ಎಚ್. ಶ್ರೀನಿವಾಸ್
ಭದ್ರಾವತಿ, ಏ. ೧೫: ತಾಲೂಕು ಛಾಯಾಗ್ರಾಹಕರ ಸಂಘದ ನೂತನ ಅಧ್ಯಕ್ಷರಾಗಿ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಯುವ ಮುಖಂಡ ಎಚ್. ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಆರ್. ಮಂಜುನಾಥ್, ಕಾರ್ಯದರ್ಶಿಯಾಗಿ ಶೈಲೇಶ್‌ಕುಮಾರ್ ಮತ್ತು ಖಜಾಂಚಿಯಾಗಿ ರೇಣುಕಯ್ಯ ಆಯ್ಕೆಯಾಗಿದ್ದಾರೆ. ಈ ಹಿಂದೆ ರಾಮಕೃಷ್ಣ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕೆಲವು ದಿನಗಳ ಹಿಂದೆ ನಡೆದ ಚುನಾವಣೆಯಲ್ಲಿ ಎಚ್. ಶ್ರೀನಿವಾಸ್ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರನ್ನು ನಗರದ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಅಭಿನಂದಿಸಿದ್ದಾರೆ.
No comments:
Post a Comment