ಭದ್ರಾವತಿ ನಗರಸಭೆ ೨ನೇ ವಾರ್ಡಿನ ಜೆಡಿಎಸ್ ಅಭ್ಯರ್ಥಿ ಶಾಂತ ಮೋಹನರಾವ್ ಮಂಗಳವಾರ ಮನೆ ಮನೆಗೆ ತೆರಳಿ ಕರಪತ್ರ ವಿತರಿಸಿ ಮತಯಾಚನೆ ನಡೆಸಿದರು.
ಭದ್ರಾವತಿ, ಏ. ೨೦: ಒಂದೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮತ್ತೊಂದೆಡೆ ನಗರಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ವಿವಿಧ ವಾರ್ಡ್‌ಗಳಲ್ಲಿ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.
ನಗರಸಭೆ ೨ನೇ ವಾರ್ಡಿನ ಜೆಡಿಎಸ್ ಅಭ್ಯರ್ಥಿ ಶಾಂತ ಮೋಹನ್‌ರಾವ್ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗು ಕುಟುಂಬ ಸದಸ್ಯರೊಂದಿಗೆ ಮಂಗಳವಾರ ವಾರ್ಡ್‌ನ ಪ್ರತಿ ಮನೆಗಳಿಗೆ ಭೇಟಿ ನೀಡಿ ಕರಪತ್ರಗಳನ್ನು ವಿತರಿಸಿ ಮತಯಾಚನೆ ನಡೆಸಿದರು.
ಈ ವಾರ್ಡ್‌ನಲ್ಲಿ ಈ ಹಿಂದೆ ೨೦೦೭ರ ಚುನಾವಣೆಯಲ್ಲಿ ಎಸ್.ಬಿ ಮೋಹನ್‌ರಾವ್ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ೨೦೧೩ರಲ್ಲಿ ಪುನಃ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಪತ್ನಿಯನ್ನು ಕಣಕ್ಕಿಳಿಸಿದ್ದು, ತಮ್ಮ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ನಡೆಸುತ್ತಿದ್ದಾರೆ.
ಇದೆ ರೀತಿ ೬ನೇ ವಾರ್ಡ್‌ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಕನ್ಯ ಸಹ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸುತ್ತಿದ್ದಾರೆ. ಸುಕನ್ಯ ಸುಮಾರು ೨೦ ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಸಹ ನೇಮಕಗೊಂಡಿದ್ದರು. ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಬೆಂಬಲಿಗರಲ್ಲಿ ಒಬ್ಬರಾಗಿದ್ದರು. ಕುವೆಂಪು ಪ್ರವಾಸಿ ವಾಹನ ಚಾಲಕರ ಹಾಗು ಮಾಲೀಕರ ಸಂಘ ಹಾಗು ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪತಿ ಡಿ. ರಾಜು ಅವರೊಂದಿಗೆ ತಾವು ಕೈಗೊಂಡಿರುವ ಸಾಮಾಜಿಕ ಸೇವಾ ಕಾರ್ಯಗಳನ್ನು ಮುಂದಿಟ್ಟು ಮತಯಾಚನೆ ನಡೆಸುತ್ತಿದ್ದಾರೆ.
ಭದ್ರಾವತಿ ನಗರಸಭೆ ೬ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಸುಕನ್ಯ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.
No comments:
Post a Comment