ಬಿ.ವಿ ಗಿರೀಶ್
ಭದ್ರಾವತಿ, ಮೇ. ೨: ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಕುಮಾರ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ, ಹೋರಾಟಗಾರ ಬಿ.ವಿ ಗಿರೀಶ್(೩೬) ಭಾನುವಾರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಪತ್ನಿ, ಓರ್ವ ಪುತ್ರ ಹಾಗು ಓರ್ವ ಪುತ್ರಿಯನ್ನು ಹೊಂದಿದ್ದರು. ಹಲವು ವರ್ಷಗಳಿಂದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾಗಿ ಅನೇಕ ಕನ್ನಡಪರ ಹಾಗು ಸಾಮಾಜಿಕ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ ಮಾನವ ಹಕ್ಕುಗಳ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಹ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಇವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ, ಮಾನವ ಹಕ್ಕುಗಳ ಹೋರಾಟ ಸಮಿತಿ ಸೇರಿದಂತೆ ನಗರದ ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment