ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪ ಸುಮಾರು ೨.೧೭ ಕೋ. ರು. ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.
ಭದ್ರಾವತಿ, ಏ. ೫: ನಗರಸಭೆ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ತರಾತುರಿಯಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಅವರು ಸೋಮವಾರ ಖಾಸಗಿ ಬಸ್ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ನಗರಸಭೆ ಚುನಾವಣೆ ಹಿನ್ನಲೆಯಲ್ಲಿ ಏ.೮ರಿಂದ ನೀತಿ ಸಂಹಿತೆ ಜಾರಿಗೆ ಬರಲಿದೆ. ಏ.೧೦ರಂದು ಖಾಸಗಿ ಬಸ್ ನಿಲ್ದಾಣ ಕಾಮಗಾರಿಯ ಟೆಂಡರ್ ತೆರೆಯಲಿದ್ದು, ಏ.೧೫ರಿಂದ ಕಾಮಗಾರಿ ಆರಂಭಗೊಳ್ಳಲಿದೆ. ಮಳೆಗಾಲ ಆರಂಭಗೊಳ್ಳುವ ಮೊದಲು ಕಾಮಗಾರಿ ಮುಕ್ತಾಯಗೊಳ್ಳಬೇಕು. ಈ ಹಿನ್ನಲೆಯಲ್ಲಿ ಕಾಮಗಾರಿಗೆ ಯಾವುದೇ ರೀತಿ ತೊಂದರೆಯಾಗಬಾರದೆಂಬ ಉದ್ದೇಶದೊಂದಿಗೆ ತರಾತುರಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗುತ್ತಿದೆ ಎಂದರು.
ಹಲವಾರು ವರ್ಷಗಳಿಂದ ನಗರದಲ್ಲಿ ಖಾಸಗಿ ಬಸ್‌ನಿಲ್ದಾಣ ನಿರ್ಮಿಸಬೇಕೆಂಬ ಬೇಡಿಕೆ ಇದ್ದು, ಈ ಹಿಂದೆ ೨೦೧೨ರ ನನ್ನ ಅವಧಿಯಲ್ಲಿ ನಿಲ್ದಾಣಕ್ಕೆ ಕಾಂಕ್ರೀಟ್ ರಸ್ತೆ ನಿರ್ಮಿಸಿಕೊಡಲಾಗಿತ್ತು. ನಂತರ ೨೦೧೮ರಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸಿ ೨.೧೭ ಕೋ. ರು. ವೆಚ್ಚದಲ್ಲಿ ಬಸ್ ನಿಲ್ದಾಣಕ್ಕೆ ಅನುಮೋದನೆ ನೀಡಿದೆ ಎಂದರು.
ಇದೆ ರೀತಿ ಕೆಎಸ್‌ಆರ್‌ಟಿಸಿ ಬಸ್ ಘಟಕದಲ್ಲಿ ಸುಮಾರು ೪ ಕೋ.ರು ವೆಚ್ಚದಲ್ಲಿ ಹೈಟೆಕ್ ಮುಖ್ಯ ಬಸ್ ನಿಲ್ದಾಣ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಲಾಗಿದೆ. ಉಳಿದಂತೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಮೀಪ ಹೊಸ ಸೇತುವೆ ನಿರ್ಮಾಣ ಸೇರಿದಂತೆ ಹಲವರು ಅಭಿವೃದ್ಧಿ ಕಾರ್ಯಗಳಿಗೆ ಮಂಜೂರಾತಿ ದೊರೆತ್ತಿದೆ ಎಂದರು.
ವೇದಿಕೆಯಲ್ಲಿ ಖಾಸಗಿ ಬಸ್ ಏಜೆಂಟರ್‌ಗಳ ಸಂಘದ ಅಧ್ಯಕ್ಷ ಶ್ರೀನಿವಾಸ್, ಉದ್ಯಮಿ ಎ. ಮಾಧು, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್, ಲೋಕೇಶ್, ಪ್ರಕಾಶ್‌ರಾವ್, ಬಾಬಾಜಾನ್, ಶಿವಣ್ಣ, ಮಂಜು, ಜಾರ್ಜ್, ವೆಂಕಟೇಶ್, ಮುರುಗನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment