ಭದ್ರಾವತಿ, ಏ. ೧೯: ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಏ.೨೦ರಂದು ಸಂಜೆ ೪.೩೦ಕ್ಕೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ, ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್ ರುದ್ರೇಗೌಡ, ಭಾರತಿಶೆಟ್ಟಿ, ವಿಧಾನಸಭಾ ಸದಸ್ಯ ಕೆ.ಬಿ ಅಶೋಕ್‌ನಾಯ್ಕ್, ಮುಖಂಡರಾದ ಆರ್.ಕೆ ಸಿದ್ದರಾಮಣ್ಣ, ಎಂ.ಬಿ ಭಾನುಪ್ರಕಾಶ್, ಗಿರೀಶ್‌ಪಟೇಲ್, ಪಕ್ಷದ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಚನ್ನೇಶ್ ಮತ್ತು ಹನುಮಂತನಾಯ್ಕ ಕೋರಿದ್ದಾರೆ.
No comments:
Post a Comment