ಭದ್ರಾವತಿ, ಏ. ೮: ದಾವಣಗೆರೆಯಲ್ಲಿ ಏ.೧೦ ಮತ್ತು ೧೧ರಂದು ನಡೆಯಲಿರುವ ರಾಜ್ಯ ಬೆಂಚ್ ಪ್ರೆಸ್ ಸ್ಪರ್ಧೆಗೆ ಶಿವಮೊಗ್ಗ ಡಿಸ್ಟ್ರಿಕ್ಟ್ ಪವರ್‌ಲಿಫ್ಟಿಂಗ್ ಅಸೋಸಿಯೇಷನ್ ವತಿಯಿಂದ ಸ್ಟೀಲ್ ಫಿಟ್‌ನೆಸ್ ೨೪*೭ ಸುಜಿತ್‌ಕುಮಾರ್ ನೇತೃತ್ವದಲ್ಲಿ ಸ್ಪರ್ಧಾಳುಗಳನ್ನು ಆಯ್ಕೆ ಮಾಡಲಾಗಿದೆ.
೪೭ ಕೆ.ಜಿ ಸಬ್ ಜ್ಯೂನಿಯರ್ ವಿಭಾಗಕ್ಕೆ ಭದ್ರಾವತಿ ಬೊಮ್ಮನಕಟ್ಟೆ ಶಮನ್ ಷಾವಲಿ ವ್ಯಾಯಾಮ ಶಾಲೆಯ ಎಂ. ಸಾನಿಯ, ಶಿವಮೊಗ್ಗ ಸೋಲಿಟ್ ಫಿಟ್‌ನೆಸ್ ಸೆಂಟರ್‌ನ ಎಸ್. ರಜನಿ ಮತ್ತು ಡಿ. ಸಹನ ೫೭ ಕೆ.ಜಿ ಸೀನಿಯರ್ ಮತ್ತು ಜ್ಯೂನಿಯರ್ ವಿಭಾಗಕ್ಕೆ, ಎಸ್.ಕೆ ಪಲ್ಲವಿ, ಬಿ.ಜೆ ಶಂಕೇಶ್ವರಿ ೬೩ ಕೆ.ಜಿ ಸಬ್ ಜ್ಯೂನಿಯರ್ ವಿಭಾಗಕ್ಕೆ ಹಾಗು ಬಿ.ಎಚ್ ಪದ್ಮಶ್ರೀ ೮೪ ಕೆ.ಜಿ ಜ್ಯೂನಿಯರ್ ವಿಭಾಗಕ್ಕೆ ಮತ್ತು ಶಿವಮೊಗ್ಗ ಸಹ್ಯಾದ್ರಿ ಸೈನ್ಸ್ ಕಾಲೇಜಿನ ಎಸ್. ಸ್ನೇಹ ೮೪ ಕೆ.ಜಿ ಸಬ್ ಜ್ಯೂನಿಯರ್ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.
ಭದ್ರಾವತಿ ಕಾರಂತ್ ಜಿಮ್‌ನ ಲುಕ್‌ಮಾನ್ ಆಹ್ಮದ್ ೫೩ ಕೆ.ಜಿ ಹಾಗು ಲಿಂಗರಾಜು ೫೯ ಕೆ.ಜಿ ಸಬ್ ಜ್ಯೂನಿಯರ್ ವಿಭಾಗಕ್ಕೆ, ಎಸ್. ಹರ್ಷಿತ್ ೬೬ ಕೆ.ಜಿ ಸಬ್ ಜ್ಯೂನಿಯರ್, ಕೆ.ಎಲ್ ದಯಾನಂದ ೧೦೫ ಕೆ.ಜಿ ಸಬ್ ಜ್ಯೂನಿಯರ್ ಹಾಗು ಕೆ. ಪ್ರಕಾಶ್ ಕಾರಂತ್ ೮೩ ಕೆ.ಜಿ ಮಾಸ್ಟರ್-ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ ಸ್ಟೇಡಿಯಂ ಜಿಮ್‌ನ ಶಶಿಧರ್.ಎ ೭೪ ಕೆ.ಜಿ ಮಾಸ್ಟರ್-೨ ವಿಭಾಗ, ವರ್ಷಿತ್ ಎಸ್ ರಾವ್ ೯೩ ಕೆ.ಜಿ ಸಬ್ ಜ್ಯೂನಿಯರ್ ವಿಭಾಗ, ಕೆ. ಭಾಸ್ಕರ್ ೬೬ ಕೆ.ಜಿ ಮಾಸ್ಟರ್-೨ ವಿಭಾಗ ಹಾಗು ಇ. ರಕ್ಷಿತ್ ೧೦೫ ಕೆ.ಜಿ ಸಬ್ ಜ್ಯೂನಿಯರ್ ವಿಭಾಗಕ್ಕೆ, ಶಿವಮೊಗ್ಗ ಕಿಷನ್ ಬಾಡಿ ಲೈನ್‌ನ ಆರ್. ಅವಿನಾಶ್ ೬೬ ಕೆ.ಜಿ ಸೀನಿಯರ್, ಎಚ್. ಅರುಣ್ ೮೩ ಕೆ.ಜಿ ಸೀನಿಯರ್, ಸಾಗರ ಕಾರ್ಗಲ್ ಪೊಲೀಸ್ ಠಾಣೆಯ ಗಿಲ್ ಬರ್ಟ್ಸ್ ಡಯಾಸ್ ೮೩ ಕೆ.ಜಿ ಮಾಸ್ಟರ್-೨ ವಿಭಾಗಕ್ಕೆ ಹಾಗು ಭದ್ರಾವತಿ ಮಯೂರ್ ಜಿಮ್‌ನ ಶಶಿಧರ್ ಎಸ್. ೯೩ ಕೆ.ಜಿ ಮಾಸ್ಟರ್-೨ ವಿಭಾಗಕ್ಕೆ ಆಯ್ಕೆಯಾಗಿದ್ದಾರೆಂದು ಶಿವಮೊಗ್ಗ ಡಿಸ್ಟ್ರಿಕ್ಟ್ ಪವರ್‌ಲಿಫ್ಟಿಂಗ್ ಅಸೋಸಿಯೇಷನ್ ಕಾರ್ಯದರ್ಶಿ ಕೆ. ಪ್ರಕಾಶ್ ಕಾರಂತ್ ತಿಳಿಸಿದ್ದಾರೆ.
No comments:
Post a Comment