ಭದ್ರಾವತಿ ನಗರಸಭೆ ಚುನಾವಣೆ ೪ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಫಾರಂ ಇಲ್ಲದೆ ಶಾಸಕ ಬಿ.ಕೆ ಸಂಗಮೇಶ್ವರ್ ಸಂಬಂಧಿ ಎಚ್. ವಿದ್ಯಾ ಸೋಮವಾರ ನಾಮಪತ್ರ ಸಲ್ಲಿಸಿದರು.
ಭದ್ರಾವತಿ, ಏ. ೧೨: ನಗರಸಭೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಂದ ನಾಮಪತ್ರಗಳ ಭರಾಟೆ ಹೆಚ್ಚಾಗಿದ್ದು, ಪ್ರತಿಷ್ಠಿತ ವಾರ್ಡ್‌ಗಳಲ್ಲಿ ಒಂದಾಗಿರುವ ೪ನೇ ವಾರ್ಡ್‌ನಲ್ಲಿ ಪ್ರಮುಖ ರಾಜಕೀಯಗಳು ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿವೆ. ಶುಕ್ರವಾರ ಬಿಜೆಪಿ ಘೋಷಿತ ಅಭ್ಯರ್ಥಿಯಾಗಿರುವ ಅನುಪಮ ನಾಮಪತ್ರ ಸಲ್ಲಿಸಿದ್ದರು. ಸೋಮವಾರ ಬಿ ಫಾರಂ ಇಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್. ವಿದ್ಯಾ ನಾಮಪತ್ರ ಸಲ್ಲಿಸಿದರು.
ಅಭ್ಯರ್ಥಿಗಳಿಬ್ಬರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಅನುಪಮ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಚನ್ನೇಶ್‌ರವರ ಪತ್ನಿಯಾಗಿದ್ದಾರೆ. ವಿದ್ಯಾ ಶಾಸಕ ಬಿ.ಕೆ ಸಂಗಮೇಶ್ವರ್ ಕುಟುಂಬ ಸಂಬಂಧಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಈ ಇಬ್ಬರ ನಡುವೆ ತೀವ್ರ ಪೈಪೋಟಿ ನಡೆಯುವ ಸಾಧ್ಯತೆ ಕಂಡು ಬರುತ್ತಿದೆ.
ವಿದ್ಯಾ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾವ ಆನಂದಪ್ಪ, ಪತಿ ಹಾಲೇಶ್, ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಜಗನ್ನಾಥ್ ಕುಟುಂಬ ವರ್ಗದವರು, ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್‌ಕುಮಾರ್, ರವೀಶ್, ಬಸವರಾಜ್, ರಮಾಕಾಂತ, ಕಾಂಗ್ರೆಸ್ ಪಕ್ಷದ ಮುಖಂಡರು, ಸ್ಥಳೀಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment