ಭದ್ರಾವತಿ, ಮೇ. ೩೧: ತಾಲೂಕಿನಲ್ಲಿ ಇದೀಗ ಕೊರೋನಾ ಸೋಂಕು ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ. ಸೋಮವಾರ ೮೨ ಸೋಂಕು ಪತ್ತೆಯಾಗಿದ್ದು, ಒಂದೇ ದಿನ ೬ ಮಂದಿ ಬಲಿಯಾಗಿದ್ದಾರೆ.
ಸುಮಾರು ೧೦ ದಿನಗಳಿಂದ ನೂರು, ಇನ್ನೂರರ ಗಡಿಯಾಚೆಯಲ್ಲೇ ಇದ್ದ ಸೋಂಕಿನ ಪ್ರಮಾಣ ಇದೀಗ ಕಡಿಮೆಯಾಗಿದೆ. ಒಟ್ಟು ೪೪೦ ಮಂದಿಯ ಮಾದರಿ ಸಂಗ್ರಹಿಸಲಾಗಿದ್ದು, ೮೨ ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ೭೬ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ೪೯೩೦ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ೪೨೮೫ ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ೬೪೫ ಸಕ್ರಿಯ ಪ್ರಕರಣಗಳಿದ್ದು, ಒಂದೇ ದಿನ ೬ ಮಂದಿ ಬಲಿಯಾಗಿದ್ದಾರೆ.
ತಾಲೂಕಿನಲ್ಲಿ ಇದುವರೆಗೂ ೧೩೨ ಮಂದಿ ಮೃತಪಟ್ಟಿದ್ದು, ೩೮೬ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರ ಭಾಗದಲ್ಲಿ ೮೪ ಹಾಗು ಗ್ರಾಮಾಂತರ ಭಾಗದಲ್ಲಿ ೨೮ ಕಂಟೈನ್‌ಮೆಂಟ್ ಜೋನ್‌ಗಳಿವೆ.
No comments:
Post a Comment