ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮಂಗಳವಾರ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಮಾಡದ ವಾಹನ ಸವಾರರಿಗೆ ದಂಡ ವಿಧಿಸಲಾಯಿತು.
ಭದ್ರಾವತಿ, ಏ. ೨೦: ಕೊರೋನಾ ಸೋಂಕು ೨ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮಂಗಳವಾರ ನಗರಸಭೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಮಾಡದ ವಾಹನ ಸವಾರರಿಗೆ ದಂಡ ವಿಧಿಸಲಾಯಿತು.
ಸ್ವತಃ ನಗರಸಭೆ ಪೌರಾಯುಕ್ತ ಮನೋಹರ್ ಬೆಳಿಗ್ಗೆ ಬಿ.ಎಚ್ ರಸ್ತೆ ಅಪ್ಪರ್ ಹುತ್ತಾದಲ್ಲಿ ಮಾಸ್ಕ್ ಧರಿಸದ ದ್ವಿಚಕ್ರ ವಾಹನ ಸವಾರರನ್ನು ತಡೆದು ದಂಡ ವಸೂಲಾತಿ ಮಾಡಿದರು. ಅಲ್ಲದೆ ಭದ್ರಾವತಿ-ಶಿವಮೊಗ್ಗ ನಡುವೆ ಸಂಚರಿಸುವ ಮ್ಯಾಕ್ಸಿಕ್ಯಾಬ್, ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಸಹ ತಡೆದು ಮಾಸ್ಕ್ ಧರಿಸದ ಪ್ರಯಾಣಿಕರನ್ನು ಪತ್ತೆ ಮಾಡಿ ಎಚ್ಚರಿಕೆ ನೀಡಲಾಯಿತು.
ಅಂಬೇಡ್ಕರ್ ವೃತ್ತ, ಮಾಧವಚಾರ್ ವೃತ್ತ, ಗಾಂಧಿ ವೃತ್ತ ಮತ್ತು ರಂಗಪ್ಪ ವೃತ್ತಗಳಲ್ಲಿ ಪೌರಾಯುಕ್ತರ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಬೆಳಿಗ್ಗೆಯಿಂದ ಸಂಜೆವರೆಗೂ ಕಾರ್ಯಾಚರಣೆ ನಡೆಸಿ ಒಟ್ಟು ೧೨,೮೦೦ ರು. ದಂಡ ವಸೂಲಾತಿ ಮಾಡಿದ್ದು, ಅಲ್ಲದೆ ಸರಿಯಾಗಿ ಮಾಸ್ಕ್ ಧರಿಸದ ಸವಾರರಿಗೆ ತಿಳುವಳಿಕೆ ನೀಡಿದ್ದಾರೆ.
ಬುಧವಾರದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರನ್ನು ಪತ್ತೆ ಮಾಡಿ ದಂಡ ವಸೂಲಾತಿ ಮಾಡುವ ಕಾರ್ಯಾಚರಣೆ ನಡೆಯಲಿದೆ ಎಂದು ಪೌರಾಯುಕ್ತ ಮನೋಹರ್ ತಿಳಿಸಿದ್ದಾರೆ.
No comments:
Post a Comment