ಭದ್ರಾವತಿ, ಮೇ. ೨೫: ಮೊದಲ ಹಂತದ ಲಾಕ್‌ಡೌನ್ ಮುಗಿದು ಎರಡನೇ ಹಂತದ ಲಾಕ್‌ಡೌನ್ ಜಾಲ್ತಿಯಲ್ಲಿದ್ದು, ಆದರೂ ಸಹ ತಾಲೂಕಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿಲ್ಲ. ಮಂಗಳವಾರ ೧೩೫ ಸೋಂಕು ದೃಢಪಟ್ಟಿದೆ.
ಒಟ್ಟು ೩೫೨ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ ೧೩೫ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು ೮೮ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಒಂದು ಸಾವು ಸಂಭವಿಸಿದೆ.
ತಾಲೂಕಿನಲ್ಲಿ ಒಟ್ಟು ಸಾವಿನ ಸಂಖ್ಯೆ ಶತಕ ದಾಟಿದ್ದು, ೧೦೧ ಮಂದಿ ಮೃತಪಟ್ಟಿದ್ದಾರೆ. ಒಟ್ಟು ೩೨೭ ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ತಾಲೂಕಿನ ನಗರ ವ್ಯಾಪ್ತಿಯಲ್ಲಿ ಒಟ್ಟು ೬೬ ಕಂಟೈನ್‌ಮೆಂಟ್ ಜೋನ್‌ಗಳಿವೆ.
No comments:
Post a Comment