ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ
ಭದ್ರಾವತಿ ನಗರಸಭೆ ೩೪ ವಾರ್ಡ್‌ಗಳ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ ಸಂಜೆ ಪೊಲೀಸ್ ಇಲಾಖೆ ವತಿಯಿಂದ ಶಾಂತಿಯುತ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಯಿತು.
ಭದ್ರಾವತಿ, ಏ. ೨೬: ನಗರಸಭೆ ೩೪ ವಾರ್ಡ್‌ಗಳ ಚುನಾವಣೆ ಹಿನ್ನಲೆಯಲ್ಲಿ ಸೋಮವಾರ ಸಂಜೆ ಪೊಲೀಸ್ ಇಲಾಖೆ ವತಿಯಿಂದ ಶಾಂತಿಯುತ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಲಾಯಿತು.
ಮತಗಟ್ಟೆಗಳಿಗೆ ಮತದಾರರು ನಿರ್ಭೀತಿಯಿಂದ ಆಗಮಿಸುವ ಜೊತೆಗೆ ಮಾಸ್ಕ್, ಸ್ಯಾನಿಟೈಜರ್ ಬಳಕೆ, ಸಾಮಾಜಿಕ ಅಂತರ ಸೇರಿದಂತೆ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಮತದಾನ ಯಶಸ್ವಿಗೊಳಿಸುವಂತೆ ಇಲಾಖೆ ವತಿಯಿಂದ ಮನವಿ ಮಾಡಲಾಯಿತು.
ಚುನಾವಣಾ ಹಿನ್ನಲೆಯಲ್ಲಿ ಭದ್ರತೆಗಾಗಿ ೨-ಡಿವೈಎಸ್‌ಪಿ, ೪-ಸರ್ಕಲ್ ಇನ್ಸ್‌ಪೆಕ್ಟರ್, ೧೬-ಸಬ್ ಇನ್ಸ್‌ಪೆಕ್ಟರ್, ೩೭-ಎಎಸ್‌ಐ ಮತ್ತು ೨೩೧-ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ನಿಯೋಜಿಸಲಾಗಿದೆ.
No comments:
Post a Comment