ಉಕ್ಕಿನ ನಗರ ತಲುಪಿದ ಎಂಜಿನಿಯರ್ ನಾಗರಾಜ್ ಕಲಗುಟಕರ್
ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಬಾಗಲಕೋಟೆಯ ಎಂಜಿನಿಯರ್, ಸಾಮಾಜಿಕ ಕಾರ್ಯಕರ್ತ ನಾಗರಾಜ್ ಕಲಗುಟಕರ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಭದ್ರಾವತಿಯಲ್ಲಿ ಆಮ್ ಆದ್ಮಿ ಪಾರ್ಟಿ ಮುಖಂಡರು, ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.
ಭದ್ರಾವತಿ, ಏ. ೬: ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಬಾಗಲಕೋಟೆಯ ಎಂಜಿನಿಯರ್, ಸಾಮಾಜಿಕ ಕಾರ್ಯಕರ್ತ ನಾಗರಾಜ್ ಕಲಗುಟಕರ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ನಗರದ ಆಮ್ ಆದ್ಮಿ ಪಾರ್ಟಿ ಮುಖಂಡರು, ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಾಗರಾಜ್ ಕಲಗುಟಕರ್ ಸುಮಾರು ೭ ತಿಂಗಳು ಕಾಲ ಪಾದಯಾತ್ರೆ ಹಮ್ಮಿಕೊಂಡಿದ್ದು, ಒಟ್ಟು ೬ ಸಾವಿರ ಕಿ.ಮೀ. ದೂರ ಸಾಗಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಸಿ ಅಂತಿಮವಾಗಿ ವಿಜಯಪುರದಿಂದ ಮಹಾರಾಷ್ಟ್ರ ಮಾರ್ಗವಾಗಿ ದೆಹಲಿಗೆ ತೆರಳಲಿದ್ದಾರೆ.
ಚಾಮರಾಜನಗರದಿಂದ ಫೆ.೧೧ರಂದು ಪಾದಯಾತ್ರೆ ಆರಂಭಿಸಿರುವ ನಾಗರಾಜ್ ಏ.೪ರ ಭಾನುವಾರ ಉಕ್ಕಿನ ನಗರಕ್ಕೆ ಆಗಮಿಸಿದರು. ಆಮ್ ಆದ್ಮಿ ಪಾರ್ಟಿ ಸ್ಥಳಿಯ ಮುಖಂಡರು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ರೈತರ ಹೋರಾಟಕ್ಕೆ ವಿಶೇಷವಾಗಿ ಪಾದಯಾತ್ರೆ ಮೂಲಕ ಬೆಂಬಲ ವ್ಯಕ್ತಪಡಿಸುತ್ತಿರುವುದು ಶ್ಲಾಘನೀಯ ಎಂದು ಅಭಿನಂದಿಸಿದರು.
ಆಮ್ ಆದ್ಮಿ ಪಾರ್ಟಿ ಪ್ರಮುಖರಾದ ಪರಮೇಶ್ವರಚಾರ್, ಎಚ್. ರವಿಕುಮಾರ್, ಇಬ್ರಾಹಿಂ ಖಾನ್, ಅಬ್ದುಲ್ ಖದೀರ್, ಮಹಿಳಾ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕೆಎಸ್‌ಆರ್‌ಟಿಸಿ ನೌಕರರ ಹೋರಾಟಕ್ಕೆ ಬೆಂಬಲ:
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ನಡೆಸುತ್ತಿರುವ ಹೋರಾಟಕ್ಕೆ ಆಮ್ ಆದ್ಮಿ ಪಾರ್ಟಿ ಬೆಂಬಲ ವ್ಯಕ್ತಪಡಿಸಿದೆ.
ಈ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಪತ್ರಿಕೆಗೆ ಮಾಹಿತಿ ನೀಡಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನೌಕರರು ಈ ಹಿಂದೆಯೇ ಹೋರಾಟ ನಡೆಸಿದ್ದರು. ರಾಜ್ಯ ಸರ್ಕಾರ ೩ ತಿಂಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿತ್ತು. ಆದರೆ ಇದುವರೆಗೂ ಬೇಡಿಕೆ ಈಡೇರಿಸಿಲ್ಲ. ಇದೀಗ ಚುನಾವಣೆ ನೆಪದಲ್ಲಿ ಮುಂದಿನ ದಿನಗಳಲ್ಲಿ ಬೇಡಿಕೆಗಳನ್ನು ಈಡೇರಿಸಿಕೊಡುವುದಾಗಿ ಪುನಃ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಈ ಹಿನ್ನಲೆಯಲ್ಲಿ ರೈತರ ಹೋರಾಟಕ್ಕೆ ಆಮ್ ಆದ್ಮಿ ಪಾರ್ಟಿ ಬೆಂಬಲ ಸೂಚಿಸುವ ಜೊತೆಗೆ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳು, ವಿವಿಧ ರಾಜಕೀಯ ಪಕ್ಷಗಳು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
No comments:
Post a Comment