ಭದ್ರಾವತಿ, ಏ. ೧೮: ನಗರಸಭೆ ೩೫ ವಾರ್ಡ್‌ಗಳ ಚುನಾವಣೆ ಸಂಬಂಧ ನಾಮಪತ್ರ ಹಿಂಪಡೆಯಲು ಏ.೧೯ ಕೊನೆಯ ದಿನವಾಗಿದ್ದು, ನಾಮಪತ್ರ ಪರಿಶೀಲನೆ ನಂತರ ೧೯೫ ನಾಮಪತ್ರಗಳು ಕ್ರಮ ಬದ್ದವಾಗಿವೆ. ಸೋಮವಾರ ಸಂಜೆ ವೇಳೆಗೆ ಅಂತಿಮ ಕಣದಲ್ಲಿರುವವರ ಮಾಹಿತಿ ತಿಳಿದು ಬರಲಿದೆ.
ಈಗಾಗಲೇ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮೂರು ಪಕ್ಷಗಳು ೩೫ ವಾರ್ಡ್‌ಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಉಳಿದಂತೆ ೯೦ ಅಭ್ಯರ್ಥಿಗಳ ಪೈಕಿ ಎಎಪಿ-೭, ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ-೨, ಎಐಎಂಐಎಂ-೨, ಎಸ್‌ಡಿಪಿಐ-೩ ಮತ್ತು ಪಕ್ಷೇತರ-೭೬ ಅಭ್ಯರ್ಥಿಗಳು ಇದ್ದು, ಪಕ್ಷೇತರ ಅಭ್ಯರ್ಥಿಗಳ ಪೈಕಿ ಬಹಳಷ್ಟು ಮಂದಿ ನಾಮಪತ್ರ ಹಿಂಪಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಈ ನಡುವೆ ಪ್ರತಿ ಬಾರಿ ೨ ರಿಂದ ೩ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗುತ್ತಿರುವುದು ಗಮನಾರ್ಹ ಸಂಗತಿಯಾಗಿದೆ.
No comments:
Post a Comment