ಭದ್ರಾವತಿ, ಏ. ೧೮: ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಏ.೧೯ ರಿಂದ ೨೬ರ ವರೆಗೆ ಭಿತ್ತಿಪತ್ರದ ಮೂಲಕ ನಗರಸಭೆ ೩೫ ವಾರ್ಡ್‌ಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆಟೋ ಮೂಲಕ ಬೆಳಿಗ್ಗೆ ೮ ರಿಂದ ಸಂಜೆ ೫ ಗಂಟೆವರೆಗೆ ಪ್ರಚಾರ ನಡೆಯಲಿದ್ದು, ಮಾನವ ಹಕ್ಕುಗಳನ್ನು ಎತ್ತಿ ಹಿಡಿಯುವ, ಪ್ರಾಮಾಣಿಕ ಹಾಗು ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಹಾಗು ಹಣ, ಹೆಂಡ ಸೇರಿದಂತೆ ಇನ್ನಿತರ ಅಮಿಷಗಳಿಗೆ ಬಲಿಯಾಗದಂತೆ ಜಾಗೃತಿ ಮೂಡಿಸಲಾಗುವುದು.
ಕಾರ್ಯಕ್ರಮಕ್ಕೆ ಏ.೧೯ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಮುಂಭಾಗ ಪೌರಾಯುಕ್ತ ಮನೋಹರ್ ಚಾಲನೆ ನೀಡಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ.
No comments:
Post a Comment