Monday, April 5, 2021

ನಗರಸಭೆ ಚುನಾವಣೆ : ಸಾರ್ವಜನಿಕ ರಜಾದಿನಗಳಂದು ಸಹ ನಾಮಪತ್ರ ಸಲ್ಲಿಕೆಗೆ ಅವಕಾಶ ಕೊಡಿ

ಸರ್ಕಾರಿ ರಜಾ ದಿನಗಳಂದು ಸಹ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಿಕೊಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಜನತಾದಳ(ಸಂಯುಕ್ತ) ಕರ್ನಾಟಕ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ಭದ್ರಾವತಿಯಲ್ಲಿ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್‌ಗೆ ಮನವಿ ಸಲ್ಲಿಸಿದ್ದಾರೆ.
    ಭದ್ರಾವತಿ, ಏ. ೫: ಸರ್ಕಾರಿ ರಜಾ ದಿನಗಳಂದು ಸಹ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಿಕೊಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಜನತಾದಳ(ಸಂಯುಕ್ತ) ಕರ್ನಾಟಕ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್‌ಗೆ ಮನವಿ ಸಲ್ಲಿಸಿದ್ದಾರೆ.
    ಸ್ಥಳೀಯ ಸಂಸ್ಥೆ ನಗರಸಭೆ ಚುನಾವಣೆಗೆ ಏ.೮ ರಿಂದ ೧೫ರ ವರೆಗೆ ನಾಮಪತ್ರ ಸಲ್ಲಿಸಲು ದಿನಾಂಕ ನಿಗದಿಪಡಿಸಲಾಗಿದೆ. ಈ ನಡುವೆ ೪ ಸರ್ಕಾರಿ ರಜಾದಿನಗಳು ಇದ್ದು, ಇದರಿಂದಾಗಿ ಕಡಿಮೆ ಅವಧಿಯಲ್ಲಿ ನಾಮಪತ್ರ ಸಲ್ಲಿಸುವುದು ಅಸಾಧ್ಯವಾಗಿದೆ.  ಅದರಲ್ಲೂ ಹೊಸದಾಗಿ ನಾಮಪತ್ರ ಸಲ್ಲಿಸುವವರಿಗೆ ಹೆಚ್ಚಿನ ತೊಂದರೆಯಾಗಿದೆ. ಎಲ್ಲಾ ಸರ್ಕಾರಿ ಕಛೇರಿಗಳು ರಜೆ ಇರುವುದರಿಂದ ಹೊಸದಾಗಿ ಬ್ಯಾಂಕ್ ಖಾತೆ ತೆರೆಯುವುದು ಹಾಗು ಇನ್ನಿತರ ದಾಖಲಾತಿಗಳನ್ನು ನಿಗದಿತ ಸಮಯದಲ್ಲಿ ಸಲ್ಲಿಸಲು ಸಾಧ್ಯವಾಗುದಿಲ್ಲ. ಈ ಹಿನ್ನಲೆಯಲ್ಲಿ ಏ.೬ರಿಂದ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುವುದು ಹಾಗು ೪ ಸಾರ್ವಜನಿಕ ರಜಾದಿನಗಳಂದು ಸಹ ನಾಮಪತ್ರಗಳನ್ನು ಸ್ವೀಕರಿಸುವುದು ಮತ್ತು ಹಳೇಯ ಬ್ಯಾಂಕ್ ಖಾತೆಗಳನ್ನು ಮಾನ್ಯ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಚುನಾವಣಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಈಡೇರಿಸುವಂತೆ ಒತ್ತಾಯಿಸಿದ್ದಾರೆ.
              ಬಾಣದ ಗುರುತಿನ ಚಿಹ್ನೆ ನೀಡುವುದು:
     ನಗರಸಭೆ ೩೫ ವಾರ್ಡ್‌ಗಳಲ್ಲಿ ಜನತಾದಳ(ಸಂಯುಕ್ತ) ಕರ್ನಾಟಕ ಪಕ್ಷದ ವತಿಯಿಂದ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಅಭ್ಯರ್ಥಿಗಳಿಗೆ ಪಕ್ಷದ ಬಾಣದ ಗುರುತಿನ ಚಿಹ್ನೆ ನೀಡುವುದು. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರಾದ ಮಹಿಮಾ ಜೆ ಪಟೇಲ್‌ರವರು ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳಿಗೆ ಪಕ್ಷದ ಗುರುತಿನ ಚಿಹ್ನೆ ನೀಡುವಂತೆ ಶಶಿಕುಮಾರ್ ಎಸ್ ಗೌಡ ತಹಸೀಲ್ದಾರ್‌ಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಿದ್ದಾರೆ.


No comments:

Post a Comment