ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕೋವಿಡ್-೧೯ ಕಾರ್ಯಪಡೆ ವತಿಯಿಂದ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕೂಡ್ಲಿಗೆರೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪಥ ಸಂಚಲನ ನಡೆಸಲಾಯಿತು.
ಭದ್ರಾವತಿ, ಮೇ. ೨೭: ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕೋವಿಡ್-೧೯ ಕಾರ್ಯಪಡೆ ವತಿಯಿಂದ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕೂಡ್ಲಿಗೆರೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪಥ ಸಂಚಲನ ನಡೆಸಲಾಯಿತು.
ಈಗಾಗಲೇ ಕೂಡ್ಲಿಗೆರೆ ಗ್ರಾಮದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡಿದ್ದು, ರೋಗ ನಿರೋಧಕ ಔಷಧ ಸಿಂಪಡಿಸುವ ಜೊತೆಗೆ ಸೀಲ್‌ಡೌನ್ ಸಹ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಗ್ರಾಮಸ್ಥರಲ್ಲಿ ಇನ್ನೂ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ವ್ಯಾಪಕ ಪ್ರಚಾರ ನಡೆಸಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಉಪ ತಹಸೀಲ್ದಾರ್ ನಾರಾಯಣಗೌಡ, ರಾಜಸ್ವ ನಿರೀಕ್ಷಕ ಜಗದೀಶ್, ಗ್ರಾಮ ಲೆಕ್ಕಾಧಿಕಾರಿ ಜ್ಞಾನೇಶ್ವರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್, ಪಂಚಾಯಿತಿ ಸದಸ್ಯರಾದ ರುದ್ರೇಶ್, ಆರ್.ಎನ್ ಸ್ವಾಮಿನಾಥನ್, ಎಸ್.ಡಿ.ಎಂ.ಸಿ ಅಧ್ಯಕ್ಷ ವೀರಪ್ಪನ್, ಪೊಲೀಸ್ ಇಲಾಖೆಯ ಜಗದೀಶ್, ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment