ಭದ್ರಾವತಿ ಬಸ್ ನಿಲ್ದಾಣ ಬಸ್‌ಗಳಿಲ್ಲದೆ ಬಿಕೋ ಎನ್ನುತ್ತಿರುವುದು.
ಭದ್ರಾವತಿ, ಏ. ೭: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟಕ್ಕೆ ನಗರದಲ್ಲೂ ಪೂರಕ ಬೆಂಬಲ ವ್ಯಕ್ತವಾಗಿದ್ದು, ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆಯಿಂದ ಯಾವುದೇ ಬಸ್‌ಗಳ ಸಂಚಾರ ಕಂಡು ಬರಲಿಲ್ಲ. ಇದರಿಂದಾಗಿ ದೂರದ ಊರುಗಳಿಗೆ ತೆರಳಬೇಕಾದ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗುವಂತಾಯಿತು.
ಖಾಸಗಿ ಬಸ್‌ಗಳ ಸಂಚಾರ ಎಂದಿನಂತೆ ಕಂಡು ಬಂದಿದ್ದು, ಹೊಳೆಹೊನ್ನೂರು, ಚನ್ನಗಿರಿ, ದಾವಣಗೆರೆ, ಚಿತ್ರದುರ್ಗ ಹಾಗು ಹುಣಸೇಕಟ್ಟೆ, ಶಂಕರಘಟ್ಟ ಮಾರ್ಗವಾಗಿ ಸಂಚರಿಸುವ ಖಾಸಗಿ ಬಸ್‌ಗಳಲ್ಲಿ ಹೆಚ್ಚಿನ ಪ್ರಯಾಣಿಕರು ಕಂಡು ಬಂದರು. ಉಳಿದಂತೆ ಭದ್ರಾವತಿ-ಶಿವಮೊಗ್ಗ ನಡುವೆ ಸಂಚರಿಸುವ ಪ್ರಯಣಿಕರು ಮ್ಯಾಕ್ಸಿಕ್ಯಾಬ್‌ಗಳನ್ನು ಅವಲಂಬಿಸುವಂತಾಯಿತು. ಕೆಲವರು ಸ್ವಂತ ವಾಹನಗಳಲ್ಲಿ ಸಂಚರಿಸುತ್ತಿರುವುದು ಕಂಡು ಬಂದಿತು.
No comments:
Post a Comment