ್ಪ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ಸುಮಾರು ೧೮ ತಿಂಗಳ ಅವಧಿಯಲ್ಲಿ ಮುಕ್ತಾಯಗೊಳ್ಳಬೇಕಾದ ಕಾಮಗಾರಿ ಹಲವಾರು ಕಾರಣಗಳಿಂದ ವಿಳಂಬವಾಗಿದ್ದು, ಇದೀಗ ಶೇ.೮೦ರಷ್ಟು ಕಾಮಗಾರಿ ನಡೆದಿದೆ. ಮುಂದಿನ ೨-೩ ತಿಂಗಳಲ್ಲಿ ಸೇತುವೆ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ.
No comments:
Post a Comment