ಭದ್ರಾವತಿ, ಏ. ೮: ಲೋಕೋಪಯೋಗಿ ಇಲಾಖೆವತಿಯಿಂದ ನಗರದ ಹೊಸಮನೆ ಭಾಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.೧೧ರಂದು ಬೆಳಿಗ್ಗೆ ೧೦.೩೦ರಿಂದ ಸಂಜೆ ೫.೩೦ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ), ಹೊಳೆಹೊನ್ನೂರು ವೃತ್ತ, ಎನ್.ಎಂ.ಸಿ ರಸ್ತೆ, ಸಂತೆ ಮೈದಾನ, ಭೋವಿ ಕಾಲೋನಿ, ಹೊಸಮನೆ, ಕುವೆಂಪು ನಗರ, ಸುಭಾಷ್‌ನಗರ, ತ್ಯಾಗರಾಜ ನಗರ, ತಮ್ಮಣ್ಣ ಕಾಲೋನಿ, ಶಿವಾಜಿ ವೃತ್ತ, ಹನುಮಂತ ನಗರ, ವಿಜಯ ನಗರ, ಅಶ್ವತ್ಥ ನಗರ, ಕಬಳಿಕಟ್ಟೆ ಕೇಶವಪುರ ಮತ್ತು ಗಾಂಧಿನಗರ ಸೇರಿದಂತೆ ಇನ್ನಿತರ ಪ್ರದೇಶಗಳ ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
No comments:
Post a Comment