ವಸುಧ ಮುಕುಂದ್
ಭದ್ರಾವತಿ, ಮೇ. ೨: ಮಾಜಿ ಶಾಸಕ ಮಾಧವಚಾರ್‌ರವರ ಸೊಸೆ, ಹಳೇನಗರ ಮಹಿಳಾ ಸೇವಾ ಸಮಾಜದ ಹಿರಿಯ ಸದಸ್ಯೆ ವಸುಧ ಮುಕುಂದ್(೬೩) ಶನಿವಾರ ಸಂಜೆ ನಿಧನ ಹೊಂದಿದರು.
ಇಬ್ಬರು ಗಂಡು ಮಕ್ಕಳು, ತಾಯಿ, ಸಹೋದರ, ಸಹೋದರಿಯರನ್ನು ಹೊಂದಿದ್ದರು. ೩-೪ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಹಳೇನಗರ ಮಹಿಳಾ ಸೇವಾ ಸಮಾಜ, ಬ್ರಾಹ್ಮಣ ಮಹಾಸಭಾ(ವಿಪ್ರ) ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment