ಎಚ್.ಎಂ ಮಹೇಶ್ವರಪ್ಪ
ಭದ್ರಾವತಿ, ಏ. ೨೫: ತಾಲೂಕಿನ ಅರಬಿಳಚಿ ಗ್ರಾಮದ ಹಿರಿಯ ಮುಖಂಡರಾದ ಎಚ್.ಎಂ ಮಹೇಶ್ವರಪ್ಪ(೭೮) ಭಾನುವಾರ ಮಧ್ಯಾಹ್ನ ನಿಧನ ಹೊಂದಿದರು.
ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಪತ್ನಿ ಹಾಗು ಅರಬಿಳಚಿ ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎಂ ಸದಾಶಿವ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಏ.೨೬ರ ಮಧ್ಯಾಹ್ನ ೧೨ ಗಂಟೆಗೆ ನಡೆಯಲಿದೆ.
ಮಹೇಶ್ವರಪ್ಪ ಮಾಜಿ ಸಚಿವ ದಿವಂಗತ ಬಸವಣ್ಯಪ್ಪನವರ ಆಪ್ತರಲ್ಲಿ ಒಬ್ಬರಾಗಿದ್ದರು. ಇವರ ನಿಧನಕ್ಕೆ ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment