ಭದ್ರಾವತಿ, ಮೇ. ೨೭: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇನ್ನೂ ಇಳಿಮುಖವಾಗದ ಹಿನ್ನಲೆಯಲ್ಲಿ ಪುನಃ ಎರಡು ದಿನ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.
ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಅವರು ಮೇ.೨೯ ಮತ್ತು ೩೦ ಶನಿವಾರ ಹಾಗು ಭಾನುವಾರ ೨ ದಿನ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಿ ಆದೇಶಿಸಿದ್ದಾರೆ. ಹಾಲು ಮತ್ತು ಔಷಧ ಅಂಗಡಿಗಳು ಹೊರತುಪಡಿಸಿ ಉಳಿದ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯುವಂತಿಲ್ಲ. ಅಲ್ಲದೆ ಸಾರ್ವಜನಿಕರು ವಿನಾಕಾರಣ ತಿರುಗಾಡುವಂತಿಲ್ಲ. ಸಂಪೂರ್ಣ ಲಾಕ್‌ಡೌನ್‌ಗೆ ಎಲ್ಲರೂ ಸಹಕಾರ ನೀಡುವಂತೆ ಕೋರಲಾಗಿದೆ.
No comments:
Post a Comment