ಭದ್ರಾವತಿಯಲ್ಲಿ ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬದ ಹಿರಿಯ ಜೀವಿಗಳ ನೆರವಿಗೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರ ಪುತ್ರ ಎಂ.ಎ ಅಜಿತ್ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಭದ್ರಾವತಿ, ಮೇ. ೨೩: ಕೊರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಕುಟುಂಬದ ಹಿರಿಯ ಜೀವಿಗಳ ನೆರವಿಗೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರ ಪುತ್ರ ಎಂ.ಎ ಅಜಿತ್ ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಸಾಮಾಜಿಕ ಜಾಲತಾಣವೊಂದರ ನಿರ್ವಾಹಕರಿಂದ ಹಿರಿಯ ಜೀವಿಗಳು ಸಂಕಷ್ಟದಲ್ಲಿರುವ ಮಾಹಿತಿ ಲಭಿಸಿದ ತಕ್ಷಣ ನಗರಸಭೆ ಮಾಜಿ ಸದಸ್ಯರಾದ ಎಂ.ಎ ಅಜಿತ್ ತಕ್ಷಣ ನೆರವಿಗೆ ಧಾವಿಸಿದ್ದಾರೆ.
ಕಳೆದ ವರ್ಷ ಲಾಕ್‌ಡೌನ್ ಸಂದರ್ಭದಲ್ಲಿ ಸ್ವತಃ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಅವರೇ ಕ್ಷೇತ್ರದಾದ್ಯಂತ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಿದ್ದರು. ಇದೀಗ ಅವರಿಲ್ಲದ ಸಂದರ್ಭದಲ್ಲಿ ಪುತ್ರ ಎಂ.ಎ ಅಜಿತ್ ತಮ್ಮ ಕೈಲಾದಷ್ಟು ಮಟ್ಟಿಗೆ ನೆರವಿಗೆ ಮುಂದಾಗಿದ್ದಾರೆ.
No comments:
Post a Comment