ಮಂಜುನಾಥ್
ಭದ್ರಾವತಿ, ಏ. ೧೯: ನಿಯೋಜನೆ ಮೇರೆಗೆ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಗರದ ಮೈಸೂರು ಕಾಗದ ಕಾರ್ಖಾನೆ ಉದ್ಯೋಗಿ ಮಂಜುನಾಥ್(೫೯) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಪತ್ನಿ, ಇಬ್ಬರು ಪುತ್ರರನ್ನು ಹೊಂದಿದ್ದರು. ಸೋಂಕು ತಗುಲಿದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಮಂಜುನಾಥ್ ಕಾರ್ಮಿಕ ಸಂಘದಲ್ಲಿ ಖಜಾಂಚಿಯಾಗಿ, ಮೈಸೂರು ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮೃತರ ನಿಧನಕ್ಕೆ ಕಾರ್ಮಿಕ ಮುಖಂಡರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment